ಮತ್ತಾಯನು Chapter 28 KANIRV Bible Verse Images

ಮತ್ತಾಯನು 28 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 28 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 28:1 (KANIRV)
Square Portrait Landscape 4K UHD
ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.

ಮತ್ತಾಯನು 28:2 (KANIRV)
Square Portrait Landscape 4K UHD
ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.

ಮತ್ತಾಯನು 28:3 (KANIRV)
Square Portrait Landscape 4K UHD
ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;

ಮತ್ತಾಯನು 28:4 (KANIRV)
Square Portrait Landscape 4K UHD
ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.

ಮತ್ತಾಯನು 28:5 (KANIRV)
Square Portrait Landscape 4K UHD
ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;

ಮತ್ತಾಯನು 28:6 (KANIRV)
Square Portrait Landscape 4K UHD
ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;

ಮತ್ತಾಯನು 28:7 (KANIRV)
Square Portrait Landscape 4K UHD
ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.

ಮತ್ತಾಯನು 28:8 (KANIRV)
Square Portrait Landscape 4K UHD
ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.

ಮತ್ತಾಯನು 28:9 (KANIRV)
Square Portrait Landscape 4K UHD
ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.

ಮತ್ತಾಯನು 28:10 (KANIRV)
Square Portrait Landscape 4K UHD
ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.

ಮತ್ತಾಯನು 28:11 (KANIRV)
Square Portrait Landscape 4K UHD
ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.

ಮತ್ತಾಯನು 28:12 (KANIRV)
Square Portrait Landscape 4K UHD
ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,

ಮತ್ತಾಯನು 28:13 (KANIRV)
Square Portrait Landscape 4K UHD
“‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;

ಮತ್ತಾಯನು 28:14 (KANIRV)
Square Portrait Landscape 4K UHD
ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.

ಮತ್ತಾಯನು 28:15 (KANIRV)
Square Portrait Landscape 4K UHD
ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.

ಮತ್ತಾಯನು 28:16 (KANIRV)
Square Portrait Landscape 4K UHD
ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.

ಮತ್ತಾಯನು 28:17 (KANIRV)
Square Portrait Landscape 4K UHD
ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.

ಮತ್ತಾಯನು 28:18 (KANIRV)
Square Portrait Landscape 4K UHD
ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.

ಮತ್ತಾಯನು 28:19 (KANIRV)
Square Portrait Landscape 4K UHD
ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.

ಮತ್ತಾಯನು 28:20 (KANIRV)
Square Portrait Landscape 4K UHD
ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

Available Bible Translations

American Standard Version
Matthew 28 (ASV) »
King James Version
Matthew 28 (KJV) »
GOD’S WORD® (GW)
Matthew 28 (GW) »
World English Bible
Matthew 28 (WEB) »
Louis Segond 1910
Matthieu 28 (LSG) »
इंडियन रिवाइज्ड वर्जन - हिंदी
मत्ती 28 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 28 (PANIRV) »
ভারতীয় সংশোধিত সংস্করণ - বাংলা
মথি 28 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 28 (TAMIRV) »
इंडियन रिवाइज्ड वर्जन - मराठी
मत्तय 28 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 28 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 28 (GUJIRV) »
الكتاب المقدس باللغة العربية، فان دايك
مَتَّى 28 (AVD) »
תנ ך עברי מודרני
הבשורה על־פי מתי 28 (HEB) »
Bíblia Sagrada Português
Mateus 28 (BSL) »
Kinh Thánh: Tiếng Việt
Ma-thi-ơ 28 (VIE) »
Reina Valera Antigua
Mateo 28 (RVA) »
La Sacra Bibbia
Matteo 28 (RIV) »
圣 经 简体中文和合本
马 太 福 音 28 (CUVS) »
聖 經 繁體中文和合本
馬 太 福 音 28 (CUVT) »
Bibla e Shenjtë
Mateu 28 (ALB) »
Svenska Bibeln 1917
Matteus 28 (SV1917) »
Библия на русском
Матфея 28 (RUSV) »
Українська Біблія
Матвія 28 (UKR) »
Szent Biblia - Magyar
Máté 28 (KAR) »
Българска Библия
Матей 28 (BULG) »
Det Norsk Bibel
Matteus 28 (NORSK) »
Kitaabka Quduuska Ah
Matayos 28 (SOM) »
De Heilige Schrift
Mattheüs 28 (NLD) »

ಮತ್ತಾಯನು (KANIRV) Chapter Selection

KANIRV Book Selection List