ಮಾರ್ಕನು Chapter 10 KANIRV Bible Verse Images

ಮಾರ್ಕನು 10 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮಾರ್ಕನು 10 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮಾರ್ಕನು 10:1 (KANIRV)
Square Portrait Landscape 4K UHD
ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

ಮಾರ್ಕನು 10:2 (KANIRV)
Square Portrait Landscape 4K UHD
ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.

ಮಾರ್ಕನು 10:3 (KANIRV)
Square Portrait Landscape 4K UHD
ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು.

ಮಾರ್ಕನು 10:4 (KANIRV)
Square Portrait Landscape 4K UHD
ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.

ಮಾರ್ಕನು 10:5 (KANIRV)
Square Portrait Landscape 4K UHD
ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.

ಮಾರ್ಕನು 10:6 (KANIRV)
Square Portrait Landscape 4K UHD
ದೇವರಾದರೋ ಸೃಷ್ಟಿಯ ಮೊದಲಿನಿಂದಲೇಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.

ಮಾರ್ಕನು 10:7 (KANIRV)
Square Portrait Landscape 4K UHD
ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.

ಮಾರ್ಕನು 10:8 (KANIRV)
Square Portrait Landscape 4K UHD
ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.

ಮಾರ್ಕನು 10:9 (KANIRV)
Square Portrait Landscape 4K UHD
ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.

ಮಾರ್ಕನು 10:10 (KANIRV)
Square Portrait Landscape 4K UHD
ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.

ಮಾರ್ಕನು 10:11 (KANIRV)
Square Portrait Landscape 4K UHD
ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;

ಮಾರ್ಕನು 10:12 (KANIRV)
Square Portrait Landscape 4K UHD
ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.

ಮಾರ್ಕನು 10:13 (KANIRV)
Square Portrait Landscape 4K UHD
ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.

ಮಾರ್ಕನು 10:14 (KANIRV)
Square Portrait Landscape 4K UHD
ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.

ಮಾರ್ಕನು 10:15 (KANIRV)
Square Portrait Landscape 4K UHD
ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.

ಮಾರ್ಕನು 10:16 (KANIRV)
Square Portrait Landscape 4K UHD
ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.

ಮಾರ್ಕನು 10:17 (KANIRV)
Square Portrait Landscape 4K UHD
ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.

ಮಾರ್ಕನು 10:18 (KANIRV)
Square Portrait Landscape 4K UHD
ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.

ಮಾರ್ಕನು 10:19 (KANIRV)
Square Portrait Landscape 4K UHD
ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.

ಮಾರ್ಕನು 10:20 (KANIRV)
Square Portrait Landscape 4K UHD
ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,

ಮಾರ್ಕನು 10:21 (KANIRV)
Square Portrait Landscape 4K UHD
ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಮಾರ್ಕನು 10:22 (KANIRV)
Square Portrait Landscape 4K UHD
ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.

ಮಾರ್ಕನು 10:23 (KANIRV)
Square Portrait Landscape 4K UHD
ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.

ಮಾರ್ಕನು 10:24 (KANIRV)
Square Portrait Landscape 4K UHD
ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ,ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.

ಮಾರ್ಕನು 10:25 (KANIRV)
Square Portrait Landscape 4K UHD
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು.

ಮಾರ್ಕನು 10:26 (KANIRV)
Square Portrait Landscape 4K UHD
ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

ಮಾರ್ಕನು 10:27 (KANIRV)
Square Portrait Landscape 4K UHD
ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.

ಮಾರ್ಕನು 10:28 (KANIRV)
Square Portrait Landscape 4K UHD
ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.

ಮಾರ್ಕನು 10:29 (KANIRV)
Square Portrait Landscape 4K UHD
ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,

ಮಾರ್ಕನು 10:30 (KANIRV)
Square Portrait Landscape 4K UHD
ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.

ಮಾರ್ಕನು 10:31 (KANIRV)
Square Portrait Landscape 4K UHD
ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು.

ಮಾರ್ಕನು 10:32 (KANIRV)
Square Portrait Landscape 4K UHD
ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;

ಮಾರ್ಕನು 10:33 (KANIRV)
Square Portrait Landscape 4K UHD
ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.

