ಲೂಕನು Chapter 22 KANIRV Bible Verse Images

ಲೂಕನು 22 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಲೂಕನು 22 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಲೂಕನು 22:1 (KANIRV)
Square Portrait Landscape 4K UHD
ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,

ಲೂಕನು 22:2 (KANIRV)
Square Portrait Landscape 4K UHD
ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.

ಲೂಕನು 22:3 (KANIRV)
Square Portrait Landscape 4K UHD
ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,

ಲೂಕನು 22:4 (KANIRV)
Square Portrait Landscape 4K UHD
ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.

ಲೂಕನು 22:5 (KANIRV)
Square Portrait Landscape 4K UHD
ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು,

ಲೂಕನು 22:6 (KANIRV)
Square Portrait Landscape 4K UHD
ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.

ಲೂಕನು 22:7 (KANIRV)
Square Portrait Landscape 4K UHD
ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,

ಲೂಕನು 22:8 (KANIRV)
Square Portrait Landscape 4K UHD
ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.

ಲೂಕನು 22:9 (KANIRV)
Square Portrait Landscape 4K UHD
ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,

ಲೂಕನು 22:10 (KANIRV)
Square Portrait Landscape 4K UHD
ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,

ಲೂಕನು 22:11 (KANIRV)
Square Portrait Landscape 4K UHD
ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.

ಲೂಕನು 22:12 (KANIRV)
Square Portrait Landscape 4K UHD
ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.

ಲೂಕನು 22:13 (KANIRV)
Square Portrait Landscape 4K UHD
ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.

ಲೂಕನು 22:14 (KANIRV)
Square Portrait Landscape 4K UHD
ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.

ಲೂಕನು 22:15 (KANIRV)
Square Portrait Landscape 4K UHD
ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.

ಲೂಕನು 22:16 (KANIRV)
Square Portrait Landscape 4K UHD
ಇನ್ನು ದೇವರ ರಾಜ್ಯದಲ್ಲಿಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.

ಲೂಕನು 22:17 (KANIRV)
Square Portrait Landscape 4K UHD
ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.

ಲೂಕನು 22:18 (KANIRV)
Square Portrait Landscape 4K UHD
ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.

ಲೂಕನು 22:19 (KANIRV)
Square Portrait Landscape 4K UHD
ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.

ಲೂಕನು 22:20 (KANIRV)
Square Portrait Landscape 4K UHD
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.

ಲೂಕನು 22:21 (KANIRV)
Square Portrait Landscape 4K UHD
“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.

ಲೂಕನು 22:22 (KANIRV)
Square Portrait Landscape 4K UHD
ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.

ಲೂಕನು 22:23 (KANIRV)
Square Portrait Landscape 4K UHD
ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.

ಲೂಕನು 22:24 (KANIRV)
Square Portrait Landscape 4K UHD
ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.

ಲೂಕನು 22:25 (KANIRV)
Square Portrait Landscape 4K UHD
ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.

ಲೂಕನು 22:26 (KANIRV)
Square Portrait Landscape 4K UHD
ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.

ಲೂಕನು 22:27 (KANIRV)
Square Portrait Landscape 4K UHD
ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.

ಲೂಕನು 22:28 (KANIRV)
Square Portrait Landscape 4K UHD
ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.

ಲೂಕನು 22:29 (KANIRV)
Square Portrait Landscape 4K UHD
ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;

ಲೂಕನು 22:30 (KANIRV)
Square Portrait Landscape 4K UHD
ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.

ಲೂಕನು 22:31 (KANIRV)
Square Portrait Landscape 4K UHD
“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.

ಲೂಕನು 22:32 (KANIRV)
Square Portrait Landscape 4K UHD
ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.

ಲೂಕನು 22:33 (KANIRV)
Square Portrait Landscape 4K UHD
ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,

ಲೂಕನು 22:34 (KANIRV)
Square Portrait Landscape 4K UHD
ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.

ಲೂಕನು 22:35 (KANIRV)
Square Portrait Landscape 4K UHD
ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.

ಲೂಕನು 22:36 (KANIRV)
Square Portrait Landscape 4K UHD
ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.

ಲೂಕನು 22:37 (KANIRV)
Square Portrait Landscape 4K UHD
ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.

ಲೂಕನು 22:38 (KANIRV)
Square Portrait Landscape 4K UHD
ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು.

ಲೂಕನು 22:39 (KANIRV)
Square Portrait Landscape 4K UHD
ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.

ಲೂಕನು 22:40 (KANIRV)
Square Portrait Landscape 4K UHD
ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಲೂಕನು 22:41 (KANIRV)
Square Portrait Landscape 4K UHD
ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,

ಲೂಕನು 22:42 (KANIRV)
Square Portrait Landscape 4K UHD
“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.

ಲೂಕನು 22:43 (KANIRV)
Square Portrait Landscape 4K UHD
ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.

ಲೂಕನು 22:44 (KANIRV)
Square Portrait Landscape 4K UHD
ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.

