ಮತ್ತಾಯನು Chapter 27 KANIRV Bible Verse Images

ಮತ್ತಾಯನು 27 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 27 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 27:1 (KANIRV)
Square Portrait Landscape 4K UHD
ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,

ಮತ್ತಾಯನು 27:2 (KANIRV)
Square Portrait Landscape 4K UHD
ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.

ಮತ್ತಾಯನು 27:3 (KANIRV)
Square Portrait Landscape 4K UHD
ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.

ಮತ್ತಾಯನು 27:4 (KANIRV)
Square Portrait Landscape 4K UHD
“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.

ಮತ್ತಾಯನು 27:5 (KANIRV)
Square Portrait Landscape 4K UHD
ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

ಮತ್ತಾಯನು 27:6 (KANIRV)
Square Portrait Landscape 4K UHD
ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.

ಮತ್ತಾಯನು 27:7 (KANIRV)
Square Portrait Landscape 4K UHD
ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.

ಮತ್ತಾಯನು 27:8 (KANIRV)
Square Portrait Landscape 4K UHD
ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.

ಮತ್ತಾಯನು 27:9 (KANIRV)
Square Portrait Landscape 4K UHD
ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ

ಮತ್ತಾಯನು 27:10 (KANIRV)
Square Portrait Landscape 4K UHD
ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.

ಮತ್ತಾಯನು 27:11 (KANIRV)
Square Portrait Landscape 4K UHD
ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.

ಮತ್ತಾಯನು 27:12 (KANIRV)
Square Portrait Landscape 4K UHD
ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,

ಮತ್ತಾಯನು 27:13 (KANIRV)
Square Portrait Landscape 4K UHD
ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು.

ಮತ್ತಾಯನು 27:14 (KANIRV)
Square Portrait Landscape 4K UHD
ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.

ಮತ್ತಾಯನು 27:15 (KANIRV)
Square Portrait Landscape 4K UHD
ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.

ಮತ್ತಾಯನು 27:16 (KANIRV)
Square Portrait Landscape 4K UHD
ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.

ಮತ್ತಾಯನು 27:17 (KANIRV)
Square Portrait Landscape 4K UHD
ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.

ಮತ್ತಾಯನು 27:18 (KANIRV)
Square Portrait Landscape 4K UHD
ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.

ಮತ್ತಾಯನು 27:19 (KANIRV)
Square Portrait Landscape 4K UHD
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.

ಮತ್ತಾಯನು 27:20 (KANIRV)
Square Portrait Landscape 4K UHD
ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.

ಮತ್ತಾಯನು 27:21 (KANIRV)
Square Portrait Landscape 4K UHD
ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.

ಮತ್ತಾಯನು 27:22 (KANIRV)
Square Portrait Landscape 4K UHD
ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.

ಮತ್ತಾಯನು 27:23 (KANIRV)
Square Portrait Landscape 4K UHD
ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.

ಮತ್ತಾಯನು 27:24 (KANIRV)
Square Portrait Landscape 4K UHD
ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು

ಮತ್ತಾಯನು 27:25 (KANIRV)
Square Portrait Landscape 4K UHD
ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

ಮತ್ತಾಯನು 27:26 (KANIRV)
Square Portrait Landscape 4K UHD
ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಮತ್ತಾಯನು 27:27 (KANIRV)
Square Portrait Landscape 4K UHD
ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,

ಮತ್ತಾಯನು 27:28 (KANIRV)
Square Portrait Landscape 4K UHD
ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,

ಮತ್ತಾಯನು 27:29 (KANIRV)
Square Portrait Landscape 4K UHD
ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ

ಮತ್ತಾಯನು 27:30 (KANIRV)
Square Portrait Landscape 4K UHD
ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.

ಮತ್ತಾಯನು 27:31 (KANIRV)
Square Portrait Landscape 4K UHD
ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.

ಮತ್ತಾಯನು 27:32 (KANIRV)
Square Portrait Landscape 4K UHD
ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.

ಮತ್ತಾಯನು 27:33 (KANIRV)
Square Portrait Landscape 4K UHD
ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ

ಮತ್ತಾಯನು 27:34 (KANIRV)
Square Portrait Landscape 4K UHD
ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.

ಮತ್ತಾಯನು 27:35 (KANIRV)
Square Portrait Landscape 4K UHD
ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;

ಮತ್ತಾಯನು 27:36 (KANIRV)
Square Portrait Landscape 4K UHD
ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು.

ಮತ್ತಾಯನು 27:37 (KANIRV)
Square Portrait Landscape 4K UHD
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.

ಮತ್ತಾಯನು 27:38 (KANIRV)
Square Portrait Landscape 4K UHD
ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.

ಮತ್ತಾಯನು 27:39 (KANIRV)
Square Portrait Landscape 4K UHD
ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,

ಮತ್ತಾಯನು 27:40 (KANIRV)
Square Portrait Landscape 4K UHD
“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.

