ಮಾರ್ಕನು Chapter 15 KANIRV Bible Verse Images

ಮಾರ್ಕನು 15 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮಾರ್ಕನು 15 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮಾರ್ಕನು 15:1 (KANIRV)
Square Portrait Landscape 4K UHD
ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.

ಮಾರ್ಕನು 15:2 (KANIRV)
Square Portrait Landscape 4K UHD
ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು.

ಮಾರ್ಕನು 15:3 (KANIRV)
Square Portrait Landscape 4K UHD
ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.

ಮಾರ್ಕನು 15:4 (KANIRV)
Square Portrait Landscape 4K UHD
ಆಗ ಪಿಲಾತನು ಪುನಃ ಯೇಸುವನ್ನು, “ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು” ಎಂದು ಹೇಳಿದನು.

ಮಾರ್ಕನು 15:5 (KANIRV)
Square Portrait Landscape 4K UHD
ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು.

ಮಾರ್ಕನು 15:6 (KANIRV)
Square Portrait Landscape 4K UHD
ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.

ಮಾರ್ಕನು 15:7 (KANIRV)
Square Portrait Landscape 4K UHD
ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.

ಮಾರ್ಕನು 15:8 (KANIRV)
Square Portrait Landscape 4K UHD
ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು.

ಮಾರ್ಕನು 15:9 (KANIRV)
Square Portrait Landscape 4K UHD
ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು.

ಮಾರ್ಕನು 15:10 (KANIRV)
Square Portrait Landscape 4K UHD
ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು.

ಮಾರ್ಕನು 15:11 (KANIRV)
Square Portrait Landscape 4K UHD
ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.

ಮಾರ್ಕನು 15:12 (KANIRV)
Square Portrait Landscape 4K UHD
ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು.

ಮಾರ್ಕನು 15:13 (KANIRV)
Square Portrait Landscape 4K UHD
ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಮತ್ತಷ್ಟು ಕೂಗಿಕೊಂಡರು.

ಮಾರ್ಕನು 15:14 (KANIRV)
Square Portrait Landscape 4K UHD
ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.

ಮಾರ್ಕನು 15:15 (KANIRV)
Square Portrait Landscape 4K UHD
ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಮಾರ್ಕನು 15:16 (KANIRV)
Square Portrait Landscape 4K UHD
ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.

ಮಾರ್ಕನು 15:17 (KANIRV)
Square Portrait Landscape 4K UHD
ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು.

ಮಾರ್ಕನು 15:18 (KANIRV)
Square Portrait Landscape 4K UHD
ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು.

ಮಾರ್ಕನು 15:19 (KANIRV)
Square Portrait Landscape 4K UHD
ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.

ಮಾರ್ಕನು 15:20 (KANIRV)
Square Portrait Landscape 4K UHD
ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.

ಮಾರ್ಕನು 15:21 (KANIRV)
Square Portrait Landscape 4K UHD
ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.

ಮಾರ್ಕನು 15:22 (KANIRV)
Square Portrait Landscape 4K UHD
ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ.

ಮಾರ್ಕನು 15:23 (KANIRV)
Square Portrait Landscape 4K UHD
ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ.

ಮಾರ್ಕನು 15:24 (KANIRV)
Square Portrait Landscape 4K UHD
ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು.

ಮಾರ್ಕನು 15:25 (KANIRV)
Square Portrait Landscape 4K UHD
ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.

ಮಾರ್ಕನು 15:26 (KANIRV)
Square Portrait Landscape 4K UHD
“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.

ಮಾರ್ಕನು 15:27 (KANIRV)
Square Portrait Landscape 4K UHD
ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.

ಮಾರ್ಕನು 15:28 (KANIRV)
Square Portrait Landscape 4K UHD
ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,

ಮಾರ್ಕನು 15:29 (KANIRV)
Square Portrait Landscape 4K UHD
ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,

ಮಾರ್ಕನು 15:30 (KANIRV)
Square Portrait Landscape 4K UHD
ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ” ಎಂದು ಆತನನ್ನು ಅಪಹಾಸ್ಯ ಮಾಡಿದರು.

