ಯೋಹಾನನು Chapter 21 KANIRV Bible Verse Images

ಯೋಹಾನನು 21 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 21 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 21:1 (KANIRV)
Square Portrait Landscape 4K UHD
ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:

ಯೋಹಾನನು 21:2 (KANIRV)
Square Portrait Landscape 4K UHD
ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.

ಯೋಹಾನನು 21:3 (KANIRV)
Square Portrait Landscape 4K UHD
ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.

ಯೋಹಾನನು 21:4 (KANIRV)
Square Portrait Landscape 4K UHD
ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.

ಯೋಹಾನನು 21:5 (KANIRV)
Square Portrait Landscape 4K UHD
ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.

ಯೋಹಾನನು 21:6 (KANIRV)
Square Portrait Landscape 4K UHD
ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.

ಯೋಹಾನನು 21:7 (KANIRV)
Square Portrait Landscape 4K UHD
ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.

ಯೋಹಾನನು 21:8 (KANIRV)
Square Portrait Landscape 4K UHD
ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.

ಯೋಹಾನನು 21:9 (KANIRV)
Square Portrait Landscape 4K UHD
ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.

ಯೋಹಾನನು 21:10 (KANIRV)
Square Portrait Landscape 4K UHD
ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,

ಯೋಹಾನನು 21:11 (KANIRV)
Square Portrait Landscape 4K UHD
ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.

ಯೋಹಾನನು 21:12 (KANIRV)
Square Portrait Landscape 4K UHD
ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.

ಯೋಹಾನನು 21:13 (KANIRV)
Square Portrait Landscape 4K UHD
ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.

ಯೋಹಾನನು 21:14 (KANIRV)
Square Portrait Landscape 4K UHD
ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಯೋಹಾನನು 21:15 (KANIRV)
Square Portrait Landscape 4K UHD
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ,ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.

ಯೋಹಾನನು 21:16 (KANIRV)
Square Portrait Landscape 4K UHD
ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.

ಯೋಹಾನನು 21:17 (KANIRV)
Square Portrait Landscape 4K UHD
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.

ಯೋಹಾನನು 21:18 (KANIRV)
Square Portrait Landscape 4K UHD
“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.

ಯೋಹಾನನು 21:19 (KANIRV)
Square Portrait Landscape 4K UHD
ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಯೋಹಾನನು 21:20 (KANIRV)
Square Portrait Landscape 4K UHD
ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.

ಯೋಹಾನನು 21:21 (KANIRV)
Square Portrait Landscape 4K UHD
ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,

ಯೋಹಾನನು 21:22 (KANIRV)
Square Portrait Landscape 4K UHD
ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಯೋಹಾನನು 21:23 (KANIRV)
Square Portrait Landscape 4K UHD
ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.

ಯೋಹಾನನು 21:24 (KANIRV)
Square Portrait Landscape 4K UHD
ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.

ಯೋಹಾನನು 21:25 (KANIRV)
Square Portrait Landscape 4K UHD
ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

Available Bible Translations

American Standard Version (ASV)
John 21 (ASV) »
King James Version (KJV)
John 21 (KJV) »
GOD’S WORD® (GW)
John 21 (GW) »
Berean Bible (BSB)
John 21 (BSB) »
World English Bible (WEB)
John 21 (WEB) »
French Bible (LSG)
Jean 21 (LSG) »
German Bible (LUTH1912)
Johannes 21 (LUTH1912) »
Bengali Bible (BENIRV)
যোহন 21 (BENIRV) »
Marathi Bible (MARIRV)
योहान 21 (MARIRV) »
Gujarati Bible (GUJIRV)
યોહાન 21 (GUJIRV) »
Arabic Bible (AVD)
يوحنَّا 21 (AVD) »
Portuguese Bible (BSL)
João 21 (BSL) »
Vietnamese Bible (VIE)
Giăng 21 (VIE) »
Spanish Bible (RVA)
Juan 21 (RVA) »
Italian Bible (RIV)
Giovanni 21 (RIV) »
Chinese Simplified (CUVS)
约 翰 福 音 21 (CUVS) »
Chinese Traditional (CUVT)
約 翰 福 音 21 (CUVT) »
Albanian Bible (ALB)
Gjoni 21 (ALB) »
Swedish Bible (SV1917)
Johannes 21 (SV1917) »
Russian Bible (RUSV)
Иоанна 21 (RUSV) »
Ukrainian Bible (UKR)
Івана 21 (UKR) »
Hungarian Bible (KAR)
János 21 (KAR) »
Bulgarian Bible (BULG)
Йоан 21 (BULG) »
Norwegian Bible (NORSK)
Johannes 21 (NORSK) »

ಯೋಹಾನನು (KANIRV) Chapter Selection

KANIRV Book Selection List