ಮತ್ತಾಯನು Chapter 16 KANIRV Bible Verse Images

ಮತ್ತಾಯನು 16 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 16 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 16:1 (KANIRV)
Square Portrait Landscape 4K UHD
ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.

ಮತ್ತಾಯನು 16:2 (KANIRV)
Square Portrait Landscape 4K UHD
ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.

ಮತ್ತಾಯನು 16:3 (KANIRV)
Square Portrait Landscape 4K UHD
ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?

ಮತ್ತಾಯನು 16:4 (KANIRV)
Square Portrait Landscape 4K UHD
ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.

ಮತ್ತಾಯನು 16:5 (KANIRV)
Square Portrait Landscape 4K UHD
ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.

ಮತ್ತಾಯನು 16:6 (KANIRV)
Square Portrait Landscape 4K UHD
ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.

ಮತ್ತಾಯನು 16:7 (KANIRV)
Square Portrait Landscape 4K UHD
ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಮತ್ತಾಯನು 16:8 (KANIRV)
Square Portrait Landscape 4K UHD
ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?

ಮತ್ತಾಯನು 16:9 (KANIRV)
Square Portrait Landscape 4K UHD
ಆ ಐದು ರೊಟ್ಟಿಗಳನ್ನುಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?

ಮತ್ತಾಯನು 16:10 (KANIRV)
Square Portrait Landscape 4K UHD
ಇಲ್ಲವೆ ಆಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?

ಮತ್ತಾಯನು 16:11 (KANIRV)
Square Portrait Landscape 4K UHD
ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.

ಮತ್ತಾಯನು 16:12 (KANIRV)
Square Portrait Landscape 4K UHD
ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.

ಮತ್ತಾಯನು 16:13 (KANIRV)
Square Portrait Landscape 4K UHD
ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.

ಮತ್ತಾಯನು 16:14 (KANIRV)
Square Portrait Landscape 4K UHD
ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.

ಮತ್ತಾಯನು 16:15 (KANIRV)
Square Portrait Landscape 4K UHD
ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”

ಮತ್ತಾಯನು 16:16 (KANIRV)
Square Portrait Landscape 4K UHD
ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.

ಮತ್ತಾಯನು 16:17 (KANIRV)
Square Portrait Landscape 4K UHD
ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.

ಮತ್ತಾಯನು 16:18 (KANIRV)
Square Portrait Landscape 4K UHD
ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.

ಮತ್ತಾಯನು 16:19 (KANIRV)
Square Portrait Landscape 4K UHD
ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು.ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.

ಮತ್ತಾಯನು 16:20 (KANIRV)
Square Portrait Landscape 4K UHD
ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

ಮತ್ತಾಯನು 16:21 (KANIRV)
Square Portrait Landscape 4K UHD
ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಮತ್ತಾಯನು 16:22 (KANIRV)
Square Portrait Landscape 4K UHD
ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.

ಮತ್ತಾಯನು 16:23 (KANIRV)
Square Portrait Landscape 4K UHD
ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.

ಮತ್ತಾಯನು 16:24 (KANIRV)
Square Portrait Landscape 4K UHD
ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಮತ್ತಾಯನು 16:25 (KANIRV)
Square Portrait Landscape 4K UHD
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.

ಮತ್ತಾಯನು 16:26 (KANIRV)
Square Portrait Landscape 4K UHD
ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?

ಮತ್ತಾಯನು 16:27 (KANIRV)
Square Portrait Landscape 4K UHD
ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.

ಮತ್ತಾಯನು 16:28 (KANIRV)
Square Portrait Landscape 4K UHD
“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

Available Bible Translations

American Standard Version (ASV)
Matthew 16 (ASV) »
King James Version (KJV)
Matthew 16 (KJV) »
GOD’S WORD® (GW)
Matthew 16 (GW) »
Berean Bible (BSB)
Matthew 16 (BSB) »
World English Bible (WEB)
Matthew 16 (WEB) »
French Bible (LSG)
Matthieu 16 (LSG) »
German Bible (LUTH1912)
Matthäus 16 (LUTH1912) »
Punjabi Bible (PANIRV)
ਮੱਤੀ 16 (PANIRV) »
Bengali Bible (BENIRV)
মথি 16 (BENIRV) »
Marathi Bible (MARIRV)
मत्तय 16 (MARIRV) »
Gujarati Bible (GUJIRV)
માથ્થી 16 (GUJIRV) »
Arabic Bible (AVD)
مَتَّى 16 (AVD) »
Portuguese Bible (BSL)
Mateus 16 (BSL) »
Vietnamese Bible (VIE)
Ma-thi-ơ 16 (VIE) »
Spanish Bible (RVA)
Mateo 16 (RVA) »
Italian Bible (RIV)
Matteo 16 (RIV) »
Chinese Simplified (CUVS)
马 太 福 音 16 (CUVS) »
Chinese Traditional (CUVT)
馬 太 福 音 16 (CUVT) »
Albanian Bible (ALB)
Mateu 16 (ALB) »
Swedish Bible (SV1917)
Matteus 16 (SV1917) »
Russian Bible (RUSV)
Матфея 16 (RUSV) »
Ukrainian Bible (UKR)
Матвія 16 (UKR) »
Hungarian Bible (KAR)
Máté 16 (KAR) »
Bulgarian Bible (BULG)
Матей 16 (BULG) »
Norwegian Bible (NORSK)
Matteus 16 (NORSK) »

ಮತ್ತಾಯನು (KANIRV) Chapter Selection

KANIRV Book Selection List