ಯೋಹಾನನು Chapter 3 KANIRV Bible Verse Images

ಯೋಹಾನನು 3 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 3 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 3:1 (KANIRV)
Square Portrait Landscape 4K UHD
ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.

ಯೋಹಾನನು 3:2 (KANIRV)
Square Portrait Landscape 4K UHD
ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.

ಯೋಹಾನನು 3:3 (KANIRV)
Square Portrait Landscape 4K UHD
ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.

ಯೋಹಾನನು 3:4 (KANIRV)
Square Portrait Landscape 4K UHD
ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.

ಯೋಹಾನನು 3:5 (KANIRV)
Square Portrait Landscape 4K UHD
ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.

ಯೋಹಾನನು 3:6 (KANIRV)
Square Portrait Landscape 4K UHD
ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.

ಯೋಹಾನನು 3:7 (KANIRV)
Square Portrait Landscape 4K UHD
‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ

ಯೋಹಾನನು 3:8 (KANIRV)
Square Portrait Landscape 4K UHD
ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.

ಯೋಹಾನನು 3:9 (KANIRV)
Square Portrait Landscape 4K UHD
ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,

ಯೋಹಾನನು 3:10 (KANIRV)
Square Portrait Landscape 4K UHD
ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?

ಯೋಹಾನನು 3:11 (KANIRV)
Square Portrait Landscape 4K UHD
ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.

ಯೋಹಾನನು 3:12 (KANIRV)
Square Portrait Landscape 4K UHD
ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?

ಯೋಹಾನನು 3:13 (KANIRV)
Square Portrait Landscape 4K UHD
ಪರಲೋಕದಿಂದ ಇಳಿದು ಬಂದವನೇ, ಅಂದರೆ,ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.

ಯೋಹಾನನು 3:14 (KANIRV)
Square Portrait Landscape 4K UHD
ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.

ಯೋಹಾನನು 3:15 (KANIRV)
Square Portrait Landscape 4K UHD
ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.

ಯೋಹಾನನು 3:16 (KANIRV)
Square Portrait Landscape 4K UHD
“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

ಯೋಹಾನನು 3:17 (KANIRV)
Square Portrait Landscape 4K UHD
ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.

ಯೋಹಾನನು 3:18 (KANIRV)
Square Portrait Landscape 4K UHD
ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

ಯೋಹಾನನು 3:19 (KANIRV)
Square Portrait Landscape 4K UHD
ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.

ಯೋಹಾನನು 3:20 (KANIRV)
Square Portrait Landscape 4K UHD
ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.

ಯೋಹಾನನು 3:21 (KANIRV)
Square Portrait Landscape 4K UHD
ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”

ಯೋಹಾನನು 3:22 (KANIRV)
Square Portrait Landscape 4K UHD
ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.

ಯೋಹಾನನು 3:23 (KANIRV)
Square Portrait Landscape 4K UHD
ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಯೋಹಾನನು 3:24 (KANIRV)
Square Portrait Landscape 4K UHD
ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.

ಯೋಹಾನನು 3:25 (KANIRV)
Square Portrait Landscape 4K UHD
ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.

ಯೋಹಾನನು 3:26 (KANIRV)
Square Portrait Landscape 4K UHD
ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು

ಯೋಹಾನನು 3:27 (KANIRV)
Square Portrait Landscape 4K UHD
ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.

ಯೋಹಾನನು 3:28 (KANIRV)
Square Portrait Landscape 4K UHD
‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.

ಯೋಹಾನನು 3:29 (KANIRV)
Square Portrait Landscape 4K UHD
ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.

ಯೋಹಾನನು 3:30 (KANIRV)
Square Portrait Landscape 4K UHD
ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.

ಯೋಹಾನನು 3:31 (KANIRV)
Square Portrait Landscape 4K UHD
ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.

ಯೋಹಾನನು 3:32 (KANIRV)
Square Portrait Landscape 4K UHD
ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಯೋಹಾನನು 3:33 (KANIRV)
Square Portrait Landscape 4K UHD
ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.

ಯೋಹಾನನು 3:34 (KANIRV)
Square Portrait Landscape 4K UHD
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.

ಯೋಹಾನನು 3:35 (KANIRV)
Square Portrait Landscape 4K UHD
ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.

ಯೋಹಾನನು 3:36 (KANIRV)
Square Portrait Landscape 4K UHD
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

Available Bible Translations

American Standard Version (ASV)
John 3 (ASV) »
King James Version (KJV)
John 3 (KJV) »
GOD’S WORD® (GW)
John 3 (GW) »
Berean Bible (BSB)
John 3 (BSB) »
World English Bible (WEB)
John 3 (WEB) »
French Bible (LSG)
Jean 3 (LSG) »
German Bible (LUTH1912)
Johannes 3 (LUTH1912) »
Punjabi Bible (PANIRV)
ਯੂਹੰਨਾ 3 (PANIRV) »
Bengali Bible (BENIRV)
যোহন 3 (BENIRV) »
Marathi Bible (MARIRV)
योहान 3 (MARIRV) »
Gujarati Bible (GUJIRV)
યોહાન 3 (GUJIRV) »
Arabic Bible (AVD)
يوحنَّا 3 (AVD) »
Portuguese Bible (BSL)
João 3 (BSL) »
Vietnamese Bible (VIE)
Giăng 3 (VIE) »
Spanish Bible (RVA)
Juan 3 (RVA) »
Italian Bible (RIV)
Giovanni 3 (RIV) »
Chinese Simplified (CUVS)
约 翰 福 音 3 (CUVS) »
Chinese Traditional (CUVT)
約 翰 福 音 3 (CUVT) »
Albanian Bible (ALB)
Gjoni 3 (ALB) »
Swedish Bible (SV1917)
Johannes 3 (SV1917) »
Russian Bible (RUSV)
Иоанна 3 (RUSV) »
Ukrainian Bible (UKR)
Івана 3 (UKR) »
Hungarian Bible (KAR)
János 3 (KAR) »
Bulgarian Bible (BULG)
Йоан 3 (BULG) »
Norwegian Bible (NORSK)
Johannes 3 (NORSK) »

ಯೋಹಾನನು (KANIRV) Chapter Selection

KANIRV Book Selection List