ಮಾರ್ಕನು 10:34 (KANIRV)
Square Portrait Landscape 4K UHD
ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.

ಮಾರ್ಕನು 10:35 (KANIRV)
Square Portrait Landscape 4K UHD
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು.

ಮಾರ್ಕನು 10:36 (KANIRV)
Square Portrait Landscape 4K UHD
ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು,

ಮಾರ್ಕನು 10:37 (KANIRV)
Square Portrait Landscape 4K UHD
ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.

ಮಾರ್ಕನು 10:38 (KANIRV)
Square Portrait Landscape 4K UHD
ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು.ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ?ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.

ಮಾರ್ಕನು 10:39 (KANIRV)
Square Portrait Landscape 4K UHD
ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.

ಮಾರ್ಕನು 10:40 (KANIRV)
Square Portrait Landscape 4K UHD
ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.

ಮಾರ್ಕನು 10:41 (KANIRV)
Square Portrait Landscape 4K UHD
ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.

ಮಾರ್ಕನು 10:42 (KANIRV)
Square Portrait Landscape 4K UHD
ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.

ಮಾರ್ಕನು 10:43 (KANIRV)
Square Portrait Landscape 4K UHD
ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.

ಮಾರ್ಕನು 10:44 (KANIRV)
Square Portrait Landscape 4K UHD
ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.

ಮಾರ್ಕನು 10:45 (KANIRV)
Square Portrait Landscape 4K UHD
ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.

ಮಾರ್ಕನು 10:46 (KANIRV)
Square Portrait Landscape 4K UHD
ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.

ಮಾರ್ಕನು 10:47 (KANIRV)
Square Portrait Landscape 4K UHD
ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.

ಮಾರ್ಕನು 10:48 (KANIRV)
Square Portrait Landscape 4K UHD
ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.

ಮಾರ್ಕನು 10:49 (KANIRV)
Square Portrait Landscape 4K UHD
ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.

ಮಾರ್ಕನು 10:50 (KANIRV)
Square Portrait Landscape 4K UHD
ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.

ಮಾರ್ಕನು 10:51 (KANIRV)
Square Portrait Landscape 4K UHD
ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.

ಮಾರ್ಕನು 10:52 (KANIRV)
Square Portrait Landscape 4K UHD
ಯೇಸು ಅವನಿಗೆ, “ಹೋಗು,ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.

Available Bible Translations

American Standard Version (ASV)
Mark 10 (ASV) »
King James Version (KJV)
Mark 10 (KJV) »
GOD’S WORD® (GW)
Mark 10 (GW) »
Berean Bible (BSB)
Mark 10 (BSB) »
World English Bible (WEB)
Mark 10 (WEB) »
French Bible (LSG)
Marc 10 (LSG) »
German Bible (LUTH1912)
Markus 10 (LUTH1912) »
Punjabi Bible (PANIRV)
ਮਰਕੁਸ 10 (PANIRV) »
Bengali Bible (BENIRV)
মার্ক 10 (BENIRV) »
Marathi Bible (MARIRV)
मार्क 10 (MARIRV) »
Gujarati Bible (GUJIRV)
માર્ક 10 (GUJIRV) »
Arabic Bible (AVD)
مَرْقُس 10 (AVD) »
Portuguese Bible (BSL)
Marcos 10 (BSL) »
Vietnamese Bible (VIE)
Mác 10 (VIE) »
Spanish Bible (RVA)
Marcos 10 (RVA) »
Italian Bible (RIV)
Marco 10 (RIV) »
Chinese Simplified (CUVS)
马 可 福 音 10 (CUVS) »
Chinese Traditional (CUVT)
馬 可 福 音 10 (CUVT) »
Albanian Bible (ALB)
Marku 10 (ALB) »
Swedish Bible (SV1917)
Markus 10 (SV1917) »
Russian Bible (RUSV)
Марка 10 (RUSV) »
Ukrainian Bible (UKR)
Марка 10 (UKR) »
Hungarian Bible (KAR)
Márk 10 (KAR) »
Bulgarian Bible (BULG)
Марко 10 (BULG) »
Norwegian Bible (NORSK)
Markus 10 (NORSK) »

ಮಾರ್ಕನು (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List