ಯೋಹಾನನು Chapter 18 KANIRV Bible Verse Images

ಯೋಹಾನನು 18 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 18 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 18:1 (KANIRV)
Square Portrait Landscape 4K UHD
ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.

ಯೋಹಾನನು 18:2 (KANIRV)
Square Portrait Landscape 4K UHD
ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.

ಯೋಹಾನನು 18:3 (KANIRV)
Square Portrait Landscape 4K UHD
ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.

ಯೋಹಾನನು 18:4 (KANIRV)
Square Portrait Landscape 4K UHD
ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.

ಯೋಹಾನನು 18:5 (KANIRV)
Square Portrait Landscape 4K UHD
ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.

ಯೋಹಾನನು 18:6 (KANIRV)
Square Portrait Landscape 4K UHD
ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.

ಯೋಹಾನನು 18:7 (KANIRV)
Square Portrait Landscape 4K UHD
ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.

ಯೋಹಾನನು 18:8 (KANIRV)
Square Portrait Landscape 4K UHD
ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.

ಯೋಹಾನನು 18:9 (KANIRV)
Square Portrait Landscape 4K UHD
ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.

ಯೋಹಾನನು 18:10 (KANIRV)
Square Portrait Landscape 4K UHD
ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.

ಯೋಹಾನನು 18:11 (KANIRV)
Square Portrait Landscape 4K UHD
ಆಗ ಯೇಸು ಪೇತ್ರನಿಗೆ, “ಕತ್ತಿಯನ್ನುಒರೆಯಲ್ಲಿ ಹಾಕು.ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.

ಯೋಹಾನನು 18:12 (KANIRV)
Square Portrait Landscape 4K UHD
ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.

ಯೋಹಾನನು 18:13 (KANIRV)
Square Portrait Landscape 4K UHD
ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.

ಯೋಹಾನನು 18:14 (KANIRV)
Square Portrait Landscape 4K UHD
ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.

ಯೋಹಾನನು 18:15 (KANIRV)
Square Portrait Landscape 4K UHD
ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.

ಯೋಹಾನನು 18:16 (KANIRV)
Square Portrait Landscape 4K UHD
ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.

ಯೋಹಾನನು 18:17 (KANIRV)
Square Portrait Landscape 4K UHD
ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.

ಯೋಹಾನನು 18:18 (KANIRV)
Square Portrait Landscape 4K UHD
ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಯೋಹಾನನು 18:19 (KANIRV)
Square Portrait Landscape 4K UHD
ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.

ಯೋಹಾನನು 18:20 (KANIRV)
Square Portrait Landscape 4K UHD
ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.

ಯೋಹಾನನು 18:21 (KANIRV)
Square Portrait Landscape 4K UHD
ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.

ಯೋಹಾನನು 18:22 (KANIRV)
Square Portrait Landscape 4K UHD
ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.

ಯೋಹಾನನು 18:23 (KANIRV)
Square Portrait Landscape 4K UHD
ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.

ಯೋಹಾನನು 18:24 (KANIRV)
Square Portrait Landscape 4K UHD
ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.

ಯೋಹಾನನು 18:25 (KANIRV)
Square Portrait Landscape 4K UHD
ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.

ಯೋಹಾನನು 18:26 (KANIRV)
Square Portrait Landscape 4K UHD
ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.

ಯೋಹಾನನು 18:27 (KANIRV)
Square Portrait Landscape 4K UHD
ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.

ಯೋಹಾನನು 18:28 (KANIRV)
Square Portrait Landscape 4K UHD
ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.

ಯೋಹಾನನು 18:29 (KANIRV)
Square Portrait Landscape 4K UHD
ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.

ಯೋಹಾನನು 18:30 (KANIRV)
Square Portrait Landscape 4K UHD
ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.

ಯೋಹಾನನು 18:31 (KANIRV)
Square Portrait Landscape 4K UHD
ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.

ಯೋಹಾನನು 18:32 (KANIRV)
Square Portrait Landscape 4K UHD
ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.

ಯೋಹಾನನು 18:33 (KANIRV)
Square Portrait Landscape 4K UHD
ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಯೋಹಾನನು 18:34 (KANIRV)
Square Portrait Landscape 4K UHD
ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು.

ಯೋಹಾನನು 18:35 (KANIRV)
Square Portrait Landscape 4K UHD
ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,

ಯೋಹಾನನು 18:36 (KANIRV)
Square Portrait Landscape 4K UHD
ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.

ಯೋಹಾನನು 18:37 (KANIRV)
Square Portrait Landscape 4K UHD
ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.

ಯೋಹಾನನು 18:38 (KANIRV)
Square Portrait Landscape 4K UHD
ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.

ಯೋಹಾನನು 18:39 (KANIRV)
Square Portrait Landscape 4K UHD
ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.

ಯೋಹಾನನು 18:40 (KANIRV)
Square Portrait Landscape 4K UHD
ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.

Available Bible Translations

American Standard Version (ASV)
John 18 (ASV) »
King James Version (KJV)
John 18 (KJV) »
GOD’S WORD® (GW)
John 18 (GW) »
Berean Bible (BSB)
John 18 (BSB) »
World English Bible (WEB)
John 18 (WEB) »
French Bible (LSG)
Jean 18 (LSG) »
German Bible (LUTH1912)
Johannes 18 (LUTH1912) »
Bengali Bible (BENIRV)
যোহন 18 (BENIRV) »
Marathi Bible (MARIRV)
योहान 18 (MARIRV) »
Gujarati Bible (GUJIRV)
યોહાન 18 (GUJIRV) »
Arabic Bible (AVD)
يوحنَّا 18 (AVD) »
Portuguese Bible (BSL)
João 18 (BSL) »
Vietnamese Bible (VIE)
Giăng 18 (VIE) »
Spanish Bible (RVA)
Juan 18 (RVA) »
Italian Bible (RIV)
Giovanni 18 (RIV) »
Chinese Simplified (CUVS)
约 翰 福 音 18 (CUVS) »
Chinese Traditional (CUVT)
約 翰 福 音 18 (CUVT) »
Albanian Bible (ALB)
Gjoni 18 (ALB) »
Swedish Bible (SV1917)
Johannes 18 (SV1917) »
Russian Bible (RUSV)
Иоанна 18 (RUSV) »
Ukrainian Bible (UKR)
Івана 18 (UKR) »
Hungarian Bible (KAR)
János 18 (KAR) »
Bulgarian Bible (BULG)
Йоан 18 (BULG) »
Norwegian Bible (NORSK)
Johannes 18 (NORSK) »

ಯೋಹಾನನು (KANIRV) Chapter Selection

KANIRV Book Selection List