ಯಾಜಕಕಾಂಡ Chapter 25 KANIRV Bible Verse Images

ಯಾಜಕಕಾಂಡ 25 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯಾಜಕಕಾಂಡ 25 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯಾಜಕಕಾಂಡ 25:1 (KANIRV)
Square Portrait Landscape 4K UHD
ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,

ಯಾಜಕಕಾಂಡ 25:2 (KANIRV)
Square Portrait Landscape 4K UHD
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.

ಯಾಜಕಕಾಂಡ 25:3 (KANIRV)
Square Portrait Landscape 4K UHD
ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.

ಯಾಜಕಕಾಂಡ 25:4 (KANIRV)
Square Portrait Landscape 4K UHD
ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.

ಯಾಜಕಕಾಂಡ 25:5 (KANIRV)
Square Portrait Landscape 4K UHD
ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.

ಯಾಜಕಕಾಂಡ 25:6 (KANIRV)
Square Portrait Landscape 4K UHD
ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,

ಯಾಜಕಕಾಂಡ 25:7 (KANIRV)
Square Portrait Landscape 4K UHD
ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.

ಯಾಜಕಕಾಂಡ 25:8 (KANIRV)
Square Portrait Landscape 4K UHD
“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.

ಯಾಜಕಕಾಂಡ 25:9 (KANIRV)
Square Portrait Landscape 4K UHD
ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.

ಯಾಜಕಕಾಂಡ 25:10 (KANIRV)
Square Portrait Landscape 4K UHD
ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.

ಯಾಜಕಕಾಂಡ 25:11 (KANIRV)
Square Portrait Landscape 4K UHD
ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.

ಯಾಜಕಕಾಂಡ 25:12 (KANIRV)
Square Portrait Landscape 4K UHD
ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.

ಯಾಜಕಕಾಂಡ 25:13 (KANIRV)
Square Portrait Landscape 4K UHD
“‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.

ಯಾಜಕಕಾಂಡ 25:14 (KANIRV)
Square Portrait Landscape 4K UHD
ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.

ಯಾಜಕಕಾಂಡ 25:15 (KANIRV)
Square Portrait Landscape 4K UHD
ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.

ಯಾಜಕಕಾಂಡ 25:16 (KANIRV)
Square Portrait Landscape 4K UHD
ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.

ಯಾಜಕಕಾಂಡ 25:17 (KANIRV)
Square Portrait Landscape 4K UHD
ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.

ಯಾಜಕಕಾಂಡ 25:18 (KANIRV)
Square Portrait Landscape 4K UHD
“‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.

ಯಾಜಕಕಾಂಡ 25:19 (KANIRV)
Square Portrait Landscape 4K UHD
ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.

ಯಾಜಕಕಾಂಡ 25:20 (KANIRV)
Square Portrait Landscape 4K UHD
“‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ

ಯಾಜಕಕಾಂಡ 25:21 (KANIRV)
Square Portrait Landscape 4K UHD
ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.

ಯಾಜಕಕಾಂಡ 25:22 (KANIRV)
Square Portrait Landscape 4K UHD
ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.

ಯಾಜಕಕಾಂಡ 25:23 (KANIRV)
Square Portrait Landscape 4K UHD
“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.

ಯಾಜಕಕಾಂಡ 25:24 (KANIRV)
Square Portrait Landscape 4K UHD
ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಯಾಜಕಕಾಂಡ 25:25 (KANIRV)
Square Portrait Landscape 4K UHD
“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

ಯಾಜಕಕಾಂಡ 25:26 (KANIRV)
Square Portrait Landscape 4K UHD
ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,

ಯಾಜಕಕಾಂಡ 25:27 (KANIRV)
Square Portrait Landscape 4K UHD
ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.

ಯಾಜಕಕಾಂಡ 25:28 (KANIRV)
Square Portrait Landscape 4K UHD
ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.

ಯಾಜಕಕಾಂಡ 25:29 (KANIRV)
Square Portrait Landscape 4K UHD
“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.

ಯಾಜಕಕಾಂಡ 25:30 (KANIRV)
Square Portrait Landscape 4K UHD
ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.

ಯಾಜಕಕಾಂಡ 25:31 (KANIRV)
Square Portrait Landscape 4K UHD
ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.

ಯಾಜಕಕಾಂಡ 25:32 (KANIRV)
Square Portrait Landscape 4K UHD
ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.

ಯಾಜಕಕಾಂಡ 25:33 (KANIRV)
Square Portrait Landscape 4K UHD
ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.

ಯಾಜಕಕಾಂಡ 25:34 (KANIRV)
Square Portrait Landscape 4K UHD
ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.

