ಮತ್ತಾಯನು Chapter 17 KANIRV Bible Verse Images

ಮತ್ತಾಯನು 17 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 17 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 17:1 (KANIRV)
Square Portrait Landscape 4K UHD
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.

ಮತ್ತಾಯನು 17:2 (KANIRV)
Square Portrait Landscape 4K UHD
ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.

ಮತ್ತಾಯನು 17:3 (KANIRV)
Square Portrait Landscape 4K UHD
ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.

ಮತ್ತಾಯನು 17:4 (KANIRV)
Square Portrait Landscape 4K UHD
ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.

ಮತ್ತಾಯನು 17:5 (KANIRV)
Square Portrait Landscape 4K UHD
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.

ಮತ್ತಾಯನು 17:6 (KANIRV)
Square Portrait Landscape 4K UHD
ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

ಮತ್ತಾಯನು 17:7 (KANIRV)
Square Portrait Landscape 4K UHD
ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.

ಮತ್ತಾಯನು 17:8 (KANIRV)
Square Portrait Landscape 4K UHD
ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.

ಮತ್ತಾಯನು 17:9 (KANIRV)
Square Portrait Landscape 4K UHD
ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.

ಮತ್ತಾಯನು 17:10 (KANIRV)
Square Portrait Landscape 4K UHD
ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.

ಮತ್ತಾಯನು 17:11 (KANIRV)
Square Portrait Landscape 4K UHD
ಯೇಸು ಅವರಿಗೆ,“ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.

ಮತ್ತಾಯನು 17:12 (KANIRV)
Square Portrait Landscape 4K UHD
ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.

ಮತ್ತಾಯನು 17:13 (KANIRV)
Square Portrait Landscape 4K UHD
ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.

ಮತ್ತಾಯನು 17:14 (KANIRV)
Square Portrait Landscape 4K UHD
ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,

ಮತ್ತಾಯನು 17:15 (KANIRV)
Square Portrait Landscape 4K UHD
“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.

ಮತ್ತಾಯನು 17:16 (KANIRV)
Square Portrait Landscape 4K UHD
ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.

ಮತ್ತಾಯನು 17:17 (KANIRV)
Square Portrait Landscape 4K UHD
ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.

ಮತ್ತಾಯನು 17:18 (KANIRV)
Square Portrait Landscape 4K UHD
ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.

ಮತ್ತಾಯನು 17:19 (KANIRV)
Square Portrait Landscape 4K UHD
ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”

ಮತ್ತಾಯನು 17:20 (KANIRV)
Square Portrait Landscape 4K UHD
ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,

ಮತ್ತಾಯನು 17:21 (KANIRV)
Square Portrait Landscape 4K UHD
ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.

ಮತ್ತಾಯನು 17:22 (KANIRV)
Square Portrait Landscape 4K UHD
ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.

ಮತ್ತಾಯನು 17:23 (KANIRV)
Square Portrait Landscape 4K UHD
ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಮತ್ತಾಯನು 17:24 (KANIRV)
Square Portrait Landscape 4K UHD
ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.

ಮತ್ತಾಯನು 17:25 (KANIRV)
Square Portrait Landscape 4K UHD
ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.

ಮತ್ತಾಯನು 17:26 (KANIRV)
Square Portrait Landscape 4K UHD
ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.

ಮತ್ತಾಯನು 17:27 (KANIRV)
Square Portrait Landscape 4K UHD
ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

Available Bible Translations

American Standard Version (ASV)
Matthew 17 (ASV) »
King James Version (KJV)
Matthew 17 (KJV) »
GOD’S WORD® (GW)
Matthew 17 (GW) »
Berean Bible (BSB)
Matthew 17 (BSB) »
World English Bible (WEB)
Matthew 17 (WEB) »
French Bible (LSG)
Matthieu 17 (LSG) »
German Bible (LUTH1912)
Matthäus 17 (LUTH1912) »
Punjabi Bible (PANIRV)
ਮੱਤੀ 17 (PANIRV) »
Bengali Bible (BENIRV)
মথি 17 (BENIRV) »
Marathi Bible (MARIRV)
मत्तय 17 (MARIRV) »
Gujarati Bible (GUJIRV)
માથ્થી 17 (GUJIRV) »
Arabic Bible (AVD)
مَتَّى 17 (AVD) »
Portuguese Bible (BSL)
Mateus 17 (BSL) »
Vietnamese Bible (VIE)
Ma-thi-ơ 17 (VIE) »
Spanish Bible (RVA)
Mateo 17 (RVA) »
Italian Bible (RIV)
Matteo 17 (RIV) »
Chinese Simplified (CUVS)
马 太 福 音 17 (CUVS) »
Chinese Traditional (CUVT)
馬 太 福 音 17 (CUVT) »
Albanian Bible (ALB)
Mateu 17 (ALB) »
Swedish Bible (SV1917)
Matteus 17 (SV1917) »
Russian Bible (RUSV)
Матфея 17 (RUSV) »
Ukrainian Bible (UKR)
Матвія 17 (UKR) »
Hungarian Bible (KAR)
Máté 17 (KAR) »
Bulgarian Bible (BULG)
Матей 17 (BULG) »
Norwegian Bible (NORSK)
Matteus 17 (NORSK) »

ಮತ್ತಾಯನು (KANIRV) Chapter Selection

KANIRV Book Selection List