ಮತ್ತಾಯನು 27:41 (KANIRV)
Square Portrait Landscape 4K UHD
ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಮತ್ತಾಯನು 27:42 (KANIRV)
Square Portrait Landscape 4K UHD
ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.

ಮತ್ತಾಯನು 27:43 (KANIRV)
Square Portrait Landscape 4K UHD
ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.

ಮತ್ತಾಯನು 27:44 (KANIRV)
Square Portrait Landscape 4K UHD
ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.

ಮತ್ತಾಯನು 27:45 (KANIRV)
Square Portrait Landscape 4K UHD
ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.

ಮತ್ತಾಯನು 27:46 (KANIRV)
Square Portrait Landscape 4K UHD
ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.

ಮತ್ತಾಯನು 27:47 (KANIRV)
Square Portrait Landscape 4K UHD
ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.

ಮತ್ತಾಯನು 27:48 (KANIRV)
Square Portrait Landscape 4K UHD
ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.

ಮತ್ತಾಯನು 27:49 (KANIRV)
Square Portrait Landscape 4K UHD
ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು.

ಮತ್ತಾಯನು 27:50 (KANIRV)
Square Portrait Landscape 4K UHD
ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.

ಮತ್ತಾಯನು 27:51 (KANIRV)
Square Portrait Landscape 4K UHD
ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಮತ್ತಾಯನು 27:52 (KANIRV)
Square Portrait Landscape 4K UHD
ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;

ಮತ್ತಾಯನು 27:53 (KANIRV)
Square Portrait Landscape 4K UHD
ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಮತ್ತಾಯನು 27:54 (KANIRV)
Square Portrait Landscape 4K UHD
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.

ಮತ್ತಾಯನು 27:55 (KANIRV)
Square Portrait Landscape 4K UHD
ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.

ಮತ್ತಾಯನು 27:56 (KANIRV)
Square Portrait Landscape 4K UHD
ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.

ಮತ್ತಾಯನು 27:57 (KANIRV)
Square Portrait Landscape 4K UHD
ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.

ಮತ್ತಾಯನು 27:58 (KANIRV)
Square Portrait Landscape 4K UHD
ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.

ಮತ್ತಾಯನು 27:59 (KANIRV)
Square Portrait Landscape 4K UHD
ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ

ಮತ್ತಾಯನು 27:60 (KANIRV)
Square Portrait Landscape 4K UHD
ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.

ಮತ್ತಾಯನು 27:61 (KANIRV)
Square Portrait Landscape 4K UHD
ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.

ಮತ್ತಾಯನು 27:62 (KANIRV)
Square Portrait Landscape 4K UHD
ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,

ಮತ್ತಾಯನು 27:63 (KANIRV)
Square Portrait Landscape 4K UHD
“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;

ಮತ್ತಾಯನು 27:64 (KANIRV)
Square Portrait Landscape 4K UHD
ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.

ಮತ್ತಾಯನು 27:65 (KANIRV)
Square Portrait Landscape 4K UHD
ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು

ಮತ್ತಾಯನು 27:66 (KANIRV)
Square Portrait Landscape 4K UHD
ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

Available Bible Translations

American Standard Version (ASV)
Matthew 27 (ASV) »
King James Version (KJV)
Matthew 27 (KJV) »
GOD’S WORD® (GW)
Matthew 27 (GW) »
Berean Bible (BSB)
Matthew 27 (BSB) »
World English Bible (WEB)
Matthew 27 (WEB) »
French Bible (LSG)
Matthieu 27 (LSG) »
German Bible (LUTH1912)
Matthäus 27 (LUTH1912) »
Punjabi Bible (PANIRV)
ਮੱਤੀ 27 (PANIRV) »
Bengali Bible (BENIRV)
মথি 27 (BENIRV) »
Marathi Bible (MARIRV)
मत्तय 27 (MARIRV) »
Gujarati Bible (GUJIRV)
માથ્થી 27 (GUJIRV) »
Arabic Bible (AVD)
مَتَّى 27 (AVD) »
Portuguese Bible (BSL)
Mateus 27 (BSL) »
Vietnamese Bible (VIE)
Ma-thi-ơ 27 (VIE) »
Spanish Bible (RVA)
Mateo 27 (RVA) »
Italian Bible (RIV)
Matteo 27 (RIV) »
Chinese Simplified (CUVS)
马 太 福 音 27 (CUVS) »
Chinese Traditional (CUVT)
馬 太 福 音 27 (CUVT) »
Albanian Bible (ALB)
Mateu 27 (ALB) »
Swedish Bible (SV1917)
Matteus 27 (SV1917) »
Russian Bible (RUSV)
Матфея 27 (RUSV) »
Ukrainian Bible (UKR)
Матвія 27 (UKR) »
Hungarian Bible (KAR)
Máté 27 (KAR) »
Bulgarian Bible (BULG)
Матей 27 (BULG) »
Norwegian Bible (NORSK)
Matteus 27 (NORSK) »

ಮತ್ತಾಯನು (KANIRV) Chapter Selection

KANIRV Book Selection List