ನೆಹೆಮೀಯನು Chapter 5 KANIRV Bible Verse Images

ನೆಹೆಮೀಯನು 5 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ನೆಹೆಮೀಯನು 5 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ನೆಹೆಮೀಯನು 5:1 (KANIRV)
Square Portrait Landscape 4K UHD
ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.

ನೆಹೆಮೀಯನು 5:2 (KANIRV)
Square Portrait Landscape 4K UHD
ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.

ನೆಹೆಮೀಯನು 5:3 (KANIRV)
Square Portrait Landscape 4K UHD
ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.

ನೆಹೆಮೀಯನು 5:4 (KANIRV)
Square Portrait Landscape 4K UHD
ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.

ನೆಹೆಮೀಯನು 5:5 (KANIRV)
Square Portrait Landscape 4K UHD
ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.

ನೆಹೆಮೀಯನು 5:6 (KANIRV)
Square Portrait Landscape 4K UHD
ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.

ನೆಹೆಮೀಯನು 5:7 (KANIRV)
Square Portrait Landscape 4K UHD
ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ

ನೆಹೆಮೀಯನು 5:8 (KANIRV)
Square Portrait Landscape 4K UHD
ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.

ನೆಹೆಮೀಯನು 5:9 (KANIRV)
Square Portrait Landscape 4K UHD
ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.

ನೆಹೆಮೀಯನು 5:10 (KANIRV)
Square Portrait Landscape 4K UHD
ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.

ನೆಹೆಮೀಯನು 5:11 (KANIRV)
Square Portrait Landscape 4K UHD
ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.

ನೆಹೆಮೀಯನು 5:12 (KANIRV)
Square Portrait Landscape 4K UHD
ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.

ನೆಹೆಮೀಯನು 5:13 (KANIRV)
Square Portrait Landscape 4K UHD
ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.

ನೆಹೆಮೀಯನು 5:14 (KANIRV)
Square Portrait Landscape 4K UHD
ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.

ನೆಹೆಮೀಯನು 5:15 (KANIRV)
Square Portrait Landscape 4K UHD
ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.

ನೆಹೆಮೀಯನು 5:16 (KANIRV)
Square Portrait Landscape 4K UHD
ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ನೆಹೆಮೀಯನು 5:17 (KANIRV)
Square Portrait Landscape 4K UHD
ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.

ನೆಹೆಮೀಯನು 5:18 (KANIRV)
Square Portrait Landscape 4K UHD
ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.

ನೆಹೆಮೀಯನು 5:19 (KANIRV)
Square Portrait Landscape 4K UHD
ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.

Available Bible Translations

American Standard Version
Nehemiah 5 (ASV) »
King James Version
Nehemiah 5 (KJV) »
GOD’S WORD® (GW)
Nehemiah 5 (GW) »
World English Bible
Nehemiah 5 (WEB) »
Louis Segond 1910
Néhémie 5 (LSG) »
Luther Bibel 1912
Nehemia 5 (LUTH1912) »
इंडियन रिवाइज्ड वर्जन - हिंदी
नहेम्याह 5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਨਹਮਯਾਹ 5 (PANIRV) »
ভারতীয় সংশোধিত সংস্করণ - বাংলা
নহিমিয়া 5 (BENIRV) »
இந்தியன் ரீவைஸ்டு வேர்ஷன் - தமிழ்
நெகேமியா 5 (TAMIRV) »
इंडियन रिवाइज्ड वर्जन - मराठी
नहेम्या 5 (MARIRV) »
ఇండియన్ రేవిజ్డ్ వెర్షన్ - తెలుగు
నెహెమ్యా 5 (TELIRV) »
ઇન્ડિયન રિવાયઝ્ડ વર્ઝન - ગુજરાતી
નહેમ્યા 5 (GUJIRV) »
الكتاب المقدس باللغة العربية، فان دايك
نَحَمْيَا 5 (AVD) »
תנ ך עברי מודרני
נחמיה 5 (HEB) »
Bíblia Sagrada Português
Neemias 5 (BSL) »
Kinh Thánh: Tiếng Việt
Nê-hê-mi-a 5 (VIE) »
Reina Valera Antigua
Nehemías 5 (RVA) »
La Sacra Bibbia
Neemia 5 (RIV) »
圣 经 简体中文和合本
尼 希 米 记 5 (CUVS) »
聖 經 繁體中文和合本
尼 希 米 記 5 (CUVT) »
Bibla e Shenjtë
Nehemia 5 (ALB) »
Svenska Bibeln 1917
Nehemja 5 (SV1917) »
Библия на русском
Неемия 5 (RUSV) »
Українська Біблія
Неемія 5 (UKR) »
Szent Biblia - Magyar
Nehémiás 5 (KAR) »
Българска Библия
Неемия 5 (BULG) »
Det Norsk Bibel
Nehemja 5 (NORSK) »
Biblia Takatifu
Nehemia 5 (SWHULB) »
Kitaabka Quduuska Ah
Nexemyaah 5 (SOM) »
De Heilige Schrift
Nehemia 5 (NLD) »
Dansk Bibel 1871
Nehemias 5 (DA1871) »

ನೆಹೆಮೀಯನು (KANIRV) Chapter Selection

1 2 3 4 5 6 7 8 9 10 11 12 13

KANIRV Book Selection List