ಲೂಕನು Chapter 1 KANIRV Bible Verse Images

ಲೂಕನು 1 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಲೂಕನು 1 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಲೂಕನು 1:1 (KANIRV)
Square Portrait Landscape 4K UHD
ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.

ಲೂಕನು 1:2 (KANIRV)
Square Portrait Landscape 4K UHD
ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,

ಲೂಕನು 1:3 (KANIRV)
Square Portrait Landscape 4K UHD
ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.

ಲೂಕನು 1:4 (KANIRV)
Square Portrait Landscape 4K UHD
ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.

ಲೂಕನು 1:5 (KANIRV)
Square Portrait Landscape 4K UHD
ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.

ಲೂಕನು 1:6 (KANIRV)
Square Portrait Landscape 4K UHD
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

ಲೂಕನು 1:7 (KANIRV)
Square Portrait Landscape 4K UHD
ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.

ಲೂಕನು 1:8 (KANIRV)
Square Portrait Landscape 4K UHD
ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.

ಲೂಕನು 1:9 (KANIRV)
Square Portrait Landscape 4K UHD
ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.

ಲೂಕನು 1:10 (KANIRV)
Square Portrait Landscape 4K UHD
ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,

ಲೂಕನು 1:11 (KANIRV)
Square Portrait Landscape 4K UHD
ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.

ಲೂಕನು 1:12 (KANIRV)
Square Portrait Landscape 4K UHD
ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.

ಲೂಕನು 1:13 (KANIRV)
Square Portrait Landscape 4K UHD
ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.

ಲೂಕನು 1:14 (KANIRV)
Square Portrait Landscape 4K UHD
ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು.

ಲೂಕನು 1:15 (KANIRV)
Square Portrait Landscape 4K UHD
ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಲೂಕನು 1:16 (KANIRV)
Square Portrait Landscape 4K UHD
ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.

ಲೂಕನು 1:17 (KANIRV)
Square Portrait Landscape 4K UHD
ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.

ಲೂಕನು 1:18 (KANIRV)
Square Portrait Landscape 4K UHD
ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.

ಲೂಕನು 1:19 (KANIRV)
Square Portrait Landscape 4K UHD
ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.

ಲೂಕನು 1:20 (KANIRV)
Square Portrait Landscape 4K UHD
ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.

ಲೂಕನು 1:21 (KANIRV)
Square Portrait Landscape 4K UHD
ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.

ಲೂಕನು 1:22 (KANIRV)
Square Portrait Landscape 4K UHD
ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಲೂಕನು 1:23 (KANIRV)
Square Portrait Landscape 4K UHD
ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು.

ಲೂಕನು 1:24 (KANIRV)
Square Portrait Landscape 4K UHD
ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು.

ಲೂಕನು 1:25 (KANIRV)
Square Portrait Landscape 4K UHD
“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.

ಲೂಕನು 1:26 (KANIRV)
Square Portrait Landscape 4K UHD
ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;

ಲೂಕನು 1:27 (KANIRV)
Square Portrait Landscape 4K UHD
ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.

ಲೂಕನು 1:28 (KANIRV)
Square Portrait Landscape 4K UHD
ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.

ಲೂಕನು 1:29 (KANIRV)
Square Portrait Landscape 4K UHD
ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು.

ಲೂಕನು 1:30 (KANIRV)
Square Portrait Landscape 4K UHD
ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.

ಲೂಕನು 1:31 (KANIRV)
Square Portrait Landscape 4K UHD
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.

ಲೂಕನು 1:32 (KANIRV)
Square Portrait Landscape 4K UHD
ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.

ಲೂಕನು 1:33 (KANIRV)
Square Portrait Landscape 4K UHD
ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.

ಲೂಕನು 1:34 (KANIRV)
Square Portrait Landscape 4K UHD
ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.

ಲೂಕನು 1:35 (KANIRV)
Square Portrait Landscape 4K UHD
ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.

ಲೂಕನು 1:36 (KANIRV)
Square Portrait Landscape 4K UHD
ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.

ಲೂಕನು 1:37 (KANIRV)
Square Portrait Landscape 4K UHD
ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.

ಲೂಕನು 1:38 (KANIRV)
Square Portrait Landscape 4K UHD
ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.

ಲೂಕನು 1:39 (KANIRV)
Square Portrait Landscape 4K UHD
ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.

ಲೂಕನು 1:40 (KANIRV)
Square Portrait Landscape 4K UHD
ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು.

ಲೂಕನು 1:41 (KANIRV)
Square Portrait Landscape 4K UHD
ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.

ಲೂಕನು 1:42 (KANIRV)
Square Portrait Landscape 4K UHD
ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.

ಲೂಕನು 1:43 (KANIRV)
Square Portrait Landscape 4K UHD
ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು?

ಲೂಕನು 1:44 (KANIRV)
Square Portrait Landscape 4K UHD
ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು.

ಲೂಕನು 1:45 (KANIRV)
Square Portrait Landscape 4K UHD
ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”

ಲೂಕನು 1:46 (KANIRV)
Square Portrait Landscape 4K UHD
ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,

ಲೂಕನು 1:47 (KANIRV)
Square Portrait Landscape 4K UHD
ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.

ಲೂಕನು 1:48 (KANIRV)
Square Portrait Landscape 4K UHD
ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,

ಲೂಕನು 1:49 (KANIRV)
Square Portrait Landscape 4K UHD
ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು.

