ನ್ಯಾಯಸ್ಥಾಪಕರು Chapter 1 KANIRV Bible Verse Images

ನ್ಯಾಯಸ್ಥಾಪಕರು 1 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ನ್ಯಾಯಸ್ಥಾಪಕರು 1 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ನ್ಯಾಯಸ್ಥಾಪಕರು 1:1 (KANIRV)
Square Portrait Landscape 4K UHD
ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು

ನ್ಯಾಯಸ್ಥಾಪಕರು 1:2 (KANIRV)
Square Portrait Landscape 4K UHD
ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.

ನ್ಯಾಯಸ್ಥಾಪಕರು 1:3 (KANIRV)
Square Portrait Landscape 4K UHD
ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.

ನ್ಯಾಯಸ್ಥಾಪಕರು 1:4 (KANIRV)
Square Portrait Landscape 4K UHD
ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.

ನ್ಯಾಯಸ್ಥಾಪಕರು 1:5 (KANIRV)
Square Portrait Landscape 4K UHD
ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.

ನ್ಯಾಯಸ್ಥಾಪಕರು 1:6 (KANIRV)
Square Portrait Landscape 4K UHD
ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.

ನ್ಯಾಯಸ್ಥಾಪಕರು 1:7 (KANIRV)
Square Portrait Landscape 4K UHD
ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.

ನ್ಯಾಯಸ್ಥಾಪಕರು 1:8 (KANIRV)
Square Portrait Landscape 4K UHD
ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.

ನ್ಯಾಯಸ್ಥಾಪಕರು 1:9 (KANIRV)
Square Portrait Landscape 4K UHD
ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ನ್ಯಾಯಸ್ಥಾಪಕರು 1:10 (KANIRV)
Square Portrait Landscape 4K UHD
ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.

ನ್ಯಾಯಸ್ಥಾಪಕರು 1:11 (KANIRV)
Square Portrait Landscape 4K UHD
ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.

ನ್ಯಾಯಸ್ಥಾಪಕರು 1:12 (KANIRV)
Square Portrait Landscape 4K UHD
ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.

ನ್ಯಾಯಸ್ಥಾಪಕರು 1:13 (KANIRV)
Square Portrait Landscape 4K UHD
ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.

ನ್ಯಾಯಸ್ಥಾಪಕರು 1:14 (KANIRV)
Square Portrait Landscape 4K UHD
ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು

ನ್ಯಾಯಸ್ಥಾಪಕರು 1:15 (KANIRV)
Square Portrait Landscape 4K UHD
ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.

ನ್ಯಾಯಸ್ಥಾಪಕರು 1:16 (KANIRV)
Square Portrait Landscape 4K UHD
ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ನ್ಯಾಯಸ್ಥಾಪಕರು 1:17 (KANIRV)
Square Portrait Landscape 4K UHD
ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.

ನ್ಯಾಯಸ್ಥಾಪಕರು 1:18 (KANIRV)
Square Portrait Landscape 4K UHD
ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.

ನ್ಯಾಯಸ್ಥಾಪಕರು 1:19 (KANIRV)
Square Portrait Landscape 4K UHD
ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.

ನ್ಯಾಯಸ್ಥಾಪಕರು 1:20 (KANIRV)
Square Portrait Landscape 4K UHD
ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.

ನ್ಯಾಯಸ್ಥಾಪಕರು 1:21 (KANIRV)
Square Portrait Landscape 4K UHD
ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.

ನ್ಯಾಯಸ್ಥಾಪಕರು 1:22 (KANIRV)
Square Portrait Landscape 4K UHD
ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ನ್ಯಾಯಸ್ಥಾಪಕರು 1:23 (KANIRV)
Square Portrait Landscape 4K UHD
ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.

ನ್ಯಾಯಸ್ಥಾಪಕರು 1:24 (KANIRV)
Square Portrait Landscape 4K UHD
ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.

ನ್ಯಾಯಸ್ಥಾಪಕರು 1:25 (KANIRV)
Square Portrait Landscape 4K UHD
ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.

ನ್ಯಾಯಸ್ಥಾಪಕರು 1:26 (KANIRV)
Square Portrait Landscape 4K UHD
ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.

ನ್ಯಾಯಸ್ಥಾಪಕರು 1:27 (KANIRV)
Square Portrait Landscape 4K UHD
ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.

ನ್ಯಾಯಸ್ಥಾಪಕರು 1:28 (KANIRV)
Square Portrait Landscape 4K UHD
ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.

ನ್ಯಾಯಸ್ಥಾಪಕರು 1:29 (KANIRV)
Square Portrait Landscape 4K UHD
ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು.

ನ್ಯಾಯಸ್ಥಾಪಕರು 1:30 (KANIRV)
Square Portrait Landscape 4K UHD
ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.

ನ್ಯಾಯಸ್ಥಾಪಕರು 1:31 (KANIRV)
Square Portrait Landscape 4K UHD
ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;

ನ್ಯಾಯಸ್ಥಾಪಕರು 1:32 (KANIRV)
Square Portrait Landscape 4K UHD
ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು.

ನ್ಯಾಯಸ್ಥಾಪಕರು 1:33 (KANIRV)
Square Portrait Landscape 4K UHD
ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.

ನ್ಯಾಯಸ್ಥಾಪಕರು 1:34 (KANIRV)
Square Portrait Landscape 4K UHD
ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.

ನ್ಯಾಯಸ್ಥಾಪಕರು 1:35 (KANIRV)
Square Portrait Landscape 4K UHD
ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.

ನ್ಯಾಯಸ್ಥಾಪಕರು 1:36 (KANIRV)
Square Portrait Landscape 4K UHD
ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.

Available Bible Translations

American Standard Version (ASV)
Judges 1 (ASV) »
King James Version (KJV)
Judges 1 (KJV) »
GOD’S WORD® (GW)
Judges 1 (GW) »
Berean Bible (BSB)
Judges 1 (BSB) »
World English Bible (WEB)
Judges 1 (WEB) »
French Bible (LSG)
Juges 1 (LSG) »
German Bible (LUTH1912)
Richter 1 (LUTH1912) »
Punjabi Bible (PANIRV)
ਕਜ਼ਾૃ 1 (PANIRV) »
Marathi Bible (MARIRV)
शास्ते 1 (MARIRV) »
Hebrew Bible (HEB)
שפטים 1 (HEB) »
Portuguese Bible (BSL)
Juízes 1 (BSL) »
Vietnamese Bible (VIE)
Các Thủ Lãnh 1 (VIE) »
Spanish Bible (RVA)
Jueces 1 (RVA) »
Italian Bible (RIV)
Giudici 1 (RIV) »
Chinese Simplified (CUVS)
士 师 记 1 (CUVS) »
Chinese Traditional (CUVT)
士 師 記 1 (CUVT) »
Albanian Bible (ALB)
Gjyqtarët 1 (ALB) »
Swedish Bible (SV1917)
Domarboken 1 (SV1917) »
Hungarian Bible (KAR)
Bírák 1 (KAR) »
Bulgarian Bible (BULG)
Съдии 1 (BULG) »
Japanese Bible (JPN)
士師記 1 (JPN) »
Norwegian Bible (NORSK)
Dommerne 1 (NORSK) »

ನ್ಯಾಯಸ್ಥಾಪಕರು (KANIRV) Chapter Selection

KANIRV Book Selection List