ಯೋಹಾನನು Chapter 13 KANIRV Bible Verse Images

ಯೋಹಾನನು 13 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 13 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 13:1 (KANIRV)
Square Portrait Landscape 4K UHD
ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.

ಯೋಹಾನನು 13:2 (KANIRV)
Square Portrait Landscape 4K UHD
ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.

ಯೋಹಾನನು 13:3 (KANIRV)
Square Portrait Landscape 4K UHD
ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.

ಯೋಹಾನನು 13:4 (KANIRV)
Square Portrait Landscape 4K UHD
ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.

ಯೋಹಾನನು 13:5 (KANIRV)
Square Portrait Landscape 4K UHD
ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.

ಯೋಹಾನನು 13:6 (KANIRV)
Square Portrait Landscape 4K UHD
ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.

ಯೋಹಾನನು 13:7 (KANIRV)
Square Portrait Landscape 4K UHD
ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.

ಯೋಹಾನನು 13:8 (KANIRV)
Square Portrait Landscape 4K UHD
ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.

ಯೋಹಾನನು 13:9 (KANIRV)
Square Portrait Landscape 4K UHD
ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.

ಯೋಹಾನನು 13:10 (KANIRV)
Square Portrait Landscape 4K UHD
ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.

ಯೋಹಾನನು 13:11 (KANIRV)
Square Portrait Landscape 4K UHD
ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.

ಯೋಹಾನನು 13:12 (KANIRV)
Square Portrait Landscape 4K UHD
ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?

ಯೋಹಾನನು 13:13 (KANIRV)
Square Portrait Landscape 4K UHD
ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.

ಯೋಹಾನನು 13:14 (KANIRV)
Square Portrait Landscape 4K UHD
ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.

ಯೋಹಾನನು 13:15 (KANIRV)
Square Portrait Landscape 4K UHD
ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.

ಯೋಹಾನನು 13:16 (KANIRV)
Square Portrait Landscape 4K UHD
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.

ಯೋಹಾನನು 13:17 (KANIRV)
Square Portrait Landscape 4K UHD
ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.

ಯೋಹಾನನು 13:18 (KANIRV)
Square Portrait Landscape 4K UHD
ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.

ಯೋಹಾನನು 13:19 (KANIRV)
Square Portrait Landscape 4K UHD
ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.

ಯೋಹಾನನು 13:20 (KANIRV)
Square Portrait Landscape 4K UHD
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”

ಯೋಹಾನನು 13:21 (KANIRV)
Square Portrait Landscape 4K UHD
ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನುನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.

ಯೋಹಾನನು 13:22 (KANIRV)
Square Portrait Landscape 4K UHD
ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.

ಯೋಹಾನನು 13:23 (KANIRV)
Square Portrait Landscape 4K UHD
ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.

ಯೋಹಾನನು 13:24 (KANIRV)
Square Portrait Landscape 4K UHD
ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು.

ಯೋಹಾನನು 13:25 (KANIRV)
Square Portrait Landscape 4K UHD
ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.

ಯೋಹಾನನು 13:26 (KANIRV)
Square Portrait Landscape 4K UHD
ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.

ಯೋಹಾನನು 13:27 (KANIRV)
Square Portrait Landscape 4K UHD
ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.

ಯೋಹಾನನು 13:28 (KANIRV)
Square Portrait Landscape 4K UHD
ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.

ಯೋಹಾನನು 13:29 (KANIRV)
Square Portrait Landscape 4K UHD
ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.

ಯೋಹಾನನು 13:30 (KANIRV)
Square Portrait Landscape 4K UHD
ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.

ಯೋಹಾನನು 13:31 (KANIRV)
Square Portrait Landscape 4K UHD
ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತುದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.

ಯೋಹಾನನು 13:32 (KANIRV)
Square Portrait Landscape 4K UHD
ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನುತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.

ಯೋಹಾನನು 13:33 (KANIRV)
Square Portrait Landscape 4K UHD
ನನ್ನ ಮಕ್ಕಳೇ,ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.

ಯೋಹಾನನು 13:34 (KANIRV)
Square Portrait Landscape 4K UHD
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.

ಯೋಹಾನನು 13:35 (KANIRV)
Square Portrait Landscape 4K UHD
ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.

ಯೋಹಾನನು 13:36 (KANIRV)
Square Portrait Landscape 4K UHD
ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.

ಯೋಹಾನನು 13:37 (KANIRV)
Square Portrait Landscape 4K UHD
ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.

ಯೋಹಾನನು 13:38 (KANIRV)
Square Portrait Landscape 4K UHD
ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.

Available Bible Translations

American Standard Version
John 13 (ASV) »
King James Version
John 13 (KJV) »
GOD’S WORD® (GW)
John 13 (GW) »
Berean Bible
John 13 (BSB) »
World English Bible
John 13 (WEB) »
Louis Segond 1910
Jean 13 (LSG) »
इंडियन रिवाइज्ड वर्जन - हिंदी
यूहन्ना 13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 13 (PANIRV) »
ভারতীয় সংশোধিত সংস্করণ - বাংলা
যোহন 13 (BENIRV) »
இந்தியன் ரீவைஸ்டு வேர்ஷன் - தமிழ்
யோவான் 13 (TAMIRV) »
इंडियन रिवाइज्ड वर्जन - मराठी
योहान 13 (MARIRV) »
ఇండియన్ రేవిజ్డ్ వెర్షన్ - తెలుగు
యోహాను 13 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 13 (GUJIRV) »
الكتاب المقدس باللغة العربية، فان دايك
يوحنَّا 13 (AVD) »
Bíblia Sagrada Português
João 13 (BSL) »
Kinh Thánh: Tiếng Việt
Giăng 13 (VIE) »
Reina Valera Antigua
Juan 13 (RVA) »
La Sacra Bibbia
Giovanni 13 (RIV) »
圣 经 简体中文和合本
约 翰 福 音 13 (CUVS) »
聖 經 繁體中文和合本
約 翰 福 音 13 (CUVT) »
Bibla e Shenjtë
Gjoni 13 (ALB) »
Svenska Bibeln 1917
Johannes 13 (SV1917) »
Библия на русском
Иоанна 13 (RUSV) »
Українська Біблія
Івана 13 (UKR) »
Szent Biblia - Magyar
János 13 (KAR) »
Българска Библия
Йоан 13 (BULG) »
Biblia Takatifu
Yohana 13 (SWHULB) »
Kitaabka Quduuska Ah
Yooxanaa 13 (SOM) »
De Heilige Schrift
Johannes 13 (NLD) »
Dansk Bibel 1871
Johannes 13 (DA1871) »

ಯೋಹಾನನು (KANIRV) Chapter Selection

KANIRV Book Selection List