ಮತ್ತಾಯನು Chapter 26 KANIRV Bible Verse Images

ಮತ್ತಾಯನು 26 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 26 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 26:1 (KANIRV)
Square Portrait Landscape 4K UHD
ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;

ಮತ್ತಾಯನು 26:2 (KANIRV)
Square Portrait Landscape 4K UHD
ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.

ಮತ್ತಾಯನು 26:3 (KANIRV)
Square Portrait Landscape 4K UHD
ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು

ಮತ್ತಾಯನು 26:4 (KANIRV)
Square Portrait Landscape 4K UHD
ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.

ಮತ್ತಾಯನು 26:5 (KANIRV)
Square Portrait Landscape 4K UHD
“ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.

ಮತ್ತಾಯನು 26:6 (KANIRV)
Square Portrait Landscape 4K UHD
ಯೇಸು ಬೇಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು

ಮತ್ತಾಯನು 26:7 (KANIRV)
Square Portrait Landscape 4K UHD
ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.

ಮತ್ತಾಯನು 26:8 (KANIRV)
Square Portrait Landscape 4K UHD
ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?

ಮತ್ತಾಯನು 26:9 (KANIRV)
Square Portrait Landscape 4K UHD
ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು.

ಮತ್ತಾಯನು 26:10 (KANIRV)
Square Portrait Landscape 4K UHD
ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.

ಮತ್ತಾಯನು 26:11 (KANIRV)
Square Portrait Landscape 4K UHD
ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.

ಮತ್ತಾಯನು 26:12 (KANIRV)
Square Portrait Landscape 4K UHD
ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.

ಮತ್ತಾಯನು 26:13 (KANIRV)
Square Portrait Landscape 4K UHD
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.

ಮತ್ತಾಯನು 26:14 (KANIRV)
Square Portrait Landscape 4K UHD
ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,

ಮತ್ತಾಯನು 26:15 (KANIRV)
Square Portrait Landscape 4K UHD
“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.

ಮತ್ತಾಯನು 26:16 (KANIRV)
Square Portrait Landscape 4K UHD
ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.

ಮತ್ತಾಯನು 26:17 (KANIRV)
Square Portrait Landscape 4K UHD
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.

ಮತ್ತಾಯನು 26:18 (KANIRV)
Square Portrait Landscape 4K UHD
ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.

ಮತ್ತಾಯನು 26:19 (KANIRV)
Square Portrait Landscape 4K UHD
ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.

ಮತ್ತಾಯನು 26:20 (KANIRV)
Square Portrait Landscape 4K UHD
ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.

ಮತ್ತಾಯನು 26:21 (KANIRV)
Square Portrait Landscape 4K UHD
ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.

ಮತ್ತಾಯನು 26:22 (KANIRV)
Square Portrait Landscape 4K UHD
ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು.

ಮತ್ತಾಯನು 26:23 (KANIRV)
Square Portrait Landscape 4K UHD
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.

ಮತ್ತಾಯನು 26:24 (KANIRV)
Square Portrait Landscape 4K UHD
ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.

ಮತ್ತಾಯನು 26:25 (KANIRV)
Square Portrait Landscape 4K UHD
ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.

ಮತ್ತಾಯನು 26:26 (KANIRV)
Square Portrait Landscape 4K UHD
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.

ಮತ್ತಾಯನು 26:27 (KANIRV)
Square Portrait Landscape 4K UHD
ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,

ಮತ್ತಾಯನು 26:28 (KANIRV)
Square Portrait Landscape 4K UHD
ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.

ಮತ್ತಾಯನು 26:29 (KANIRV)
Square Portrait Landscape 4K UHD
ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.

ಮತ್ತಾಯನು 26:30 (KANIRV)
Square Portrait Landscape 4K UHD
ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.

ಮತ್ತಾಯನು 26:31 (KANIRV)
Square Portrait Landscape 4K UHD
ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”

ಮತ್ತಾಯನು 26:32 (KANIRV)
Square Portrait Landscape 4K UHD
“ಆದರೆ ನಾನು ಜೀವಿತನಾಗಿ ಎದ್ದ ಮೇಲೆನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.

ಮತ್ತಾಯನು 26:33 (KANIRV)
Square Portrait Landscape 4K UHD
ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.

ಮತ್ತಾಯನು 26:34 (KANIRV)
Square Portrait Landscape 4K UHD
ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು.

ಮತ್ತಾಯನು 26:35 (KANIRV)
Square Portrait Landscape 4K UHD
ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.

ಮತ್ತಾಯನು 26:36 (KANIRV)
Square Portrait Landscape 4K UHD
ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,

ಮತ್ತಾಯನು 26:37 (KANIRV)
Square Portrait Landscape 4K UHD
ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.

ಮತ್ತಾಯನು 26:38 (KANIRV)
Square Portrait Landscape 4K UHD
ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.

ಮತ್ತಾಯನು 26:39 (KANIRV)
Square Portrait Landscape 4K UHD
ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.

ಮತ್ತಾಯನು 26:40 (KANIRV)
Square Portrait Landscape 4K UHD
ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?

ಮತ್ತಾಯನು 26:41 (KANIRV)
Square Portrait Landscape 4K UHD
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.

ಮತ್ತಾಯನು 26:42 (KANIRV)
Square Portrait Landscape 4K UHD
ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.

ಮತ್ತಾಯನು 26:43 (KANIRV)
Square Portrait Landscape 4K UHD
ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.

ಮತ್ತಾಯನು 26:44 (KANIRV)
Square Portrait Landscape 4K UHD
ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.

ಮತ್ತಾಯನು 26:45 (KANIRV)
Square Portrait Landscape 4K UHD
ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.

