ಅರಣ್ಯಕಾಂಡ Chapter 1 KANIRV Bible Verse Images

ಅರಣ್ಯಕಾಂಡ 1 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 1 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 1:1 (KANIRV)
Square Portrait Landscape 4K UHD
ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,

ಅರಣ್ಯಕಾಂಡ 1:2 (KANIRV)
Square Portrait Landscape 4K UHD
“ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.

ಅರಣ್ಯಕಾಂಡ 1:3 (KANIRV)
Square Portrait Landscape 4K UHD
ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.

ಅರಣ್ಯಕಾಂಡ 1:4 (KANIRV)
Square Portrait Landscape 4K UHD
ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.

ಅರಣ್ಯಕಾಂಡ 1:5 (KANIRV)
Square Portrait Landscape 4K UHD
ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,

ಅರಣ್ಯಕಾಂಡ 1:6 (KANIRV)
Square Portrait Landscape 4K UHD
ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,

ಅರಣ್ಯಕಾಂಡ 1:7 (KANIRV)
Square Portrait Landscape 4K UHD
ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,

ಅರಣ್ಯಕಾಂಡ 1:8 (KANIRV)
Square Portrait Landscape 4K UHD
ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,

ಅರಣ್ಯಕಾಂಡ 1:9 (KANIRV)
Square Portrait Landscape 4K UHD
ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,

ಅರಣ್ಯಕಾಂಡ 1:10 (KANIRV)
Square Portrait Landscape 4K UHD
ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,

ಅರಣ್ಯಕಾಂಡ 1:11 (KANIRV)
Square Portrait Landscape 4K UHD
ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,

ಅರಣ್ಯಕಾಂಡ 1:12 (KANIRV)
Square Portrait Landscape 4K UHD
ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,

ಅರಣ್ಯಕಾಂಡ 1:13 (KANIRV)
Square Portrait Landscape 4K UHD
ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,

ಅರಣ್ಯಕಾಂಡ 1:14 (KANIRV)
Square Portrait Landscape 4K UHD
ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,

ಅರಣ್ಯಕಾಂಡ 1:15 (KANIRV)
Square Portrait Landscape 4K UHD
ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”

ಅರಣ್ಯಕಾಂಡ 1:16 (KANIRV)
Square Portrait Landscape 4K UHD
ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.

ಅರಣ್ಯಕಾಂಡ 1:17 (KANIRV)
Square Portrait Landscape 4K UHD
ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.

ಅರಣ್ಯಕಾಂಡ 1:18 (KANIRV)
Square Portrait Landscape 4K UHD
ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.

ಅರಣ್ಯಕಾಂಡ 1:19 (KANIRV)
Square Portrait Landscape 4K UHD
ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.

ಅರಣ್ಯಕಾಂಡ 1:20 (KANIRV)
Square Portrait Landscape 4K UHD
ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.

ಅರಣ್ಯಕಾಂಡ 1:21 (KANIRV)
Square Portrait Landscape 4K UHD
ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.

ಅರಣ್ಯಕಾಂಡ 1:22 (KANIRV)
Square Portrait Landscape 4K UHD
ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:23 (KANIRV)
Square Portrait Landscape 4K UHD
ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ.

ಅರಣ್ಯಕಾಂಡ 1:24 (KANIRV)
Square Portrait Landscape 4K UHD
ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.

ಅರಣ್ಯಕಾಂಡ 1:25 (KANIRV)
Square Portrait Landscape 4K UHD
ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.

ಅರಣ್ಯಕಾಂಡ 1:26 (KANIRV)
Square Portrait Landscape 4K UHD
ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:27 (KANIRV)
Square Portrait Landscape 4K UHD
ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.

ಅರಣ್ಯಕಾಂಡ 1:28 (KANIRV)
Square Portrait Landscape 4K UHD
ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:29 (KANIRV)
Square Portrait Landscape 4K UHD
ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.

ಅರಣ್ಯಕಾಂಡ 1:30 (KANIRV)
Square Portrait Landscape 4K UHD
ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:31 (KANIRV)
Square Portrait Landscape 4K UHD
ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ.

ಅರಣ್ಯಕಾಂಡ 1:32 (KANIRV)
Square Portrait Landscape 4K UHD
ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:33 (KANIRV)
Square Portrait Landscape 4K UHD
ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.

ಅರಣ್ಯಕಾಂಡ 1:34 (KANIRV)
Square Portrait Landscape 4K UHD
ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:35 (KANIRV)
Square Portrait Landscape 4K UHD
ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ.

