ಯಾಜಕಕಾಂಡ Chapter 14 KANIRV Bible Verse Images

ಯಾಜಕಕಾಂಡ 14 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯಾಜಕಕಾಂಡ 14 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯಾಜಕಕಾಂಡ 14:1 (KANIRV)
Square Portrait Landscape 4K UHD
ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಯಾಜಕಕಾಂಡ 14:2 (KANIRV)
Square Portrait Landscape 4K UHD
“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.

ಯಾಜಕಕಾಂಡ 14:3 (KANIRV)
Square Portrait Landscape 4K UHD
ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.

ಯಾಜಕಕಾಂಡ 14:4 (KANIRV)
Square Portrait Landscape 4K UHD
ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಯಾಜಕಕಾಂಡ 14:5 (KANIRV)
Square Portrait Landscape 4K UHD
ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಯಾಜಕಕಾಂಡ 14:6 (KANIRV)
Square Portrait Landscape 4K UHD
“ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.

ಯಾಜಕಕಾಂಡ 14:7 (KANIRV)
Square Portrait Landscape 4K UHD
ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

ಯಾಜಕಕಾಂಡ 14:8 (KANIRV)
Square Portrait Landscape 4K UHD
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.

ಯಾಜಕಕಾಂಡ 14:9 (KANIRV)
Square Portrait Landscape 4K UHD
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.

ಯಾಜಕಕಾಂಡ 14:10 (KANIRV)
Square Portrait Landscape 4K UHD
“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.

ಯಾಜಕಕಾಂಡ 14:11 (KANIRV)
Square Portrait Landscape 4K UHD
ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.

ಯಾಜಕಕಾಂಡ 14:12 (KANIRV)
Square Portrait Landscape 4K UHD
ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.

ಯಾಜಕಕಾಂಡ 14:13 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.

ಯಾಜಕಕಾಂಡ 14:14 (KANIRV)
Square Portrait Landscape 4K UHD
ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.

ಯಾಜಕಕಾಂಡ 14:15 (KANIRV)
Square Portrait Landscape 4K UHD
ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,

ಯಾಜಕಕಾಂಡ 14:16 (KANIRV)
Square Portrait Landscape 4K UHD
ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.

ಯಾಜಕಕಾಂಡ 14:17 (KANIRV)
Square Portrait Landscape 4K UHD
ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.

ಯಾಜಕಕಾಂಡ 14:18 (KANIRV)
Square Portrait Landscape 4K UHD
ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.

ಯಾಜಕಕಾಂಡ 14:19 (KANIRV)
Square Portrait Landscape 4K UHD
“ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.

ಯಾಜಕಕಾಂಡ 14:20 (KANIRV)
Square Portrait Landscape 4K UHD
ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.

ಯಾಜಕಕಾಂಡ 14:21 (KANIRV)
Square Portrait Landscape 4K UHD
“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.

ಯಾಜಕಕಾಂಡ 14:22 (KANIRV)
Square Portrait Landscape 4K UHD
ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.

ಯಾಜಕಕಾಂಡ 14:23 (KANIRV)
Square Portrait Landscape 4K UHD
ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.

ಯಾಜಕಕಾಂಡ 14:24 (KANIRV)
Square Portrait Landscape 4K UHD
ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.

ಯಾಜಕಕಾಂಡ 14:25 (KANIRV)
Square Portrait Landscape 4K UHD
ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.

ಯಾಜಕಕಾಂಡ 14:26 (KANIRV)
Square Portrait Landscape 4K UHD
ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,

ಯಾಜಕಕಾಂಡ 14:27 (KANIRV)
Square Portrait Landscape 4K UHD
ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.

ಯಾಜಕಕಾಂಡ 14:28 (KANIRV)
Square Portrait Landscape 4K UHD
ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.

ಯಾಜಕಕಾಂಡ 14:29 (KANIRV)
Square Portrait Landscape 4K UHD
ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.

ಯಾಜಕಕಾಂಡ 14:30 (KANIRV)
Square Portrait Landscape 4K UHD
ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ

ಯಾಜಕಕಾಂಡ 14:31 (KANIRV)
Square Portrait Landscape 4K UHD
ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.

ಯಾಜಕಕಾಂಡ 14:32 (KANIRV)
Square Portrait Landscape 4K UHD
“ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.

ಯಾಜಕಕಾಂಡ 14:33 (KANIRV)
Square Portrait Landscape 4K UHD
ಯೆಹೋವನು ಮೋಶೆ ಮತ್ತು ಆರೋನರಿಗೆ,

ಯಾಜಕಕಾಂಡ 14:34 (KANIRV)
Square Portrait Landscape 4K UHD
“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,

ಯಾಜಕಕಾಂಡ 14:35 (KANIRV)
Square Portrait Landscape 4K UHD
ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.

