ಮಾರ್ಕನು Chapter 13 KANIRV Bible Verse Images

ಮಾರ್ಕನು 13 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮಾರ್ಕನು 13 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮಾರ್ಕನು 13:1 (KANIRV)
Square Portrait Landscape 4K UHD
ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.

ಮಾರ್ಕನು 13:2 (KANIRV)
Square Portrait Landscape 4K UHD
ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.

ಮಾರ್ಕನು 13:3 (KANIRV)
Square Portrait Landscape 4K UHD
ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,

ಮಾರ್ಕನು 13:4 (KANIRV)
Square Portrait Landscape 4K UHD
ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.

ಮಾರ್ಕನು 13:5 (KANIRV)
Square Portrait Landscape 4K UHD
ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.

ಮಾರ್ಕನು 13:6 (KANIRV)
Square Portrait Landscape 4K UHD
ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು,‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.

ಮಾರ್ಕನು 13:7 (KANIRV)
Square Portrait Landscape 4K UHD
ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.

ಮಾರ್ಕನು 13:8 (KANIRV)
Square Portrait Landscape 4K UHD
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.

ಮಾರ್ಕನು 13:9 (KANIRV)
Square Portrait Landscape 4K UHD
“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,

ಮಾರ್ಕನು 13:10 (KANIRV)
Square Portrait Landscape 4K UHD
ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.

ಮಾರ್ಕನು 13:11 (KANIRV)
Square Portrait Landscape 4K UHD
“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,

ಮಾರ್ಕನು 13:12 (KANIRV)
Square Portrait Landscape 4K UHD
ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,

ಮಾರ್ಕನು 13:13 (KANIRV)
Square Portrait Landscape 4K UHD
ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”

ಮಾರ್ಕನು 13:14 (KANIRV)
Square Portrait Landscape 4K UHD
“ಇದಲ್ಲದೆವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.

ಮಾರ್ಕನು 13:15 (KANIRV)
Square Portrait Landscape 4K UHD
ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.

ಮಾರ್ಕನು 13:16 (KANIRV)
Square Portrait Landscape 4K UHD
ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.

ಮಾರ್ಕನು 13:17 (KANIRV)
Square Portrait Landscape 4K UHD
“ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!

ಮಾರ್ಕನು 13:18 (KANIRV)
Square Portrait Landscape 4K UHD
ಆ ದಿನಗಳುಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.

ಮಾರ್ಕನು 13:19 (KANIRV)
Square Portrait Landscape 4K UHD
ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.

ಮಾರ್ಕನು 13:20 (KANIRV)
Square Portrait Landscape 4K UHD
ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.

ಮಾರ್ಕನು 13:21 (KANIRV)
Square Portrait Landscape 4K UHD
“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.

ಮಾರ್ಕನು 13:22 (KANIRV)
Square Portrait Landscape 4K UHD
ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಮಾರ್ಕನು 13:23 (KANIRV)
Square Portrait Landscape 4K UHD
ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.

ಮಾರ್ಕನು 13:24 (KANIRV)
Square Portrait Landscape 4K UHD
ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.

ಮಾರ್ಕನು 13:25 (KANIRV)
Square Portrait Landscape 4K UHD
ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’

ಮಾರ್ಕನು 13:26 (KANIRV)
Square Portrait Landscape 4K UHD
ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.

ಮಾರ್ಕನು 13:27 (KANIRV)
Square Portrait Landscape 4K UHD
ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”

ಮಾರ್ಕನು 13:28 (KANIRV)
Square Portrait Landscape 4K UHD
“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.

ಮಾರ್ಕನು 13:29 (KANIRV)
Square Portrait Landscape 4K UHD
ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.

ಮಾರ್ಕನು 13:30 (KANIRV)
Square Portrait Landscape 4K UHD
ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಮಾರ್ಕನು 13:31 (KANIRV)
Square Portrait Landscape 4K UHD
ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”

ಮಾರ್ಕನು 13:32 (KANIRV)
Square Portrait Landscape 4K UHD
“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.

ಮಾರ್ಕನು 13:33 (KANIRV)
Square Portrait Landscape 4K UHD
ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವುಎಚ್ಚರವಾಗಿರಿ,ಜಾಗರೂಕರಾಗಿರಿ.

ಮಾರ್ಕನು 13:34 (KANIRV)
Square Portrait Landscape 4K UHD
ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

ಮಾರ್ಕನು 13:35 (KANIRV)
Square Portrait Landscape 4K UHD
“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!

ಮಾರ್ಕನು 13:36 (KANIRV)
Square Portrait Landscape 4K UHD
ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.

ಮಾರ್ಕನು 13:37 (KANIRV)
Square Portrait Landscape 4K UHD
ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.

Available Bible Translations

American Standard Version (ASV)
Mark 13 (ASV) »
King James Version (KJV)
Mark 13 (KJV) »
GOD’S WORD® (GW)
Mark 13 (GW) »
Berean Bible (BSB)
Mark 13 (BSB) »
World English Bible (WEB)
Mark 13 (WEB) »
French Bible (LSG)
Marc 13 (LSG) »
German Bible (LUTH1912)
Markus 13 (LUTH1912) »
Punjabi Bible (PANIRV)
ਮਰਕੁਸ 13 (PANIRV) »
Bengali Bible (BENIRV)
মার্ক 13 (BENIRV) »
Marathi Bible (MARIRV)
मार्क 13 (MARIRV) »
Gujarati Bible (GUJIRV)
માર્ક 13 (GUJIRV) »
Arabic Bible (AVD)
مَرْقُس 13 (AVD) »
Portuguese Bible (BSL)
Marcos 13 (BSL) »
Vietnamese Bible (VIE)
Mác 13 (VIE) »
Spanish Bible (RVA)
Marcos 13 (RVA) »
Italian Bible (RIV)
Marco 13 (RIV) »
Chinese Simplified (CUVS)
马 可 福 音 13 (CUVS) »
Chinese Traditional (CUVT)
馬 可 福 音 13 (CUVT) »
Albanian Bible (ALB)
Marku 13 (ALB) »
Swedish Bible (SV1917)
Markus 13 (SV1917) »
Russian Bible (RUSV)
Марка 13 (RUSV) »
Ukrainian Bible (UKR)
Марка 13 (UKR) »
Hungarian Bible (KAR)
Márk 13 (KAR) »
Bulgarian Bible (BULG)
Марко 13 (BULG) »
Norwegian Bible (NORSK)
Markus 13 (NORSK) »

ಮಾರ್ಕನು (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List