ಯೋಹಾನನು Chapter 9 KANIRV Bible Verse Images

ಯೋಹಾನನು 9 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 9 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 9:1 (KANIRV)
Square Portrait Landscape 4K UHD
ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

ಯೋಹಾನನು 9:2 (KANIRV)
Square Portrait Landscape 4K UHD
ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.

ಯೋಹಾನನು 9:3 (KANIRV)
Square Portrait Landscape 4K UHD
ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.

ಯೋಹಾನನು 9:4 (KANIRV)
Square Portrait Landscape 4K UHD
ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.

ಯೋಹಾನನು 9:5 (KANIRV)
Square Portrait Landscape 4K UHD
ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.

ಯೋಹಾನನು 9:6 (KANIRV)
Square Portrait Landscape 4K UHD
ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.

ಯೋಹಾನನು 9:7 (KANIRV)
Square Portrait Landscape 4K UHD
ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

ಯೋಹಾನನು 9:8 (KANIRV)
Square Portrait Landscape 4K UHD
ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.

ಯೋಹಾನನು 9:9 (KANIRV)
Square Portrait Landscape 4K UHD
ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.

ಯೋಹಾನನು 9:10 (KANIRV)
Square Portrait Landscape 4K UHD
ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,

ಯೋಹಾನನು 9:11 (KANIRV)
Square Portrait Landscape 4K UHD
ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.

ಯೋಹಾನನು 9:12 (KANIRV)
Square Portrait Landscape 4K UHD
ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.

ಯೋಹಾನನು 9:13 (KANIRV)
Square Portrait Landscape 4K UHD
ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.

ಯೋಹಾನನು 9:14 (KANIRV)
Square Portrait Landscape 4K UHD
ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.

ಯೋಹಾನನು 9:15 (KANIRV)
Square Portrait Landscape 4K UHD
ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.

ಯೋಹಾನನು 9:16 (KANIRV)
Square Portrait Landscape 4K UHD
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.

ಯೋಹಾನನು 9:17 (KANIRV)
Square Portrait Landscape 4K UHD
ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.

ಯೋಹಾನನು 9:18 (KANIRV)
Square Portrait Landscape 4K UHD
ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.

ಯೋಹಾನನು 9:19 (KANIRV)
Square Portrait Landscape 4K UHD
ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.

ಯೋಹಾನನು 9:20 (KANIRV)
Square Portrait Landscape 4K UHD
ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.

ಯೋಹಾನನು 9:21 (KANIRV)
Square Portrait Landscape 4K UHD
ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.

ಯೋಹಾನನು 9:22 (KANIRV)
Square Portrait Landscape 4K UHD
ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.

ಯೋಹಾನನು 9:23 (KANIRV)
Square Portrait Landscape 4K UHD
“ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.

ಯೋಹಾನನು 9:24 (KANIRV)
Square Portrait Landscape 4K UHD
ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.

ಯೋಹಾನನು 9:25 (KANIRV)
Square Portrait Landscape 4K UHD
ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.

ಯೋಹಾನನು 9:26 (KANIRV)
Square Portrait Landscape 4K UHD
ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,

ಯೋಹಾನನು 9:27 (KANIRV)
Square Portrait Landscape 4K UHD
ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.

ಯೋಹಾನನು 9:28 (KANIRV)
Square Portrait Landscape 4K UHD
ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.

ಯೋಹಾನನು 9:29 (KANIRV)
Square Portrait Landscape 4K UHD
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.

ಯೋಹಾನನು 9:30 (KANIRV)
Square Portrait Landscape 4K UHD
ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!

ಯೋಹಾನನು 9:31 (KANIRV)
Square Portrait Landscape 4K UHD
ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.

ಯೋಹಾನನು 9:32 (KANIRV)
Square Portrait Landscape 4K UHD
ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.

ಯೋಹಾನನು 9:33 (KANIRV)
Square Portrait Landscape 4K UHD
ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.

ಯೋಹಾನನು 9:34 (KANIRV)
Square Portrait Landscape 4K UHD
ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಯೋಹಾನನು 9:35 (KANIRV)
Square Portrait Landscape 4K UHD
ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನುಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.

ಯೋಹಾನನು 9:36 (KANIRV)
Square Portrait Landscape 4K UHD
ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,

ಯೋಹಾನನು 9:37 (KANIRV)
Square Portrait Landscape 4K UHD
ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,

ಯೋಹಾನನು 9:38 (KANIRV)
Square Portrait Landscape 4K UHD
ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.

ಯೋಹಾನನು 9:39 (KANIRV)
Square Portrait Landscape 4K UHD
ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.

ಯೋಹಾನನು 9:40 (KANIRV)
Square Portrait Landscape 4K UHD
ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,

ಯೋಹಾನನು 9:41 (KANIRV)
Square Portrait Landscape 4K UHD
ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.

Available Bible Translations

American Standard Version (ASV)
John 9 (ASV) »
King James Version (KJV)
John 9 (KJV) »
GOD’S WORD® (GW)
John 9 (GW) »
Berean Bible (BSB)
John 9 (BSB) »
World English Bible (WEB)
John 9 (WEB) »
French Bible (LSG)
Jean 9 (LSG) »
German Bible (LUTH1912)
Johannes 9 (LUTH1912) »
Punjabi Bible (PANIRV)
ਯੂਹੰਨਾ 9 (PANIRV) »
Bengali Bible (BENIRV)
যোহন 9 (BENIRV) »
Marathi Bible (MARIRV)
योहान 9 (MARIRV) »
Gujarati Bible (GUJIRV)
યોહાન 9 (GUJIRV) »
Arabic Bible (AVD)
يوحنَّا 9 (AVD) »
Portuguese Bible (BSL)
João 9 (BSL) »
Vietnamese Bible (VIE)
Giăng 9 (VIE) »
Spanish Bible (RVA)
Juan 9 (RVA) »
Italian Bible (RIV)
Giovanni 9 (RIV) »
Chinese Simplified (CUVS)
约 翰 福 音 9 (CUVS) »
Chinese Traditional (CUVT)
約 翰 福 音 9 (CUVT) »
Albanian Bible (ALB)
Gjoni 9 (ALB) »
Swedish Bible (SV1917)
Johannes 9 (SV1917) »
Russian Bible (RUSV)
Иоанна 9 (RUSV) »
Ukrainian Bible (UKR)
Івана 9 (UKR) »
Hungarian Bible (KAR)
János 9 (KAR) »
Bulgarian Bible (BULG)
Йоан 9 (BULG) »
Norwegian Bible (NORSK)
Johannes 9 (NORSK) »

ಯೋಹಾನನು (KANIRV) Chapter Selection

KANIRV Book Selection List