ಯೋಹಾನನು 17 KANIRV
ಯೋಹಾನನು Chapter 17 KANIRV Bible Verse Images
Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.
Creative Commons License
- Title: Indian Revised Version (IRV) Kannada - 2019
- Creator: Bridge Connectivity Solutions Pvt. Ltd. (BCS)
- Source: Digital Bible Library
- License: CC BY-SA 4.0
Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).
In addition, we would like to give very special thanks to eBible.org for making the Kannada Indian Revised Version Bible available in MySQL format.
Square Portrait Landscape 4K UHD
ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ,ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
Square Portrait Landscape 4K UHD
ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.
Square Portrait Landscape 4K UHD
ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.
Square Portrait Landscape 4K UHD
ನೀನು ನನಗೆ ಕೊಟ್ಟ ಕೆಲಸವನ್ನು ನಾನುನೆರವೇರಿಸಿಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.
Square Portrait Landscape 4K UHD
ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.
Square Portrait Landscape 4K UHD
“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.
Square Portrait Landscape 4K UHD
ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
Square Portrait Landscape 4K UHD
ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತುನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.
Square Portrait Landscape 4K UHD
ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
Square Portrait Landscape 4K UHD
ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
Square Portrait Landscape 4K UHD
ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
Square Portrait Landscape 4K UHD
ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
Square Portrait Landscape 4K UHD
“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
Square Portrait Landscape 4K UHD
ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
Square Portrait Landscape 4K UHD
ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
Square Portrait Landscape 4K UHD
ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
Square Portrait Landscape 4K UHD
ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
Square Portrait Landscape 4K UHD
ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.
Square Portrait Landscape 4K UHD
“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.
Square Portrait Landscape 4K UHD
ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
Square Portrait Landscape 4K UHD
ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
Square Portrait Landscape 4K UHD
ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.
Square Portrait Landscape 4K UHD
ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
Square Portrait Landscape 4K UHD
ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.
Square Portrait Landscape 4K UHD
ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.
Available Bible Translations
John 17 (ASV) »
John 17 (KJV) »
John 17 (GW) »
John 17 (BSB) »
John 17 (WEB) »
Jean 17 (LSG) »
Johannes 17 (LUTH1912) »
यूहन्ना 17 (HINIRV) »
ਯੂਹੰਨਾ 17 (PANIRV) »
যোহন 17 (BENIRV) »
யோவான் 17 (TAMIRV) »
योहान 17 (MARIRV) »
యోహాను 17 (TELIRV) »
યોહાન 17 (GUJIRV) »
يوحنَّا 17 (AVD) »
הבשורה על־פי יוחנן 17 (HEB) »
João 17 (BSL) »
Giăng 17 (VIE) »
Juan 17 (RVA) »
Giovanni 17 (RIV) »
约 翰 福 音 17 (CUVS) »
約 翰 福 音 17 (CUVT) »
Gjoni 17 (ALB) »
Johannes 17 (SV1917) »
Иоанна 17 (RUSV) »
Івана 17 (UKR) »
János 17 (KAR) »
Йоан 17 (BULG) »
ヨハネによる福音書 17 (JPN) »
Johannes 17 (NORSK) »