ಮತ್ತಾಯನು Chapter 14 KANIRV Bible Verse Images

ಮತ್ತಾಯನು 14 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 14 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 14:1 (KANIRV)
Square Portrait Landscape 4K UHD
ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,

ಮತ್ತಾಯನು 14:2 (KANIRV)
Square Portrait Landscape 4K UHD
ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.

ಮತ್ತಾಯನು 14:3 (KANIRV)
Square Portrait Landscape 4K UHD
ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.

ಮತ್ತಾಯನು 14:4 (KANIRV)
Square Portrait Landscape 4K UHD
ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.

ಮತ್ತಾಯನು 14:5 (KANIRV)
Square Portrait Landscape 4K UHD
ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

ಮತ್ತಾಯನು 14:6 (KANIRV)
Square Portrait Landscape 4K UHD
ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.

ಮತ್ತಾಯನು 14:7 (KANIRV)
Square Portrait Landscape 4K UHD
ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.

ಮತ್ತಾಯನು 14:8 (KANIRV)
Square Portrait Landscape 4K UHD
ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.

ಮತ್ತಾಯನು 14:9 (KANIRV)
Square Portrait Landscape 4K UHD
ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.

ಮತ್ತಾಯನು 14:10 (KANIRV)
Square Portrait Landscape 4K UHD
ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,

ಮತ್ತಾಯನು 14:11 (KANIRV)
Square Portrait Landscape 4K UHD
ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.

ಮತ್ತಾಯನು 14:12 (KANIRV)
Square Portrait Landscape 4K UHD
ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.

ಮತ್ತಾಯನು 14:13 (KANIRV)
Square Portrait Landscape 4K UHD
ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.

ಮತ್ತಾಯನು 14:14 (KANIRV)
Square Portrait Landscape 4K UHD
ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಮತ್ತಾಯನು 14:15 (KANIRV)
Square Portrait Landscape 4K UHD
ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.

ಮತ್ತಾಯನು 14:16 (KANIRV)
Square Portrait Landscape 4K UHD
ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.

ಮತ್ತಾಯನು 14:17 (KANIRV)
Square Portrait Landscape 4K UHD
ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,

ಮತ್ತಾಯನು 14:18 (KANIRV)
Square Portrait Landscape 4K UHD
ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು.

ಮತ್ತಾಯನು 14:19 (KANIRV)
Square Portrait Landscape 4K UHD
ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.

ಮತ್ತಾಯನು 14:20 (KANIRV)
Square Portrait Landscape 4K UHD
ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.

ಮತ್ತಾಯನು 14:21 (KANIRV)
Square Portrait Landscape 4K UHD
ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.

ಮತ್ತಾಯನು 14:22 (KANIRV)
Square Portrait Landscape 4K UHD
ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.

ಮತ್ತಾಯನು 14:23 (KANIRV)
Square Portrait Landscape 4K UHD
ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.

ಮತ್ತಾಯನು 14:24 (KANIRV)
Square Portrait Landscape 4K UHD
ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.

ಮತ್ತಾಯನು 14:25 (KANIRV)
Square Portrait Landscape 4K UHD
ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.

ಮತ್ತಾಯನು 14:26 (KANIRV)
Square Portrait Landscape 4K UHD
ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.

ಮತ್ತಾಯನು 14:27 (KANIRV)
Square Portrait Landscape 4K UHD
ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.

ಮತ್ತಾಯನು 14:28 (KANIRV)
Square Portrait Landscape 4K UHD
ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,

ಮತ್ತಾಯನು 14:29 (KANIRV)
Square Portrait Landscape 4K UHD
ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.

ಮತ್ತಾಯನು 14:30 (KANIRV)
Square Portrait Landscape 4K UHD
ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.

ಮತ್ತಾಯನು 14:31 (KANIRV)
Square Portrait Landscape 4K UHD
ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.

ಮತ್ತಾಯನು 14:32 (KANIRV)
Square Portrait Landscape 4K UHD
ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.

ಮತ್ತಾಯನು 14:33 (KANIRV)
Square Portrait Landscape 4K UHD
ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.

ಮತ್ತಾಯನು 14:34 (KANIRV)
Square Portrait Landscape 4K UHD
ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.

ಮತ್ತಾಯನು 14:35 (KANIRV)
Square Portrait Landscape 4K UHD
ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.

ಮತ್ತಾಯನು 14:36 (KANIRV)
Square Portrait Landscape 4K UHD
ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.

Available Bible Translations

American Standard Version (ASV)
Matthew 14 (ASV) »
King James Version (KJV)
Matthew 14 (KJV) »
GOD’S WORD® (GW)
Matthew 14 (GW) »
Berean Bible (BSB)
Matthew 14 (BSB) »
World English Bible (WEB)
Matthew 14 (WEB) »
French Bible (LSG)
Matthieu 14 (LSG) »
German Bible (LUTH1912)
Matthäus 14 (LUTH1912) »
Punjabi Bible (PANIRV)
ਮੱਤੀ 14 (PANIRV) »
Bengali Bible (BENIRV)
মথি 14 (BENIRV) »
Marathi Bible (MARIRV)
मत्तय 14 (MARIRV) »
Gujarati Bible (GUJIRV)
માથ્થી 14 (GUJIRV) »
Arabic Bible (AVD)
مَتَّى 14 (AVD) »
Portuguese Bible (BSL)
Mateus 14 (BSL) »
Vietnamese Bible (VIE)
Ma-thi-ơ 14 (VIE) »
Spanish Bible (RVA)
Mateo 14 (RVA) »
Italian Bible (RIV)
Matteo 14 (RIV) »
Chinese Simplified (CUVS)
马 太 福 音 14 (CUVS) »
Chinese Traditional (CUVT)
馬 太 福 音 14 (CUVT) »
Albanian Bible (ALB)
Mateu 14 (ALB) »
Swedish Bible (SV1917)
Matteus 14 (SV1917) »
Russian Bible (RUSV)
Матфея 14 (RUSV) »
Ukrainian Bible (UKR)
Матвія 14 (UKR) »
Hungarian Bible (KAR)
Máté 14 (KAR) »
Bulgarian Bible (BULG)
Матей 14 (BULG) »
Norwegian Bible (NORSK)
Matteus 14 (NORSK) »

ಮತ್ತಾಯನು (KANIRV) Chapter Selection

KANIRV Book Selection List