ಮಾರ್ಕನು 15:31 (KANIRV)
Square Portrait Landscape 4K UHD
ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಮಾರ್ಕನು 15:32 (KANIRV)
Square Portrait Landscape 4K UHD
ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.

ಮಾರ್ಕನು 15:33 (KANIRV)
Square Portrait Landscape 4K UHD
ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.

ಮಾರ್ಕನು 15:34 (KANIRV)
Square Portrait Landscape 4K UHD
ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.

ಮಾರ್ಕನು 15:35 (KANIRV)
Square Portrait Landscape 4K UHD
ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ” ಅಂದರು.

ಮಾರ್ಕನು 15:36 (KANIRV)
Square Portrait Landscape 4K UHD
ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.

ಮಾರ್ಕನು 15:37 (KANIRV)
Square Portrait Landscape 4K UHD
ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು.

ಮಾರ್ಕನು 15:38 (KANIRV)
Square Portrait Landscape 4K UHD
ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.

ಮಾರ್ಕನು 15:39 (KANIRV)
Square Portrait Landscape 4K UHD
ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.

ಮಾರ್ಕನು 15:40 (KANIRV)
Square Portrait Landscape 4K UHD
ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.

ಮಾರ್ಕನು 15:41 (KANIRV)
Square Portrait Landscape 4K UHD
ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.

ಮಾರ್ಕನು 15:42 (KANIRV)
Square Portrait Landscape 4K UHD
ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.

ಮಾರ್ಕನು 15:43 (KANIRV)
Square Portrait Landscape 4K UHD
ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.

ಮಾರ್ಕನು 15:44 (KANIRV)
Square Portrait Landscape 4K UHD
ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.

ಮಾರ್ಕನು 15:45 (KANIRV)
Square Portrait Landscape 4K UHD
ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.

ಮಾರ್ಕನು 15:46 (KANIRV)
Square Portrait Landscape 4K UHD
ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.

ಮಾರ್ಕನು 15:47 (KANIRV)
Square Portrait Landscape 4K UHD
ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.

Available Bible Translations

American Standard Version (ASV)
Mark 15 (ASV) »
King James Version (KJV)
Mark 15 (KJV) »
GOD’S WORD® (GW)
Mark 15 (GW) »
Berean Bible (BSB)
Mark 15 (BSB) »
World English Bible (WEB)
Mark 15 (WEB) »
French Bible (LSG)
Marc 15 (LSG) »
German Bible (LUTH1912)
Markus 15 (LUTH1912) »
Punjabi Bible (PANIRV)
ਮਰਕੁਸ 15 (PANIRV) »
Bengali Bible (BENIRV)
মার্ক 15 (BENIRV) »
Marathi Bible (MARIRV)
मार्क 15 (MARIRV) »
Gujarati Bible (GUJIRV)
માર્ક 15 (GUJIRV) »
Arabic Bible (AVD)
مَرْقُس 15 (AVD) »
Portuguese Bible (BSL)
Marcos 15 (BSL) »
Vietnamese Bible (VIE)
Mác 15 (VIE) »
Spanish Bible (RVA)
Marcos 15 (RVA) »
Italian Bible (RIV)
Marco 15 (RIV) »
Chinese Simplified (CUVS)
马 可 福 音 15 (CUVS) »
Chinese Traditional (CUVT)
馬 可 福 音 15 (CUVT) »
Albanian Bible (ALB)
Marku 15 (ALB) »
Swedish Bible (SV1917)
Markus 15 (SV1917) »
Russian Bible (RUSV)
Марка 15 (RUSV) »
Ukrainian Bible (UKR)
Марка 15 (UKR) »
Hungarian Bible (KAR)
Márk 15 (KAR) »
Bulgarian Bible (BULG)
Марко 15 (BULG) »
Norwegian Bible (NORSK)
Markus 15 (NORSK) »

ಮಾರ್ಕನು (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List