ಯಾಜಕಕಾಂಡ 25:35 (KANIRV)
Square Portrait Landscape 4K UHD
“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.

ಯಾಜಕಕಾಂಡ 25:36 (KANIRV)
Square Portrait Landscape 4K UHD
ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.

ಯಾಜಕಕಾಂಡ 25:37 (KANIRV)
Square Portrait Landscape 4K UHD
ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.

ಯಾಜಕಕಾಂಡ 25:38 (KANIRV)
Square Portrait Landscape 4K UHD
ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.

ಯಾಜಕಕಾಂಡ 25:39 (KANIRV)
Square Portrait Landscape 4K UHD
“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.

ಯಾಜಕಕಾಂಡ 25:40 (KANIRV)
Square Portrait Landscape 4K UHD
ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.

ಯಾಜಕಕಾಂಡ 25:41 (KANIRV)
Square Portrait Landscape 4K UHD
ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.

ಯಾಜಕಕಾಂಡ 25:42 (KANIRV)
Square Portrait Landscape 4K UHD
ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.

ಯಾಜಕಕಾಂಡ 25:43 (KANIRV)
Square Portrait Landscape 4K UHD
ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.

ಯಾಜಕಕಾಂಡ 25:44 (KANIRV)
Square Portrait Landscape 4K UHD
ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.

ಯಾಜಕಕಾಂಡ 25:45 (KANIRV)
Square Portrait Landscape 4K UHD
ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.

ಯಾಜಕಕಾಂಡ 25:46 (KANIRV)
Square Portrait Landscape 4K UHD
ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.

ಯಾಜಕಕಾಂಡ 25:47 (KANIRV)
Square Portrait Landscape 4K UHD
“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.

ಯಾಜಕಕಾಂಡ 25:48 (KANIRV)
Square Portrait Landscape 4K UHD
ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.

ಯಾಜಕಕಾಂಡ 25:49 (KANIRV)
Square Portrait Landscape 4K UHD
ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.

ಯಾಜಕಕಾಂಡ 25:50 (KANIRV)
Square Portrait Landscape 4K UHD
ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.

ಯಾಜಕಕಾಂಡ 25:51 (KANIRV)
Square Portrait Landscape 4K UHD
ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.

ಯಾಜಕಕಾಂಡ 25:52 (KANIRV)
Square Portrait Landscape 4K UHD
ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.

ಯಾಜಕಕಾಂಡ 25:53 (KANIRV)
Square Portrait Landscape 4K UHD
ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.

ಯಾಜಕಕಾಂಡ 25:54 (KANIRV)
Square Portrait Landscape 4K UHD
ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.

ಯಾಜಕಕಾಂಡ 25:55 (KANIRV)
Square Portrait Landscape 4K UHD
ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.

Available Bible Translations

American Standard Version (ASV)
Leviticus 25 (ASV) »
King James Version (KJV)
Leviticus 25 (KJV) »
GOD’S WORD® (GW)
Leviticus 25 (GW) »
Berean Bible (BSB)
Leviticus 25 (BSB) »
World English Bible (WEB)
Leviticus 25 (WEB) »
French Bible (LSG)
Lévitique 25 (LSG) »
German Bible (LUTH1912)
Levitikus 25 (LUTH1912) »
Punjabi Bible (PANIRV)
ਅਹਬਾਰ 25 (PANIRV) »
Marathi Bible (MARIRV)
लेवीय 25 (MARIRV) »
Gujarati Bible (GUJIRV)
લેવીય 25 (GUJIRV) »
Hebrew Bible (HEB)
ויקרא 25 (HEB) »
Portuguese Bible (BSL)
Levítico 25 (BSL) »
Vietnamese Bible (VIE)
Lê-vi 25 (VIE) »
Spanish Bible (RVA)
Levítico 25 (RVA) »
Italian Bible (RIV)
Levitico 25 (RIV) »
Chinese Simplified (CUVS)
利 未 记 25 (CUVS) »
Chinese Traditional (CUVT)
利 未 記 25 (CUVT) »
Albanian Bible (ALB)
Levitiku 25 (ALB) »
Swedish Bible (SV1917)
3 Mosebok 25 (SV1917) »
Russian Bible (RUSV)
Левит 25 (RUSV) »
Ukrainian Bible (UKR)
Левит 25 (UKR) »
Hungarian Bible (KAR)
3 Mózes 25 (KAR) »
Bulgarian Bible (BULG)
Левит 25 (BULG) »
Japanese Bible (JPN)
レビ記 25 (JPN) »
Norwegian Bible (NORSK)
3 Mosebok 25 (NORSK) »

ಯಾಜಕಕಾಂಡ (KANIRV) Chapter Selection

KANIRV Book Selection List