ಮತ್ತಾಯನು Chapter 19 KANIRV Bible Verse Images

ಮತ್ತಾಯನು 19 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 19 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 19:1 (KANIRV)
Square Portrait Landscape 4K UHD
ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.

ಮತ್ತಾಯನು 19:2 (KANIRV)
Square Portrait Landscape 4K UHD
ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.

ಮತ್ತಾಯನು 19:3 (KANIRV)
Square Portrait Landscape 4K UHD
ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,

ಮತ್ತಾಯನು 19:4 (KANIRV)
Square Portrait Landscape 4K UHD
ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,

ಮತ್ತಾಯನು 19:5 (KANIRV)
Square Portrait Landscape 4K UHD
‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’

ಮತ್ತಾಯನು 19:6 (KANIRV)
Square Portrait Landscape 4K UHD
ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.

ಮತ್ತಾಯನು 19:7 (KANIRV)
Square Portrait Landscape 4K UHD
ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.

ಮತ್ತಾಯನು 19:8 (KANIRV)
Square Portrait Landscape 4K UHD
ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.

ಮತ್ತಾಯನು 19:9 (KANIRV)
Square Portrait Landscape 4K UHD
ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ;ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.

ಮತ್ತಾಯನು 19:10 (KANIRV)
Square Portrait Landscape 4K UHD
ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.

ಮತ್ತಾಯನು 19:11 (KANIRV)
Square Portrait Landscape 4K UHD
ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.

ಮತ್ತಾಯನು 19:12 (KANIRV)
Square Portrait Landscape 4K UHD
ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತುಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.

ಮತ್ತಾಯನು 19:13 (KANIRV)
Square Portrait Landscape 4K UHD
ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಮತ್ತಾಯನು 19:14 (KANIRV)
Square Portrait Landscape 4K UHD
ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.

ಮತ್ತಾಯನು 19:15 (KANIRV)
Square Portrait Landscape 4K UHD
ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.

ಮತ್ತಾಯನು 19:16 (KANIRV)
Square Portrait Landscape 4K UHD
ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಮತ್ತಾಯನು 19:17 (KANIRV)
Square Portrait Landscape 4K UHD
ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.

ಮತ್ತಾಯನು 19:18 (KANIRV)
Square Portrait Landscape 4K UHD
ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.

ಮತ್ತಾಯನು 19:19 (KANIRV)
Square Portrait Landscape 4K UHD
ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.

ಮತ್ತಾಯನು 19:20 (KANIRV)
Square Portrait Landscape 4K UHD
ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.

ಮತ್ತಾಯನು 19:21 (KANIRV)
Square Portrait Landscape 4K UHD
ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಮತ್ತಾಯನು 19:22 (KANIRV)
Square Portrait Landscape 4K UHD
ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

ಮತ್ತಾಯನು 19:23 (KANIRV)
Square Portrait Landscape 4K UHD
ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಮತ್ತಾಯನು 19:24 (KANIRV)
Square Portrait Landscape 4K UHD
“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.

ಮತ್ತಾಯನು 19:25 (KANIRV)
Square Portrait Landscape 4K UHD
ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.

ಮತ್ತಾಯನು 19:26 (KANIRV)
Square Portrait Landscape 4K UHD
ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.

ಮತ್ತಾಯನು 19:27 (KANIRV)
Square Portrait Landscape 4K UHD
ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.

ಮತ್ತಾಯನು 19:28 (KANIRV)
Square Portrait Landscape 4K UHD
ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಮತ್ತಾಯನು 19:29 (KANIRV)
Square Portrait Landscape 4K UHD
ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.

ಮತ್ತಾಯನು 19:30 (KANIRV)
Square Portrait Landscape 4K UHD
ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.

Available Bible Translations

American Standard Version (ASV)
Matthew 19 (ASV) »
King James Version (KJV)
Matthew 19 (KJV) »
GOD’S WORD® (GW)
Matthew 19 (GW) »
Berean Bible (BSB)
Matthew 19 (BSB) »
World English Bible (WEB)
Matthew 19 (WEB) »
French Bible (LSG)
Matthieu 19 (LSG) »
German Bible (LUTH1912)
Matthäus 19 (LUTH1912) »
Punjabi Bible (PANIRV)
ਮੱਤੀ 19 (PANIRV) »
Bengali Bible (BENIRV)
মথি 19 (BENIRV) »
Marathi Bible (MARIRV)
मत्तय 19 (MARIRV) »
Gujarati Bible (GUJIRV)
માથ્થી 19 (GUJIRV) »
Arabic Bible (AVD)
مَتَّى 19 (AVD) »
Portuguese Bible (BSL)
Mateus 19 (BSL) »
Vietnamese Bible (VIE)
Ma-thi-ơ 19 (VIE) »
Spanish Bible (RVA)
Mateo 19 (RVA) »
Italian Bible (RIV)
Matteo 19 (RIV) »
Chinese Simplified (CUVS)
马 太 福 音 19 (CUVS) »
Chinese Traditional (CUVT)
馬 太 福 音 19 (CUVT) »
Albanian Bible (ALB)
Mateu 19 (ALB) »
Swedish Bible (SV1917)
Matteus 19 (SV1917) »
Russian Bible (RUSV)
Матфея 19 (RUSV) »
Ukrainian Bible (UKR)
Матвія 19 (UKR) »
Hungarian Bible (KAR)
Máté 19 (KAR) »
Bulgarian Bible (BULG)
Матей 19 (BULG) »
Norwegian Bible (NORSK)
Matteus 19 (NORSK) »

ಮತ್ತಾಯನು (KANIRV) Chapter Selection

KANIRV Book Selection List