ಯಾಜಕಕಾಂಡ Chapter 18 KANIRV Bible Verse Images

ಯಾಜಕಕಾಂಡ 18 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯಾಜಕಕಾಂಡ 18 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯಾಜಕಕಾಂಡ 18:1 (KANIRV)
Square Portrait Landscape 4K UHD
ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಯಾಜಕಕಾಂಡ 18:2 (KANIRV)
Square Portrait Landscape 4K UHD
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು.

ಯಾಜಕಕಾಂಡ 18:3 (KANIRV)
Square Portrait Landscape 4K UHD
ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.

ಯಾಜಕಕಾಂಡ 18:4 (KANIRV)
Square Portrait Landscape 4K UHD
ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.

ಯಾಜಕಕಾಂಡ 18:5 (KANIRV)
Square Portrait Landscape 4K UHD
ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.

ಯಾಜಕಕಾಂಡ 18:6 (KANIRV)
Square Portrait Landscape 4K UHD
“‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.

ಯಾಜಕಕಾಂಡ 18:7 (KANIRV)
Square Portrait Landscape 4K UHD
ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.

ಯಾಜಕಕಾಂಡ 18:8 (KANIRV)
Square Portrait Landscape 4K UHD
ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.

ಯಾಜಕಕಾಂಡ 18:9 (KANIRV)
Square Portrait Landscape 4K UHD
ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.

ಯಾಜಕಕಾಂಡ 18:10 (KANIRV)
Square Portrait Landscape 4K UHD
ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.

ಯಾಜಕಕಾಂಡ 18:11 (KANIRV)
Square Portrait Landscape 4K UHD
ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.

ಯಾಜಕಕಾಂಡ 18:12 (KANIRV)
Square Portrait Landscape 4K UHD
ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.

ಯಾಜಕಕಾಂಡ 18:13 (KANIRV)
Square Portrait Landscape 4K UHD
ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.

ಯಾಜಕಕಾಂಡ 18:14 (KANIRV)
Square Portrait Landscape 4K UHD
ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.

ಯಾಜಕಕಾಂಡ 18:15 (KANIRV)
Square Portrait Landscape 4K UHD
ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.

ಯಾಜಕಕಾಂಡ 18:16 (KANIRV)
Square Portrait Landscape 4K UHD
ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.

ಯಾಜಕಕಾಂಡ 18:17 (KANIRV)
Square Portrait Landscape 4K UHD
ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.

ಯಾಜಕಕಾಂಡ 18:18 (KANIRV)
Square Portrait Landscape 4K UHD
ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.

ಯಾಜಕಕಾಂಡ 18:19 (KANIRV)
Square Portrait Landscape 4K UHD
“‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.

ಯಾಜಕಕಾಂಡ 18:20 (KANIRV)
Square Portrait Landscape 4K UHD
ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.

ಯಾಜಕಕಾಂಡ 18:21 (KANIRV)
Square Portrait Landscape 4K UHD
“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.

ಯಾಜಕಕಾಂಡ 18:22 (KANIRV)
Square Portrait Landscape 4K UHD
“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.

ಯಾಜಕಕಾಂಡ 18:23 (KANIRV)
Square Portrait Landscape 4K UHD
ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.

ಯಾಜಕಕಾಂಡ 18:24 (KANIRV)
Square Portrait Landscape 4K UHD
“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.

ಯಾಜಕಕಾಂಡ 18:25 (KANIRV)
Square Portrait Landscape 4K UHD
ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.

ಯಾಜಕಕಾಂಡ 18:26 (KANIRV)
Square Portrait Landscape 4K UHD
ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.

ಯಾಜಕಕಾಂಡ 18:27 (KANIRV)
Square Portrait Landscape 4K UHD
ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.

ಯಾಜಕಕಾಂಡ 18:28 (KANIRV)
Square Portrait Landscape 4K UHD
ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.

ಯಾಜಕಕಾಂಡ 18:29 (KANIRV)
Square Portrait Landscape 4K UHD
ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.

ಯಾಜಕಕಾಂಡ 18:30 (KANIRV)
Square Portrait Landscape 4K UHD
ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.

Available Bible Translations

American Standard Version (ASV)
Leviticus 18 (ASV) »
King James Version (KJV)
Leviticus 18 (KJV) »
GOD’S WORD® (GW)
Leviticus 18 (GW) »
Berean Bible (BSB)
Leviticus 18 (BSB) »
World English Bible (WEB)
Leviticus 18 (WEB) »
French Bible (LSG)
Lévitique 18 (LSG) »
German Bible (LUTH1912)
Levitikus 18 (LUTH1912) »
Punjabi Bible (PANIRV)
ਅਹਬਾਰ 18 (PANIRV) »
Marathi Bible (MARIRV)
लेवीय 18 (MARIRV) »
Gujarati Bible (GUJIRV)
લેવીય 18 (GUJIRV) »
Hebrew Bible (HEB)
ויקרא 18 (HEB) »
Portuguese Bible (BSL)
Levítico 18 (BSL) »
Vietnamese Bible (VIE)
Lê-vi 18 (VIE) »
Spanish Bible (RVA)
Levítico 18 (RVA) »
Italian Bible (RIV)
Levitico 18 (RIV) »
Chinese Simplified (CUVS)
利 未 记 18 (CUVS) »
Chinese Traditional (CUVT)
利 未 記 18 (CUVT) »
Albanian Bible (ALB)
Levitiku 18 (ALB) »
Swedish Bible (SV1917)
3 Mosebok 18 (SV1917) »
Russian Bible (RUSV)
Левит 18 (RUSV) »
Ukrainian Bible (UKR)
Левит 18 (UKR) »
Hungarian Bible (KAR)
3 Mózes 18 (KAR) »
Bulgarian Bible (BULG)
Левит 18 (BULG) »
Japanese Bible (JPN)
レビ記 18 (JPN) »
Norwegian Bible (NORSK)
3 Mosebok 18 (NORSK) »

ಯಾಜಕಕಾಂಡ (KANIRV) Chapter Selection

KANIRV Book Selection List