ಮತ್ತಾಯನು Chapter 25 KANIRV Bible Verse Images

ಮತ್ತಾಯನು 25 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 25 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 25:1 (KANIRV)
Square Portrait Landscape 4K UHD
“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನುತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.

ಮತ್ತಾಯನು 25:2 (KANIRV)
Square Portrait Landscape 4K UHD
ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.

ಮತ್ತಾಯನು 25:3 (KANIRV)
Square Portrait Landscape 4K UHD
ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.

ಮತ್ತಾಯನು 25:4 (KANIRV)
Square Portrait Landscape 4K UHD
ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

ಮತ್ತಾಯನು 25:5 (KANIRV)
Square Portrait Landscape 4K UHD
ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.

ಮತ್ತಾಯನು 25:6 (KANIRV)
Square Portrait Landscape 4K UHD
ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.

ಮತ್ತಾಯನು 25:7 (KANIRV)
Square Portrait Landscape 4K UHD
ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.

ಮತ್ತಾಯನು 25:8 (KANIRV)
Square Portrait Landscape 4K UHD
ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.

ಮತ್ತಾಯನು 25:9 (KANIRV)
Square Portrait Landscape 4K UHD
ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.

ಮತ್ತಾಯನು 25:10 (KANIRV)
Square Portrait Landscape 4K UHD
ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.

ಮತ್ತಾಯನು 25:11 (KANIRV)
Square Portrait Landscape 4K UHD
ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.

ಮತ್ತಾಯನು 25:12 (KANIRV)
Square Portrait Landscape 4K UHD
ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.

ಮತ್ತಾಯನು 25:13 (KANIRV)
Square Portrait Landscape 4K UHD
ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.

ಮತ್ತಾಯನು 25:14 (KANIRV)
Square Portrait Landscape 4K UHD
“ದೇವರ ರಾಜ್ಯವು ಹೇಗೆಂದರೆದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.

ಮತ್ತಾಯನು 25:15 (KANIRV)
Square Portrait Landscape 4K UHD
ಅವನು ಒಬ್ಬನಿಗೆ ಐದುತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.

ಮತ್ತಾಯನು 25:16 (KANIRV)
Square Portrait Landscape 4K UHD
ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.

ಮತ್ತಾಯನು 25:17 (KANIRV)
Square Portrait Landscape 4K UHD
ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.

ಮತ್ತಾಯನು 25:18 (KANIRV)
Square Portrait Landscape 4K UHD
ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.

ಮತ್ತಾಯನು 25:19 (KANIRV)
Square Portrait Landscape 4K UHD
ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು

ಮತ್ತಾಯನು 25:20 (KANIRV)
Square Portrait Landscape 4K UHD
ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.

ಮತ್ತಾಯನು 25:21 (KANIRV)
Square Portrait Landscape 4K UHD
ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.

ಮತ್ತಾಯನು 25:22 (KANIRV)
Square Portrait Landscape 4K UHD
ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.

ಮತ್ತಾಯನು 25:23 (KANIRV)
Square Portrait Landscape 4K UHD
ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.

ಮತ್ತಾಯನು 25:24 (KANIRV)
Square Portrait Landscape 4K UHD
ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು

ಮತ್ತಾಯನು 25:25 (KANIRV)
Square Portrait Landscape 4K UHD
ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.

ಮತ್ತಾಯನು 25:26 (KANIRV)
Square Portrait Landscape 4K UHD
ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?

ಮತ್ತಾಯನು 25:27 (KANIRV)
Square Portrait Landscape 4K UHD
ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,

ಮತ್ತಾಯನು 25:28 (KANIRV)
Square Portrait Landscape 4K UHD
ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.

ಮತ್ತಾಯನು 25:29 (KANIRV)
Square Portrait Landscape 4K UHD
ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.

