ಯೋಹಾನನು Chapter 4 KANIRV Bible Verse Images

ಯೋಹಾನನು 4 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 4 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 4:1 (KANIRV)
Square Portrait Landscape 4K UHD
ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,

ಯೋಹಾನನು 4:2 (KANIRV)
Square Portrait Landscape 4K UHD
(ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),

ಯೋಹಾನನು 4:3 (KANIRV)
Square Portrait Landscape 4K UHD
ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.

ಯೋಹಾನನು 4:4 (KANIRV)
Square Portrait Landscape 4K UHD
ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.

ಯೋಹಾನನು 4:5 (KANIRV)
Square Portrait Landscape 4K UHD
ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.

ಯೋಹಾನನು 4:6 (KANIRV)
Square Portrait Landscape 4K UHD
ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.

ಯೋಹಾನನು 4:7 (KANIRV)
Square Portrait Landscape 4K UHD
ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.

ಯೋಹಾನನು 4:8 (KANIRV)
Square Portrait Landscape 4K UHD
ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.

ಯೋಹಾನನು 4:9 (KANIRV)
Square Portrait Landscape 4K UHD
ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.

ಯೋಹಾನನು 4:10 (KANIRV)
Square Portrait Landscape 4K UHD
ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.

ಯೋಹಾನನು 4:11 (KANIRV)
Square Portrait Landscape 4K UHD
ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?

ಯೋಹಾನನು 4:12 (KANIRV)
Square Portrait Landscape 4K UHD
ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,

ಯೋಹಾನನು 4:13 (KANIRV)
Square Portrait Landscape 4K UHD
ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,

ಯೋಹಾನನು 4:14 (KANIRV)
Square Portrait Landscape 4K UHD
ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.

ಯೋಹಾನನು 4:15 (KANIRV)
Square Portrait Landscape 4K UHD
ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,

ಯೋಹಾನನು 4:16 (KANIRV)
Square Portrait Landscape 4K UHD
ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.

ಯೋಹಾನನು 4:17 (KANIRV)
Square Portrait Landscape 4K UHD
ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.

ಯೋಹಾನನು 4:18 (KANIRV)
Square Portrait Landscape 4K UHD
ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.

ಯೋಹಾನನು 4:19 (KANIRV)
Square Portrait Landscape 4K UHD
ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.

ಯೋಹಾನನು 4:20 (KANIRV)
Square Portrait Landscape 4K UHD
ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.

ಯೋಹಾನನು 4:21 (KANIRV)
Square Portrait Landscape 4K UHD
ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.

ಯೋಹಾನನು 4:22 (KANIRV)
Square Portrait Landscape 4K UHD
ಸಮಾರ್ಯದವರಾದನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.

ಯೋಹಾನನು 4:23 (KANIRV)
Square Portrait Landscape 4K UHD
ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.

ಯೋಹಾನನು 4:24 (KANIRV)
Square Portrait Landscape 4K UHD
ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರುಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.

ಯೋಹಾನನು 4:25 (KANIRV)
Square Portrait Landscape 4K UHD
ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,

ಯೋಹಾನನು 4:26 (KANIRV)
Square Portrait Landscape 4K UHD
ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.

ಯೋಹಾನನು 4:27 (KANIRV)
Square Portrait Landscape 4K UHD
ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.

ಯೋಹಾನನು 4:28 (KANIRV)
Square Portrait Landscape 4K UHD
ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,

ಯೋಹಾನನು 4:29 (KANIRV)
Square Portrait Landscape 4K UHD
“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.

ಯೋಹಾನನು 4:30 (KANIRV)
Square Portrait Landscape 4K UHD
ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.

ಯೋಹಾನನು 4:31 (KANIRV)
Square Portrait Landscape 4K UHD
ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.

ಯೋಹಾನನು 4:32 (KANIRV)
Square Portrait Landscape 4K UHD
ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು

ಯೋಹಾನನು 4:33 (KANIRV)
Square Portrait Landscape 4K UHD
ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಯೋಹಾನನು 4:34 (KANIRV)
Square Portrait Landscape 4K UHD
ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.

ಯೋಹಾನನು 4:35 (KANIRV)
Square Portrait Landscape 4K UHD
‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.