ಅರಣ್ಯಕಾಂಡ 1:36 (KANIRV)
Square Portrait Landscape 4K UHD
ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:37 (KANIRV)
Square Portrait Landscape 4K UHD
ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.

ಅರಣ್ಯಕಾಂಡ 1:38 (KANIRV)
Square Portrait Landscape 4K UHD
ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:39 (KANIRV)
Square Portrait Landscape 4K UHD
ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.

ಅರಣ್ಯಕಾಂಡ 1:40 (KANIRV)
Square Portrait Landscape 4K UHD
ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:41 (KANIRV)
Square Portrait Landscape 4K UHD
ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.

ಅರಣ್ಯಕಾಂಡ 1:42 (KANIRV)
Square Portrait Landscape 4K UHD
ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 1:43 (KANIRV)
Square Portrait Landscape 4K UHD
ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.

ಅರಣ್ಯಕಾಂಡ 1:44 (KANIRV)
Square Portrait Landscape 4K UHD
ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.

ಅರಣ್ಯಕಾಂಡ 1:45 (KANIRV)
Square Portrait Landscape 4K UHD
ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.

ಅರಣ್ಯಕಾಂಡ 1:46 (KANIRV)
Square Portrait Landscape 4K UHD
ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.

ಅರಣ್ಯಕಾಂಡ 1:47 (KANIRV)
Square Portrait Landscape 4K UHD
ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.

ಅರಣ್ಯಕಾಂಡ 1:48 (KANIRV)
Square Portrait Landscape 4K UHD
ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,

ಅರಣ್ಯಕಾಂಡ 1:49 (KANIRV)
Square Portrait Landscape 4K UHD
“ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.

ಅರಣ್ಯಕಾಂಡ 1:50 (KANIRV)
Square Portrait Landscape 4K UHD
ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅರಣ್ಯಕಾಂಡ 1:51 (KANIRV)
Square Portrait Landscape 4K UHD
ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅರಣ್ಯಕಾಂಡ 1:52 (KANIRV)
Square Portrait Landscape 4K UHD
ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.

ಅರಣ್ಯಕಾಂಡ 1:53 (KANIRV)
Square Portrait Landscape 4K UHD
ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”

ಅರಣ್ಯಕಾಂಡ 1:54 (KANIRV)
Square Portrait Landscape 4K UHD
ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.

Available Bible Translations

American Standard Version (ASV)
Numbers 1 (ASV) »
King James Version (KJV)
Numbers 1 (KJV) »
GOD’S WORD® (GW)
Numbers 1 (GW) »
Berean Bible (BSB)
Numbers 1 (BSB) »
World English Bible (WEB)
Numbers 1 (WEB) »
French Bible (LSG)
Nombres 1 (LSG) »
German Bible (LUTH1912)
Numeri 1 (LUTH1912) »
Hindi Bible (HINIRV)
गिनती 1 (HINIRV) »
Punjabi Bible (PANIRV)
ਗਿਣਤੀ 1 (PANIRV) »
Bengali Bible (BENIRV)
গননা 1 (BENIRV) »
Marathi Bible (MARIRV)
गणना 1 (MARIRV) »
Gujarati Bible (GUJIRV)
ગણના 1 (GUJIRV) »
Hebrew Bible (HEB)
במדבר 1 (HEB) »
Portuguese Bible (BSL)
Números 1 (BSL) »
Vietnamese Bible (VIE)
Dân Số 1 (VIE) »
Spanish Bible (RVA)
Números 1 (RVA) »
Italian Bible (RIV)
Numeri 1 (RIV) »
Chinese Simplified (CUVS)
民 数 记 1 (CUVS) »
Chinese Traditional (CUVT)
民 數 記 1 (CUVT) »
Albanian Bible (ALB)
Numrat 1 (ALB) »
Swedish Bible (SV1917)
4 Mosebok 1 (SV1917) »
Russian Bible (RUSV)
Числа 1 (RUSV) »
Ukrainian Bible (UKR)
Числа 1 (UKR) »
Hungarian Bible (KAR)
4 Mózes 1 (KAR) »
Bulgarian Bible (BULG)
Числа 1 (BULG) »
Japanese Bible (JPN)
民数記 1 (JPN) »
Norwegian Bible (NORSK)
4 Mosebok 1 (NORSK) »

ಅರಣ್ಯಕಾಂಡ (KANIRV) Chapter Selection

KANIRV Book Selection List