ಲೂಕನು 1:50 (KANIRV)
Square Portrait Landscape 4K UHD
ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.

ಲೂಕನು 1:51 (KANIRV)
Square Portrait Landscape 4K UHD
ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.

ಲೂಕನು 1:52 (KANIRV)
Square Portrait Landscape 4K UHD
ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.

ಲೂಕನು 1:53 (KANIRV)
Square Portrait Landscape 4K UHD
ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.

ಲೂಕನು 1:54 (KANIRV)
Square Portrait Landscape 4K UHD
ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.

ಲೂಕನು 1:55 (KANIRV)
Square Portrait Landscape 4K UHD
ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.

ಲೂಕನು 1:56 (KANIRV)
Square Portrait Landscape 4K UHD
ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.

ಲೂಕನು 1:57 (KANIRV)
Square Portrait Landscape 4K UHD
ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು.

ಲೂಕನು 1:58 (KANIRV)
Square Portrait Landscape 4K UHD
ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.

ಲೂಕನು 1:59 (KANIRV)
Square Portrait Landscape 4K UHD
ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.

ಲೂಕನು 1:60 (KANIRV)
Square Portrait Landscape 4K UHD
ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು,

ಲೂಕನು 1:61 (KANIRV)
Square Portrait Landscape 4K UHD
ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು.

ಲೂಕನು 1:62 (KANIRV)
Square Portrait Landscape 4K UHD
ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು.

ಲೂಕನು 1:63 (KANIRV)
Square Portrait Landscape 4K UHD
ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.

ಲೂಕನು 1:64 (KANIRV)
Square Portrait Landscape 4K UHD
ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು.

ಲೂಕನು 1:65 (KANIRV)
Square Portrait Landscape 4K UHD
ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.

ಲೂಕನು 1:66 (KANIRV)
Square Portrait Landscape 4K UHD
ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.

ಲೂಕನು 1:67 (KANIRV)
Square Portrait Landscape 4K UHD
ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,

ಲೂಕನು 1:68 (KANIRV)
Square Portrait Landscape 4K UHD
“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;

ಲೂಕನು 1:69 (KANIRV)
Square Portrait Landscape 4K UHD
ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.

ಲೂಕನು 1:70 (KANIRV)
Square Portrait Landscape 4K UHD
ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ,

ಲೂಕನು 1:71 (KANIRV)
Square Portrait Landscape 4K UHD
ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.

ಲೂಕನು 1:72 (KANIRV)
Square Portrait Landscape 4K UHD
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.

ಲೂಕನು 1:73 (KANIRV)
Square Portrait Landscape 4K UHD
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.

ಲೂಕನು 1:74 (KANIRV)
Square Portrait Landscape 4K UHD
ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.

ಲೂಕನು 1:75 (KANIRV)
Square Portrait Landscape 4K UHD
ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.

ಲೂಕನು 1:76 (KANIRV)
Square Portrait Landscape 4K UHD
ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,

ಲೂಕನು 1:77 (KANIRV)
Square Portrait Landscape 4K UHD
ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,

ಲೂಕನು 1:78 (KANIRV)
Square Portrait Landscape 4K UHD
ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,

ಲೂಕನು 1:79 (KANIRV)
Square Portrait Landscape 4K UHD
ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”

ಲೂಕನು 1:80 (KANIRV)
Square Portrait Landscape 4K UHD
ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.

Available Bible Translations

American Standard Version (ASV)
Luke 1 (ASV) »
King James Version (KJV)
Luke 1 (KJV) »
GOD’S WORD® (GW)
Luke 1 (GW) »
Berean Bible (BSB)
Luke 1 (BSB) »
World English Bible (WEB)
Luke 1 (WEB) »
French Bible (LSG)
Luc 1 (LSG) »
German Bible (LUTH1912)
Lukas 1 (LUTH1912) »
Hindi Bible (HINIRV)
लूका 1 (HINIRV) »
Punjabi Bible (PANIRV)
ਲੂਕਾ 1 (PANIRV) »
Bengali Bible (BENIRV)
লূক 1 (BENIRV) »
Marathi Bible (MARIRV)
लूक 1 (MARIRV) »
Telugu Bible (TELIRV)
లూకా 1 (TELIRV) »
Gujarati Bible (GUJIRV)
લૂક 1 (GUJIRV) »
Arabic Bible (AVD)
لُوقا 1 (AVD) »
Portuguese Bible (BSL)
Lucas 1 (BSL) »
Vietnamese Bible (VIE)
Lu-ca 1 (VIE) »
Spanish Bible (RVA)
Lucas 1 (RVA) »
Italian Bible (RIV)
Luca 1 (RIV) »
Chinese Simplified (CUVS)
路 加 福 音 1 (CUVS) »
Chinese Traditional (CUVT)
路 加 福 音 1 (CUVT) »
Albanian Bible (ALB)
Luka 1 (ALB) »
Swedish Bible (SV1917)
Lukas 1 (SV1917) »
Russian Bible (RUSV)
Луки 1 (RUSV) »
Ukrainian Bible (UKR)
Луки 1 (UKR) »
Hungarian Bible (KAR)
Lukács 1 (KAR) »
Bulgarian Bible (BULG)
Лука 1 (BULG) »
Norwegian Bible (NORSK)
Lukas 1 (NORSK) »

ಲೂಕನು (KANIRV) Chapter Selection

KANIRV Book Selection List