ಮಾರ್ಕನು Chapter 7 KANIRV Bible Verse Images

ಮಾರ್ಕನು 7 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮಾರ್ಕನು 7 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮಾರ್ಕನು 7:1 (KANIRV)
Square Portrait Landscape 4K UHD
ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.

ಮಾರ್ಕನು 7:2 (KANIRV)
Square Portrait Landscape 4K UHD
ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.

ಮಾರ್ಕನು 7:3 (KANIRV)
Square Portrait Landscape 4K UHD
ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.

ಮಾರ್ಕನು 7:4 (KANIRV)
Square Portrait Landscape 4K UHD
ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.

ಮಾರ್ಕನು 7:5 (KANIRV)
Square Portrait Landscape 4K UHD
ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.

ಮಾರ್ಕನು 7:6 (KANIRV)
Square Portrait Landscape 4K UHD
ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.

ಮಾರ್ಕನು 7:7 (KANIRV)
Square Portrait Landscape 4K UHD
ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.

ಮಾರ್ಕನು 7:8 (KANIRV)
Square Portrait Landscape 4K UHD
ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.

ಮಾರ್ಕನು 7:9 (KANIRV)
Square Portrait Landscape 4K UHD
ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;

ಮಾರ್ಕನು 7:10 (KANIRV)
Square Portrait Landscape 4K UHD
‘ನಿನ್ನತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.

ಮಾರ್ಕನು 7:11 (KANIRV)
Square Portrait Landscape 4K UHD
ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ

ಮಾರ್ಕನು 7:12 (KANIRV)
Square Portrait Landscape 4K UHD
ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.

ಮಾರ್ಕನು 7:13 (KANIRV)
Square Portrait Landscape 4K UHD
ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.

ಮಾರ್ಕನು 7:14 (KANIRV)
Square Portrait Landscape 4K UHD
ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.

ಮಾರ್ಕನು 7:15 (KANIRV)
Square Portrait Landscape 4K UHD
ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.

ಮಾರ್ಕನು 7:16 (KANIRV)
Square Portrait Landscape 4K UHD
“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.

ಮಾರ್ಕನು 7:17 (KANIRV)
Square Portrait Landscape 4K UHD
ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು

ಮಾರ್ಕನು 7:18 (KANIRV)
Square Portrait Landscape 4K UHD
ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,

ಮಾರ್ಕನು 7:19 (KANIRV)
Square Portrait Landscape 4K UHD
ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.

ಮಾರ್ಕನು 7:20 (KANIRV)
Square Portrait Landscape 4K UHD
ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;

ಮಾರ್ಕನು 7:21 (KANIRV)
Square Portrait Landscape 4K UHD
ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,

ಮಾರ್ಕನು 7:22 (KANIRV)
Square Portrait Landscape 4K UHD
ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.

ಮಾರ್ಕನು 7:23 (KANIRV)
Square Portrait Landscape 4K UHD
ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”

ಮಾರ್ಕನು 7:24 (KANIRV)
Square Portrait Landscape 4K UHD
ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.

ಮಾರ್ಕನು 7:25 (KANIRV)
Square Portrait Landscape 4K UHD
ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.

ಮಾರ್ಕನು 7:26 (KANIRV)
Square Portrait Landscape 4K UHD
ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,

ಮಾರ್ಕನು 7:27 (KANIRV)
Square Portrait Landscape 4K UHD
ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.

ಮಾರ್ಕನು 7:28 (KANIRV)
Square Portrait Landscape 4K UHD
ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು

ಮಾರ್ಕನು 7:29 (KANIRV)
Square Portrait Landscape 4K UHD
ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.

ಮಾರ್ಕನು 7:30 (KANIRV)
Square Portrait Landscape 4K UHD
ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.

ಮಾರ್ಕನು 7:31 (KANIRV)
Square Portrait Landscape 4K UHD
ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.

ಮಾರ್ಕನು 7:32 (KANIRV)
Square Portrait Landscape 4K UHD
ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.

ಮಾರ್ಕನು 7:33 (KANIRV)
Square Portrait Landscape 4K UHD
ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,

ಮಾರ್ಕನು 7:34 (KANIRV)
Square Portrait Landscape 4K UHD
ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.

ಮಾರ್ಕನು 7:35 (KANIRV)
Square Portrait Landscape 4K UHD
ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.

ಮಾರ್ಕನು 7:36 (KANIRV)
Square Portrait Landscape 4K UHD
ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.

ಮಾರ್ಕನು 7:37 (KANIRV)
Square Portrait Landscape 4K UHD
ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

Available Bible Translations

American Standard Version (ASV)
Mark 7 (ASV) »
King James Version (KJV)
Mark 7 (KJV) »
GOD’S WORD® (GW)
Mark 7 (GW) »
Berean Bible (BSB)
Mark 7 (BSB) »
World English Bible (WEB)
Mark 7 (WEB) »
French Bible (LSG)
Marc 7 (LSG) »
German Bible (LUTH1912)
Markus 7 (LUTH1912) »
Hindi Bible (HINIRV)
मरकुस 7 (HINIRV) »
Punjabi Bible (PANIRV)
ਮਰਕੁਸ 7 (PANIRV) »
Bengali Bible (BENIRV)
মার্ক 7 (BENIRV) »
Marathi Bible (MARIRV)
मार्क 7 (MARIRV) »
Gujarati Bible (GUJIRV)
માર્ક 7 (GUJIRV) »
Arabic Bible (AVD)
مَرْقُس 7 (AVD) »
Portuguese Bible (BSL)
Marcos 7 (BSL) »
Vietnamese Bible (VIE)
Mác 7 (VIE) »
Spanish Bible (RVA)
Marcos 7 (RVA) »
Italian Bible (RIV)
Marco 7 (RIV) »
Chinese Simplified (CUVS)
马 可 福 音 7 (CUVS) »
Chinese Traditional (CUVT)
馬 可 福 音 7 (CUVT) »
Albanian Bible (ALB)
Marku 7 (ALB) »
Swedish Bible (SV1917)
Markus 7 (SV1917) »
Russian Bible (RUSV)
Марка 7 (RUSV) »
Ukrainian Bible (UKR)
Марка 7 (UKR) »
Hungarian Bible (KAR)
Márk 7 (KAR) »
Bulgarian Bible (BULG)
Марко 7 (BULG) »
Norwegian Bible (NORSK)
Markus 7 (NORSK) »

ಮಾರ್ಕನು (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List