ಯೋಹಾನನು Chapter 15 KANIRV Bible Verse Images

ಯೋಹಾನನು 15 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 15 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 15:1 (KANIRV)
Square Portrait Landscape 4K UHD
“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.

ಯೋಹಾನನು 15:2 (KANIRV)
Square Portrait Landscape 4K UHD
ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.

ಯೋಹಾನನು 15:3 (KANIRV)
Square Portrait Landscape 4K UHD
ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.

ಯೋಹಾನನು 15:4 (KANIRV)
Square Portrait Landscape 4K UHD
ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಯೋಹಾನನು 15:5 (KANIRV)
Square Portrait Landscape 4K UHD
ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.

ಯೋಹಾನನು 15:6 (KANIRV)
Square Portrait Landscape 4K UHD
ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.

ಯೋಹಾನನು 15:7 (KANIRV)
Square Portrait Landscape 4K UHD
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.

ಯೋಹಾನನು 15:8 (KANIRV)
Square Portrait Landscape 4K UHD
ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.

ಯೋಹಾನನು 15:9 (KANIRV)
Square Portrait Landscape 4K UHD
“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.

ಯೋಹಾನನು 15:10 (KANIRV)
Square Portrait Landscape 4K UHD
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

ಯೋಹಾನನು 15:11 (KANIRV)
Square Portrait Landscape 4K UHD
ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.

ಯೋಹಾನನು 15:12 (KANIRV)
Square Portrait Landscape 4K UHD
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇನನ್ನ ಆಜ್ಞೆಯಾಗಿದೆ.

ಯೋಹಾನನು 15:13 (KANIRV)
Square Portrait Landscape 4K UHD
ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.

ಯೋಹಾನನು 15:14 (KANIRV)
Square Portrait Landscape 4K UHD
ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.

ಯೋಹಾನನು 15:15 (KANIRV)
Square Portrait Landscape 4K UHD
ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.

ಯೋಹಾನನು 15:16 (KANIRV)
Square Portrait Landscape 4K UHD
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.

ಯೋಹಾನನು 15:17 (KANIRV)
Square Portrait Landscape 4K UHD
ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.

ಯೋಹಾನನು 15:18 (KANIRV)
Square Portrait Landscape 4K UHD
“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.

ಯೋಹಾನನು 15:19 (KANIRV)
Square Portrait Landscape 4K UHD
ನೀವುಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.

ಯೋಹಾನನು 15:20 (KANIRV)
Square Portrait Landscape 4K UHD
ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.

ಯೋಹಾನನು 15:21 (KANIRV)
Square Portrait Landscape 4K UHD
ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.

ಯೋಹಾನನು 15:22 (KANIRV)
Square Portrait Landscape 4K UHD
ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.

ಯೋಹಾನನು 15:23 (KANIRV)
Square Portrait Landscape 4K UHD
ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.

ಯೋಹಾನನು 15:24 (KANIRV)
Square Portrait Landscape 4K UHD
ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ

ಯೋಹಾನನು 15:25 (KANIRV)
Square Portrait Landscape 4K UHD
‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.

ಯೋಹಾನನು 15:26 (KANIRV)
Square Portrait Landscape 4K UHD
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.

ಯೋಹಾನನು 15:27 (KANIRV)
Square Portrait Landscape 4K UHD
ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.

Available Bible Translations

American Standard Version (ASV)
John 15 (ASV) »
King James Version (KJV)
John 15 (KJV) »
GOD’S WORD® (GW)
John 15 (GW) »
Berean Bible (BSB)
John 15 (BSB) »
World English Bible (WEB)
John 15 (WEB) »
French Bible (LSG)
Jean 15 (LSG) »
German Bible (LUTH1912)
Johannes 15 (LUTH1912) »
Bengali Bible (BENIRV)
যোহন 15 (BENIRV) »
Marathi Bible (MARIRV)
योहान 15 (MARIRV) »
Gujarati Bible (GUJIRV)
યોહાન 15 (GUJIRV) »
Arabic Bible (AVD)
يوحنَّا 15 (AVD) »
Portuguese Bible (BSL)
João 15 (BSL) »
Vietnamese Bible (VIE)
Giăng 15 (VIE) »
Spanish Bible (RVA)
Juan 15 (RVA) »
Italian Bible (RIV)
Giovanni 15 (RIV) »
Chinese Simplified (CUVS)
约 翰 福 音 15 (CUVS) »
Chinese Traditional (CUVT)
約 翰 福 音 15 (CUVT) »
Albanian Bible (ALB)
Gjoni 15 (ALB) »
Swedish Bible (SV1917)
Johannes 15 (SV1917) »
Russian Bible (RUSV)
Иоанна 15 (RUSV) »
Ukrainian Bible (UKR)
Івана 15 (UKR) »
Hungarian Bible (KAR)
János 15 (KAR) »
Bulgarian Bible (BULG)
Йоан 15 (BULG) »
Norwegian Bible (NORSK)
Johannes 15 (NORSK) »

ಯೋಹಾನನು (KANIRV) Chapter Selection

KANIRV Book Selection List