ಯೋಹಾನನು Chapter 14 KANIRV Bible Verse Images

ಯೋಹಾನನು 14 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 14 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 14:1 (KANIRV)
Square Portrait Landscape 4K UHD
“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಯೋಹಾನನು 14:2 (KANIRV)
Square Portrait Landscape 4K UHD
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!

ಯೋಹಾನನು 14:3 (KANIRV)
Square Portrait Landscape 4K UHD
ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನುನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.

ಯೋಹಾನನು 14:4 (KANIRV)
Square Portrait Landscape 4K UHD
ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.

ಯೋಹಾನನು 14:5 (KANIRV)
Square Portrait Landscape 4K UHD
ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,

ಯೋಹಾನನು 14:6 (KANIRV)
Square Portrait Landscape 4K UHD
ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

ಯೋಹಾನನು 14:7 (KANIRV)
Square Portrait Landscape 4K UHD
ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.

ಯೋಹಾನನು 14:8 (KANIRV)
Square Portrait Landscape 4K UHD
ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.

ಯೋಹಾನನು 14:9 (KANIRV)
Square Portrait Landscape 4K UHD
ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?

ಯೋಹಾನನು 14:10 (KANIRV)
Square Portrait Landscape 4K UHD
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.

ಯೋಹಾನನು 14:11 (KANIRV)
Square Portrait Landscape 4K UHD
ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.

ಯೋಹಾನನು 14:12 (KANIRV)
Square Portrait Landscape 4K UHD
“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.

ಯೋಹಾನನು 14:13 (KANIRV)
Square Portrait Landscape 4K UHD
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.

ಯೋಹಾನನು 14:14 (KANIRV)
Square Portrait Landscape 4K UHD
ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.

ಯೋಹಾನನು 14:15 (KANIRV)
Square Portrait Landscape 4K UHD
“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.

ಯೋಹಾನನು 14:16 (KANIRV)
Square Portrait Landscape 4K UHD
ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.

ಯೋಹಾನನು 14:17 (KANIRV)
Square Portrait Landscape 4K UHD
ಆ ಸಹಾಯಕನು ಯಾರೆಂದರೆಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.

ಯೋಹಾನನು 14:18 (KANIRV)
Square Portrait Landscape 4K UHD
“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.

ಯೋಹಾನನು 14:19 (KANIRV)
Square Portrait Landscape 4K UHD
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.

ಯೋಹಾನನು 14:20 (KANIRV)
Square Portrait Landscape 4K UHD
ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.

ಯೋಹಾನನು 14:21 (KANIRV)
Square Portrait Landscape 4K UHD
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.

ಯೋಹಾನನು 14:22 (KANIRV)
Square Portrait Landscape 4K UHD
ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.

ಯೋಹಾನನು 14:23 (KANIRV)
Square Portrait Landscape 4K UHD
ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.

ಯೋಹಾನನು 14:24 (KANIRV)
Square Portrait Landscape 4K UHD
ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.

ಯೋಹಾನನು 14:25 (KANIRV)
Square Portrait Landscape 4K UHD
“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.

ಯೋಹಾನನು 14:26 (KANIRV)
Square Portrait Landscape 4K UHD
ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

ಯೋಹಾನನು 14:27 (KANIRV)
Square Portrait Landscape 4K UHD
“ನಾನು ನನ್ನಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಯೋಹಾನನು 14:28 (KANIRV)
Square Portrait Landscape 4K UHD
ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.

ಯೋಹಾನನು 14:29 (KANIRV)
Square Portrait Landscape 4K UHD
ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.

ಯೋಹಾನನು 14:30 (KANIRV)
Square Portrait Landscape 4K UHD
ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.

ಯೋಹಾನನು 14:31 (KANIRV)
Square Portrait Landscape 4K UHD
ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.

Available Bible Translations

American Standard Version (ASV)
John 14 (ASV) »
King James Version (KJV)
John 14 (KJV) »
GOD’S WORD® (GW)
John 14 (GW) »
Berean Bible (BSB)
John 14 (BSB) »
World English Bible (WEB)
John 14 (WEB) »
French Bible (LSG)
Jean 14 (LSG) »
German Bible (LUTH1912)
Johannes 14 (LUTH1912) »
Bengali Bible (BENIRV)
যোহন 14 (BENIRV) »
Marathi Bible (MARIRV)
योहान 14 (MARIRV) »
Gujarati Bible (GUJIRV)
યોહાન 14 (GUJIRV) »
Arabic Bible (AVD)
يوحنَّا 14 (AVD) »
Portuguese Bible (BSL)
João 14 (BSL) »
Vietnamese Bible (VIE)
Giăng 14 (VIE) »
Spanish Bible (RVA)
Juan 14 (RVA) »
Italian Bible (RIV)
Giovanni 14 (RIV) »
Chinese Simplified (CUVS)
约 翰 福 音 14 (CUVS) »
Chinese Traditional (CUVT)
約 翰 福 音 14 (CUVT) »
Albanian Bible (ALB)
Gjoni 14 (ALB) »
Swedish Bible (SV1917)
Johannes 14 (SV1917) »
Russian Bible (RUSV)
Иоанна 14 (RUSV) »
Ukrainian Bible (UKR)
Івана 14 (UKR) »
Hungarian Bible (KAR)
János 14 (KAR) »
Bulgarian Bible (BULG)
Йоан 14 (BULG) »
Norwegian Bible (NORSK)
Johannes 14 (NORSK) »

ಯೋಹಾನನು (KANIRV) Chapter Selection

KANIRV Book Selection List