ಮತ್ತಾಯನು 25:30 (KANIRV)
Square Portrait Landscape 4K UHD
ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’

ಮತ್ತಾಯನು 25:31 (KANIRV)
Square Portrait Landscape 4K UHD
“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;

ಮತ್ತಾಯನು 25:32 (KANIRV)
Square Portrait Landscape 4K UHD
ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.

ಮತ್ತಾಯನು 25:33 (KANIRV)
Square Portrait Landscape 4K UHD
ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.

ಮತ್ತಾಯನು 25:34 (KANIRV)
Square Portrait Landscape 4K UHD
ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.

ಮತ್ತಾಯನು 25:35 (KANIRV)
Square Portrait Landscape 4K UHD
ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;

ಮತ್ತಾಯನು 25:36 (KANIRV)
Square Portrait Landscape 4K UHD
ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.

ಮತ್ತಾಯನು 25:37 (KANIRV)
Square Portrait Landscape 4K UHD
ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?

ಮತ್ತಾಯನು 25:38 (KANIRV)
Square Portrait Landscape 4K UHD
ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?

ಮತ್ತಾಯನು 25:39 (KANIRV)
Square Portrait Landscape 4K UHD
ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.

ಮತ್ತಾಯನು 25:40 (KANIRV)
Square Portrait Landscape 4K UHD
ಅದಕ್ಕೆ ಉತ್ತರವಾಗಿ ಅರಸನು,‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.

ಮತ್ತಾಯನು 25:41 (KANIRV)
Square Portrait Landscape 4K UHD
ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಮತ್ತಾಯನು 25:42 (KANIRV)
Square Portrait Landscape 4K UHD
ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.

ಮತ್ತಾಯನು 25:43 (KANIRV)
Square Portrait Landscape 4K UHD
ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.

ಮತ್ತಾಯನು 25:44 (KANIRV)
Square Portrait Landscape 4K UHD
ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.

ಮತ್ತಾಯನು 25:45 (KANIRV)
Square Portrait Landscape 4K UHD
ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.

ಮತ್ತಾಯನು 25:46 (KANIRV)
Square Portrait Landscape 4K UHD
ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.

Available Bible Translations

American Standard Version
Matthew 25 (ASV) »
King James Version
Matthew 25 (KJV) »
GOD’S WORD® (GW)
Matthew 25 (GW) »
World English Bible
Matthew 25 (WEB) »
Louis Segond 1910
Matthieu 25 (LSG) »
इंडियन रिवाइज्ड वर्जन - हिंदी
मत्ती 25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 25 (PANIRV) »
ভারতীয় সংশোধিত সংস্করণ - বাংলা
মথি 25 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 25 (TAMIRV) »
इंडियन रिवाइज्ड वर्जन - मराठी
मत्तय 25 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 25 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 25 (GUJIRV) »
الكتاب المقدس باللغة العربية، فان دايك
مَتَّى 25 (AVD) »
תנ ך עברי מודרני
הבשורה על־פי מתי 25 (HEB) »
Bíblia Sagrada Português
Mateus 25 (BSL) »
Kinh Thánh: Tiếng Việt
Ma-thi-ơ 25 (VIE) »
Reina Valera Antigua
Mateo 25 (RVA) »
La Sacra Bibbia
Matteo 25 (RIV) »
圣 经 简体中文和合本
马 太 福 音 25 (CUVS) »
聖 經 繁體中文和合本
馬 太 福 音 25 (CUVT) »
Bibla e Shenjtë
Mateu 25 (ALB) »
Svenska Bibeln 1917
Matteus 25 (SV1917) »
Библия на русском
Матфея 25 (RUSV) »
Українська Біблія
Матвія 25 (UKR) »
Szent Biblia - Magyar
Máté 25 (KAR) »
Българска Библия
Матей 25 (BULG) »
Det Norsk Bibel
Matteus 25 (NORSK) »
Kitaabka Quduuska Ah
Matayos 25 (SOM) »
De Heilige Schrift
Mattheüs 25 (NLD) »

ಮತ್ತಾಯನು (KANIRV) Chapter Selection

KANIRV Book Selection List