ಯಾಜಕಕಾಂಡ 14:36 (KANIRV)
Square Portrait Landscape 4K UHD
ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.

ಯಾಜಕಕಾಂಡ 14:37 (KANIRV)
Square Portrait Landscape 4K UHD
ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,

ಯಾಜಕಕಾಂಡ 14:38 (KANIRV)
Square Portrait Landscape 4K UHD
ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.

ಯಾಜಕಕಾಂಡ 14:39 (KANIRV)
Square Portrait Landscape 4K UHD
ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,

ಯಾಜಕಕಾಂಡ 14:40 (KANIRV)
Square Portrait Landscape 4K UHD
ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.

ಯಾಜಕಕಾಂಡ 14:41 (KANIRV)
Square Portrait Landscape 4K UHD
ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.

ಯಾಜಕಕಾಂಡ 14:42 (KANIRV)
Square Portrait Landscape 4K UHD
ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.

ಯಾಜಕಕಾಂಡ 14:43 (KANIRV)
Square Portrait Landscape 4K UHD
“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.

ಯಾಜಕಕಾಂಡ 14:44 (KANIRV)
Square Portrait Landscape 4K UHD
ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.

ಯಾಜಕಕಾಂಡ 14:45 (KANIRV)
Square Portrait Landscape 4K UHD
ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.

ಯಾಜಕಕಾಂಡ 14:46 (KANIRV)
Square Portrait Landscape 4K UHD
ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಯಾಜಕಕಾಂಡ 14:47 (KANIRV)
Square Portrait Landscape 4K UHD
ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.

ಯಾಜಕಕಾಂಡ 14:48 (KANIRV)
Square Portrait Landscape 4K UHD
“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.

ಯಾಜಕಕಾಂಡ 14:49 (KANIRV)
Square Portrait Landscape 4K UHD
ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.

ಯಾಜಕಕಾಂಡ 14:50 (KANIRV)
Square Portrait Landscape 4K UHD
ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,

ಯಾಜಕಕಾಂಡ 14:51 (KANIRV)
Square Portrait Landscape 4K UHD
ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.

ಯಾಜಕಕಾಂಡ 14:52 (KANIRV)
Square Portrait Landscape 4K UHD
ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.

ಯಾಜಕಕಾಂಡ 14:53 (KANIRV)
Square Portrait Landscape 4K UHD
ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.

ಯಾಜಕಕಾಂಡ 14:54 (KANIRV)
Square Portrait Landscape 4K UHD
“ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,

ಯಾಜಕಕಾಂಡ 14:55 (KANIRV)
Square Portrait Landscape 4K UHD
ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,

ಯಾಜಕಕಾಂಡ 14:56 (KANIRV)
Square Portrait Landscape 4K UHD
ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ

ಯಾಜಕಕಾಂಡ 14:57 (KANIRV)
Square Portrait Landscape 4K UHD
ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.

Available Bible Translations

American Standard Version (ASV)
Leviticus 14 (ASV) »
King James Version (KJV)
Leviticus 14 (KJV) »
GOD’S WORD® (GW)
Leviticus 14 (GW) »
Berean Bible (BSB)
Leviticus 14 (BSB) »
World English Bible (WEB)
Leviticus 14 (WEB) »
French Bible (LSG)
Lévitique 14 (LSG) »
German Bible (LUTH1912)
Levitikus 14 (LUTH1912) »
Punjabi Bible (PANIRV)
ਅਹਬਾਰ 14 (PANIRV) »
Marathi Bible (MARIRV)
लेवीय 14 (MARIRV) »
Gujarati Bible (GUJIRV)
લેવીય 14 (GUJIRV) »
Hebrew Bible (HEB)
ויקרא 14 (HEB) »
Portuguese Bible (BSL)
Levítico 14 (BSL) »
Vietnamese Bible (VIE)
Lê-vi 14 (VIE) »
Spanish Bible (RVA)
Levítico 14 (RVA) »
Italian Bible (RIV)
Levitico 14 (RIV) »
Chinese Simplified (CUVS)
利 未 记 14 (CUVS) »
Chinese Traditional (CUVT)
利 未 記 14 (CUVT) »
Albanian Bible (ALB)
Levitiku 14 (ALB) »
Swedish Bible (SV1917)
3 Mosebok 14 (SV1917) »
Russian Bible (RUSV)
Левит 14 (RUSV) »
Ukrainian Bible (UKR)
Левит 14 (UKR) »
Hungarian Bible (KAR)
3 Mózes 14 (KAR) »
Bulgarian Bible (BULG)
Левит 14 (BULG) »
Japanese Bible (JPN)
レビ記 14 (JPN) »
Norwegian Bible (NORSK)
3 Mosebok 14 (NORSK) »

ಯಾಜಕಕಾಂಡ (KANIRV) Chapter Selection

KANIRV Book Selection List