ಮತ್ತಾಯನು Chapter 8 KANIRV Bible Verse Images

ಮತ್ತಾಯನು 8 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 8 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 8:1 (KANIRV)
Square Portrait Landscape 4K UHD
“ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.

ಮತ್ತಾಯನು 8:2 (KANIRV)
Square Portrait Landscape 4K UHD
ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.

ಮತ್ತಾಯನು 8:3 (KANIRV)
Square Portrait Landscape 4K UHD
ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.

ಮತ್ತಾಯನು 8:4 (KANIRV)
Square Portrait Landscape 4K UHD
ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ;ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.

ಮತ್ತಾಯನು 8:5 (KANIRV)
Square Portrait Landscape 4K UHD
ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,

ಮತ್ತಾಯನು 8:6 (KANIRV)
Square Portrait Landscape 4K UHD
“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.

ಮತ್ತಾಯನು 8:7 (KANIRV)
Square Portrait Landscape 4K UHD
ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು,

ಮತ್ತಾಯನು 8:8 (KANIRV)
Square Portrait Landscape 4K UHD
ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.

ಮತ್ತಾಯನು 8:9 (KANIRV)
Square Portrait Landscape 4K UHD
ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.

ಮತ್ತಾಯನು 8:10 (KANIRV)
Square Portrait Landscape 4K UHD
ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಮತ್ತಾಯನು 8:11 (KANIRV)
Square Portrait Landscape 4K UHD
ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;

ಮತ್ತಾಯನು 8:12 (KANIRV)
Square Portrait Landscape 4K UHD
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.

ಮತ್ತಾಯನು 8:13 (KANIRV)
Square Portrait Landscape 4K UHD
ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.

ಮತ್ತಾಯನು 8:14 (KANIRV)
Square Portrait Landscape 4K UHD
ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ

ಮತ್ತಾಯನು 8:15 (KANIRV)
Square Portrait Landscape 4K UHD
ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.

ಮತ್ತಾಯನು 8:16 (KANIRV)
Square Portrait Landscape 4K UHD
ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.

ಮತ್ತಾಯನು 8:17 (KANIRV)
Square Portrait Landscape 4K UHD
ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.

ಮತ್ತಾಯನು 8:18 (KANIRV)
Square Portrait Landscape 4K UHD
ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.

ಮತ್ತಾಯನು 8:19 (KANIRV)
Square Portrait Landscape 4K UHD
ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,

ಮತ್ತಾಯನು 8:20 (KANIRV)
Square Portrait Landscape 4K UHD
ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.

ಮತ್ತಾಯನು 8:21 (KANIRV)
Square Portrait Landscape 4K UHD
ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,

ಮತ್ತಾಯನು 8:22 (KANIRV)
Square Portrait Landscape 4K UHD
ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು.

ಮತ್ತಾಯನು 8:23 (KANIRV)
Square Portrait Landscape 4K UHD
ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

ಮತ್ತಾಯನು 8:24 (KANIRV)
Square Portrait Landscape 4K UHD
ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.

ಮತ್ತಾಯನು 8:25 (KANIRV)
Square Portrait Landscape 4K UHD
ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.

ಮತ್ತಾಯನು 8:26 (KANIRV)
Square Portrait Landscape 4K UHD
ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.

ಮತ್ತಾಯನು 8:27 (KANIRV)
Square Portrait Landscape 4K UHD
ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.

ಮತ್ತಾಯನು 8:28 (KANIRV)
Square Portrait Landscape 4K UHD
ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.

ಮತ್ತಾಯನು 8:29 (KANIRV)
Square Portrait Landscape 4K UHD
ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.

ಮತ್ತಾಯನು 8:30 (KANIRV)
Square Portrait Landscape 4K UHD
ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.

ಮತ್ತಾಯನು 8:31 (KANIRV)
Square Portrait Landscape 4K UHD
ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.

ಮತ್ತಾಯನು 8:32 (KANIRV)
Square Portrait Landscape 4K UHD
ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.

ಮತ್ತಾಯನು 8:33 (KANIRV)
Square Portrait Landscape 4K UHD
ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;

ಮತ್ತಾಯನು 8:34 (KANIRV)
Square Portrait Landscape 4K UHD
ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

Available Bible Translations

American Standard Version (ASV)
Matthew 8 (ASV) »
King James Version (KJV)
Matthew 8 (KJV) »
GOD’S WORD® (GW)
Matthew 8 (GW) »
Berean Bible (BSB)
Matthew 8 (BSB) »
World English Bible (WEB)
Matthew 8 (WEB) »
French Bible (LSG)
Matthieu 8 (LSG) »
German Bible (LUTH1912)
Matthäus 8 (LUTH1912) »
Hindi Bible (HINIRV)
मत्ती 8 (HINIRV) »
Punjabi Bible (PANIRV)
ਮੱਤੀ 8 (PANIRV) »
Bengali Bible (BENIRV)
মথি 8 (BENIRV) »
Marathi Bible (MARIRV)
मत्तय 8 (MARIRV) »
Gujarati Bible (GUJIRV)
માથ્થી 8 (GUJIRV) »
Arabic Bible (AVD)
مَتَّى 8 (AVD) »
Portuguese Bible (BSL)
Mateus 8 (BSL) »
Vietnamese Bible (VIE)
Ma-thi-ơ 8 (VIE) »
Spanish Bible (RVA)
Mateo 8 (RVA) »
Italian Bible (RIV)
Matteo 8 (RIV) »
Chinese Simplified (CUVS)
马 太 福 音 8 (CUVS) »
Chinese Traditional (CUVT)
馬 太 福 音 8 (CUVT) »
Albanian Bible (ALB)
Mateu 8 (ALB) »
Swedish Bible (SV1917)
Matteus 8 (SV1917) »
Russian Bible (RUSV)
Матфея 8 (RUSV) »
Ukrainian Bible (UKR)
Матвія 8 (UKR) »
Hungarian Bible (KAR)
Máté 8 (KAR) »
Bulgarian Bible (BULG)
Матей 8 (BULG) »
Norwegian Bible (NORSK)
Matteus 8 (NORSK) »

ಮತ್ತಾಯನು (KANIRV) Chapter Selection

KANIRV Book Selection List