ಯೋಹಾನನು 4:36 (KANIRV)
Square Portrait Landscape 4K UHD
ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.

ಯೋಹಾನನು 4:37 (KANIRV)
Square Portrait Landscape 4K UHD
‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.

ಯೋಹಾನನು 4:38 (KANIRV)
Square Portrait Landscape 4K UHD
ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.

ಯೋಹಾನನು 4:39 (KANIRV)
Square Portrait Landscape 4K UHD
“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

ಯೋಹಾನನು 4:40 (KANIRV)
Square Portrait Landscape 4K UHD
ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.

ಯೋಹಾನನು 4:41 (KANIRV)
Square Portrait Landscape 4K UHD
ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,

ಯೋಹಾನನು 4:42 (KANIRV)
Square Portrait Landscape 4K UHD
ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.

ಯೋಹಾನನು 4:43 (KANIRV)
Square Portrait Landscape 4K UHD
ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.

ಯೋಹಾನನು 4:44 (KANIRV)
Square Portrait Landscape 4K UHD
ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.

ಯೋಹಾನನು 4:45 (KANIRV)
Square Portrait Landscape 4K UHD
ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.

ಯೋಹಾನನು 4:46 (KANIRV)
Square Portrait Landscape 4K UHD
ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.

ಯೋಹಾನನು 4:47 (KANIRV)
Square Portrait Landscape 4K UHD
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.

ಯೋಹಾನನು 4:48 (KANIRV)
Square Portrait Landscape 4K UHD
ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.

ಯೋಹಾನನು 4:49 (KANIRV)
Square Portrait Landscape 4K UHD
ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು

ಯೋಹಾನನು 4:50 (KANIRV)
Square Portrait Landscape 4K UHD
ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.

ಯೋಹಾನನು 4:51 (KANIRV)
Square Portrait Landscape 4K UHD
ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.

ಯೋಹಾನನು 4:52 (KANIRV)
Square Portrait Landscape 4K UHD
ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.

ಯೋಹಾನನು 4:53 (KANIRV)
Square Portrait Landscape 4K UHD
ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.

ಯೋಹಾನನು 4:54 (KANIRV)
Square Portrait Landscape 4K UHD
ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.

Available Bible Translations

American Standard Version (ASV)
John 4 (ASV) »
King James Version (KJV)
John 4 (KJV) »
GOD’S WORD® (GW)
John 4 (GW) »
Berean Bible (BSB)
John 4 (BSB) »
World English Bible (WEB)
John 4 (WEB) »
French Bible (LSG)
Jean 4 (LSG) »
German Bible (LUTH1912)
Johannes 4 (LUTH1912) »
Punjabi Bible (PANIRV)
ਯੂਹੰਨਾ 4 (PANIRV) »
Bengali Bible (BENIRV)
যোহন 4 (BENIRV) »
Marathi Bible (MARIRV)
योहान 4 (MARIRV) »
Gujarati Bible (GUJIRV)
યોહાન 4 (GUJIRV) »
Arabic Bible (AVD)
يوحنَّا 4 (AVD) »
Portuguese Bible (BSL)
João 4 (BSL) »
Vietnamese Bible (VIE)
Giăng 4 (VIE) »
Spanish Bible (RVA)
Juan 4 (RVA) »
Italian Bible (RIV)
Giovanni 4 (RIV) »
Chinese Simplified (CUVS)
约 翰 福 音 4 (CUVS) »
Chinese Traditional (CUVT)
約 翰 福 音 4 (CUVT) »
Albanian Bible (ALB)
Gjoni 4 (ALB) »
Swedish Bible (SV1917)
Johannes 4 (SV1917) »
Russian Bible (RUSV)
Иоанна 4 (RUSV) »
Ukrainian Bible (UKR)
Івана 4 (UKR) »
Hungarian Bible (KAR)
János 4 (KAR) »
Bulgarian Bible (BULG)
Йоан 4 (BULG) »
Norwegian Bible (NORSK)
Johannes 4 (NORSK) »

ಯೋಹಾನನು (KANIRV) Chapter Selection

KANIRV Book Selection List