ಮತ್ತಾಯನು Chapter 15 KANIRV Bible Verse Images

ಮತ್ತಾಯನು 15 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 15 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 15:1 (KANIRV)
Square Portrait Landscape 4K UHD
ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,

ಮತ್ತಾಯನು 15:2 (KANIRV)
Square Portrait Landscape 4K UHD
“ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.

ಮತ್ತಾಯನು 15:3 (KANIRV)
Square Portrait Landscape 4K UHD
ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?

ಮತ್ತಾಯನು 15:4 (KANIRV)
Square Portrait Landscape 4K UHD
ಹೇಗೆಂದರೆ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.

ಮತ್ತಾಯನು 15:5 (KANIRV)
Square Portrait Landscape 4K UHD
ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,

ಮತ್ತಾಯನು 15:6 (KANIRV)
Square Portrait Landscape 4K UHD
ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.

ಮತ್ತಾಯನು 15:7 (KANIRV)
Square Portrait Landscape 4K UHD
ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,

ಮತ್ತಾಯನು 15:8 (KANIRV)
Square Portrait Landscape 4K UHD
“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.

ಮತ್ತಾಯನು 15:9 (KANIRV)
Square Portrait Landscape 4K UHD
ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.

ಮತ್ತಾಯನು 15:10 (KANIRV)
Square Portrait Landscape 4K UHD
ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,

ಮತ್ತಾಯನು 15:11 (KANIRV)
Square Portrait Landscape 4K UHD
ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.

ಮತ್ತಾಯನು 15:12 (KANIRV)
Square Portrait Landscape 4K UHD
ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.

ಮತ್ತಾಯನು 15:13 (KANIRV)
Square Portrait Landscape 4K UHD
ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.

ಮತ್ತಾಯನು 15:14 (KANIRV)
Square Portrait Landscape 4K UHD
ಅವರನ್ನು ಬಿಡಿರಿ, ಅವರುಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.

ಮತ್ತಾಯನು 15:15 (KANIRV)
Square Portrait Landscape 4K UHD
ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,

ಮತ್ತಾಯನು 15:16 (KANIRV)
Square Portrait Landscape 4K UHD
ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?

ಮತ್ತಾಯನು 15:17 (KANIRV)
Square Portrait Landscape 4K UHD
ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?

ಮತ್ತಾಯನು 15:18 (KANIRV)
Square Portrait Landscape 4K UHD
ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.

ಮತ್ತಾಯನು 15:19 (KANIRV)
Square Portrait Landscape 4K UHD
ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.

ಮತ್ತಾಯನು 15:20 (KANIRV)
Square Portrait Landscape 4K UHD
ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.

ಮತ್ತಾಯನು 15:21 (KANIRV)
Square Portrait Landscape 4K UHD
ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.

ಮತ್ತಾಯನು 15:22 (KANIRV)
Square Portrait Landscape 4K UHD
ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.

ಮತ್ತಾಯನು 15:23 (KANIRV)
Square Portrait Landscape 4K UHD
ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.

ಮತ್ತಾಯನು 15:24 (KANIRV)
Square Portrait Landscape 4K UHD
ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.

ಮತ್ತಾಯನು 15:25 (KANIRV)
Square Portrait Landscape 4K UHD
ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.

ಮತ್ತಾಯನು 15:26 (KANIRV)
Square Portrait Landscape 4K UHD
ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.

ಮತ್ತಾಯನು 15:27 (KANIRV)
Square Portrait Landscape 4K UHD
ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.

ಮತ್ತಾಯನು 15:28 (KANIRV)
Square Portrait Landscape 4K UHD
ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.

ಮತ್ತಾಯನು 15:29 (KANIRV)
Square Portrait Landscape 4K UHD
ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.

ಮತ್ತಾಯನು 15:30 (KANIRV)
Square Portrait Landscape 4K UHD
ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.

ಮತ್ತಾಯನು 15:31 (KANIRV)
Square Portrait Landscape 4K UHD
ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.

ಮತ್ತಾಯನು 15:32 (KANIRV)
Square Portrait Landscape 4K UHD
ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.

ಮತ್ತಾಯನು 15:33 (KANIRV)
Square Portrait Landscape 4K UHD
ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.

ಮತ್ತಾಯನು 15:34 (KANIRV)
Square Portrait Landscape 4K UHD
ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.

ಮತ್ತಾಯನು 15:35 (KANIRV)
Square Portrait Landscape 4K UHD
ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.

ಮತ್ತಾಯನು 15:36 (KANIRV)
Square Portrait Landscape 4K UHD
ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.

ಮತ್ತಾಯನು 15:37 (KANIRV)
Square Portrait Landscape 4K UHD
ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.

ಮತ್ತಾಯನು 15:38 (KANIRV)
Square Portrait Landscape 4K UHD
ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.

ಮತ್ತಾಯನು 15:39 (KANIRV)
Square Portrait Landscape 4K UHD
ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.

Available Bible Translations

American Standard Version
Matthew 15 (ASV) »
King James Version
Matthew 15 (KJV) »
GOD’S WORD® (GW)
Matthew 15 (GW) »
World English Bible
Matthew 15 (WEB) »
Louis Segond 1910
Matthieu 15 (LSG) »
इंडियन रिवाइज्ड वर्जन - हिंदी
मत्ती 15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 15 (PANIRV) »
ভারতীয় সংশোধিত সংস্করণ - বাংলা
মথি 15 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 15 (TAMIRV) »
इंडियन रिवाइज्ड वर्जन - मराठी
मत्तय 15 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 15 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 15 (GUJIRV) »
الكتاب المقدس باللغة العربية، فان دايك
مَتَّى 15 (AVD) »
תנ ך עברי מודרני
הבשורה על־פי מתי 15 (HEB) »
Bíblia Sagrada Português
Mateus 15 (BSL) »
Kinh Thánh: Tiếng Việt
Ma-thi-ơ 15 (VIE) »
Reina Valera Antigua
Mateo 15 (RVA) »
La Sacra Bibbia
Matteo 15 (RIV) »
圣 经 简体中文和合本
马 太 福 音 15 (CUVS) »
聖 經 繁體中文和合本
馬 太 福 音 15 (CUVT) »
Bibla e Shenjtë
Mateu 15 (ALB) »
Svenska Bibeln 1917
Matteus 15 (SV1917) »
Библия на русском
Матфея 15 (RUSV) »
Українська Біблія
Матвія 15 (UKR) »
Szent Biblia - Magyar
Máté 15 (KAR) »
Българска Библия
Матей 15 (BULG) »
Det Norsk Bibel
Matteus 15 (NORSK) »
Kitaabka Quduuska Ah
Matayos 15 (SOM) »
De Heilige Schrift
Mattheüs 15 (NLD) »

ಮತ್ತಾಯನು (KANIRV) Chapter Selection

KANIRV Book Selection List