ಲೂಕನು 22:45 (KANIRV)
Square Portrait Landscape 4K UHD
ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,

ಲೂಕನು 22:46 (KANIRV)
Square Portrait Landscape 4K UHD
ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಲೂಕನು 22:47 (KANIRV)
Square Portrait Landscape 4K UHD
ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,

ಲೂಕನು 22:48 (KANIRV)
Square Portrait Landscape 4K UHD
ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.

ಲೂಕನು 22:49 (KANIRV)
Square Portrait Landscape 4K UHD
ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.

ಲೂಕನು 22:50 (KANIRV)
Square Portrait Landscape 4K UHD
ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು.

ಲೂಕನು 22:51 (KANIRV)
Square Portrait Landscape 4K UHD
ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.

ಲೂಕನು 22:52 (KANIRV)
Square Portrait Landscape 4K UHD
ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?

ಲೂಕನು 22:53 (KANIRV)
Square Portrait Landscape 4K UHD
ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.

ಲೂಕನು 22:54 (KANIRV)
Square Portrait Landscape 4K UHD
ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.

ಲೂಕನು 22:55 (KANIRV)
Square Portrait Landscape 4K UHD
ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.

ಲೂಕನು 22:56 (KANIRV)
Square Portrait Landscape 4K UHD
ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.

ಲೂಕನು 22:57 (KANIRV)
Square Portrait Landscape 4K UHD
ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.

ಲೂಕನು 22:58 (KANIRV)
Square Portrait Landscape 4K UHD
ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.

ಲೂಕನು 22:59 (KANIRV)
Square Portrait Landscape 4K UHD
ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು.

ಲೂಕನು 22:60 (KANIRV)
Square Portrait Landscape 4K UHD
ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.

ಲೂಕನು 22:61 (KANIRV)
Square Portrait Landscape 4K UHD
ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,

ಲೂಕನು 22:62 (KANIRV)
Square Portrait Landscape 4K UHD
ಹೊರಗೆ ಹೋಗಿ ತುಂಬಾ ವ್ಯಥೆಪಟ್ಟು ಅತ್ತನು.

ಲೂಕನು 22:63 (KANIRV)
Square Portrait Landscape 4K UHD
ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.

ಲೂಕನು 22:64 (KANIRV)
Square Portrait Landscape 4K UHD
ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.

ಲೂಕನು 22:65 (KANIRV)
Square Portrait Landscape 4K UHD
ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.

ಲೂಕನು 22:66 (KANIRV)
Square Portrait Landscape 4K UHD
ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,

ಲೂಕನು 22:67 (KANIRV)
Square Portrait Landscape 4K UHD
“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.

ಲೂಕನು 22:68 (KANIRV)
Square Portrait Landscape 4K UHD
ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.

ಲೂಕನು 22:69 (KANIRV)
Square Portrait Landscape 4K UHD
ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.

ಲೂಕನು 22:70 (KANIRV)
Square Portrait Landscape 4K UHD
ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.

ಲೂಕನು 22:71 (KANIRV)
Square Portrait Landscape 4K UHD
ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು.

Available Bible Translations

American Standard Version (ASV)
Luke 22 (ASV) »
King James Version (KJV)
Luke 22 (KJV) »
GOD’S WORD® (GW)
Luke 22 (GW) »
Berean Bible (BSB)
Luke 22 (BSB) »
World English Bible (WEB)
Luke 22 (WEB) »
French Bible (LSG)
Luc 22 (LSG) »
German Bible (LUTH1912)
Lukas 22 (LUTH1912) »
Hindi Bible (HINIRV)
लूका 22 (HINIRV) »
Punjabi Bible (PANIRV)
ਲੂਕਾ 22 (PANIRV) »
Bengali Bible (BENIRV)
লূক 22 (BENIRV) »
Marathi Bible (MARIRV)
लूक 22 (MARIRV) »
Telugu Bible (TELIRV)
లూకా 22 (TELIRV) »
Gujarati Bible (GUJIRV)
લૂક 22 (GUJIRV) »
Arabic Bible (AVD)
لُوقا 22 (AVD) »
Portuguese Bible (BSL)
Lucas 22 (BSL) »
Vietnamese Bible (VIE)
Lu-ca 22 (VIE) »
Spanish Bible (RVA)
Lucas 22 (RVA) »
Italian Bible (RIV)
Luca 22 (RIV) »
Chinese Simplified (CUVS)
路 加 福 音 22 (CUVS) »
Chinese Traditional (CUVT)
路 加 福 音 22 (CUVT) »
Albanian Bible (ALB)
Luka 22 (ALB) »
Swedish Bible (SV1917)
Lukas 22 (SV1917) »
Russian Bible (RUSV)
Луки 22 (RUSV) »
Ukrainian Bible (UKR)
Луки 22 (UKR) »
Hungarian Bible (KAR)
Lukács 22 (KAR) »
Bulgarian Bible (BULG)
Лука 22 (BULG) »
Norwegian Bible (NORSK)
Lukas 22 (NORSK) »

ಲೂಕನು (KANIRV) Chapter Selection

KANIRV Book Selection List