ಮತ್ತಾಯನು 26:46 (KANIRV)
Square Portrait Landscape 4K UHD
ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.

ಮತ್ತಾಯನು 26:47 (KANIRV)
Square Portrait Landscape 4K UHD
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.

ಮತ್ತಾಯನು 26:48 (KANIRV)
Square Portrait Landscape 4K UHD
ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.

ಮತ್ತಾಯನು 26:49 (KANIRV)
Square Portrait Landscape 4K UHD
ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.

ಮತ್ತಾಯನು 26:50 (KANIRV)
Square Portrait Landscape 4K UHD
ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.

ಮತ್ತಾಯನು 26:51 (KANIRV)
Square Portrait Landscape 4K UHD
ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.

ಮತ್ತಾಯನು 26:52 (KANIRV)
Square Portrait Landscape 4K UHD
ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,

ಮತ್ತಾಯನು 26:53 (KANIRV)
Square Portrait Landscape 4K UHD
ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?

ಮತ್ತಾಯನು 26:54 (KANIRV)
Square Portrait Landscape 4K UHD
ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.

ಮತ್ತಾಯನು 26:55 (KANIRV)
Square Portrait Landscape 4K UHD
ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;

ಮತ್ತಾಯನು 26:56 (KANIRV)
Square Portrait Landscape 4K UHD
ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಮತ್ತಾಯನು 26:57 (KANIRV)
Square Portrait Landscape 4K UHD
ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.

ಮತ್ತಾಯನು 26:58 (KANIRV)
Square Portrait Landscape 4K UHD
ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.

ಮತ್ತಾಯನು 26:59 (KANIRV)
Square Portrait Landscape 4K UHD
ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.

ಮತ್ತಾಯನು 26:60 (KANIRV)
Square Portrait Landscape 4K UHD
ಅನಂತರ ಇಬ್ಬರು ಮುಂದೆ ಬಂದು,

ಮತ್ತಾಯನು 26:61 (KANIRV)
Square Portrait Landscape 4K UHD
“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;

ಮತ್ತಾಯನು 26:62 (KANIRV)
Square Portrait Landscape 4K UHD
ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.

ಮತ್ತಾಯನು 26:63 (KANIRV)
Square Portrait Landscape 4K UHD
ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.

ಮತ್ತಾಯನು 26:64 (KANIRV)
Square Portrait Landscape 4K UHD
ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.

ಮತ್ತಾಯನು 26:65 (KANIRV)
Square Portrait Landscape 4K UHD
ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;

ಮತ್ತಾಯನು 26:66 (KANIRV)
Square Portrait Landscape 4K UHD
ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.

ಮತ್ತಾಯನು 26:67 (KANIRV)
Square Portrait Landscape 4K UHD
ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,

ಮತ್ತಾಯನು 26:68 (KANIRV)
Square Portrait Landscape 4K UHD
“ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.

ಮತ್ತಾಯನು 26:69 (KANIRV)
Square Portrait Landscape 4K UHD
ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.

ಮತ್ತಾಯನು 26:70 (KANIRV)
Square Portrait Landscape 4K UHD
ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.

ಮತ್ತಾಯನು 26:71 (KANIRV)
Square Portrait Landscape 4K UHD
ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.

ಮತ್ತಾಯನು 26:72 (KANIRV)
Square Portrait Landscape 4K UHD
ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.

ಮತ್ತಾಯನು 26:73 (KANIRV)
Square Portrait Landscape 4K UHD
ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು

ಮತ್ತಾಯನು 26:74 (KANIRV)
Square Portrait Landscape 4K UHD
ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.

ಮತ್ತಾಯನು 26:75 (KANIRV)
Square Portrait Landscape 4K UHD
ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

Available Bible Translations

American Standard Version (ASV)
Matthew 26 (ASV) »
King James Version (KJV)
Matthew 26 (KJV) »
GOD’S WORD® (GW)
Matthew 26 (GW) »
Berean Bible (BSB)
Matthew 26 (BSB) »
World English Bible (WEB)
Matthew 26 (WEB) »
French Bible (LSG)
Matthieu 26 (LSG) »
German Bible (LUTH1912)
Matthäus 26 (LUTH1912) »
Punjabi Bible (PANIRV)
ਮੱਤੀ 26 (PANIRV) »
Bengali Bible (BENIRV)
মথি 26 (BENIRV) »
Marathi Bible (MARIRV)
मत्तय 26 (MARIRV) »
Gujarati Bible (GUJIRV)
માથ્થી 26 (GUJIRV) »
Arabic Bible (AVD)
مَتَّى 26 (AVD) »
Portuguese Bible (BSL)
Mateus 26 (BSL) »
Vietnamese Bible (VIE)
Ma-thi-ơ 26 (VIE) »
Spanish Bible (RVA)
Mateo 26 (RVA) »
Italian Bible (RIV)
Matteo 26 (RIV) »
Chinese Simplified (CUVS)
马 太 福 音 26 (CUVS) »
Chinese Traditional (CUVT)
馬 太 福 音 26 (CUVT) »
Albanian Bible (ALB)
Mateu 26 (ALB) »
Swedish Bible (SV1917)
Matteus 26 (SV1917) »
Russian Bible (RUSV)
Матфея 26 (RUSV) »
Ukrainian Bible (UKR)
Матвія 26 (UKR) »
Hungarian Bible (KAR)
Máté 26 (KAR) »
Bulgarian Bible (BULG)
Матей 26 (BULG) »
Norwegian Bible (NORSK)
Matteus 26 (NORSK) »

ಮತ್ತಾಯನು (KANIRV) Chapter Selection

KANIRV Book Selection List