ಅರಣ್ಯಕಾಂಡ Chapter 15 KANIRV Bible Verse Images

ಅರಣ್ಯಕಾಂಡ 15 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 15 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 15:1 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅರಣ್ಯಕಾಂಡ 15:2 (KANIRV)
Square Portrait Landscape 4K UHD
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,

ಅರಣ್ಯಕಾಂಡ 15:3 (KANIRV)
Square Portrait Landscape 4K UHD
ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಅರಣ್ಯಕಾಂಡ 15:4 (KANIRV)
Square Portrait Landscape 4K UHD
ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.

ಅರಣ್ಯಕಾಂಡ 15:5 (KANIRV)
Square Portrait Landscape 4K UHD
ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.

ಅರಣ್ಯಕಾಂಡ 15:6 (KANIRV)
Square Portrait Landscape 4K UHD
“‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,

ಅರಣ್ಯಕಾಂಡ 15:7 (KANIRV)
Square Portrait Landscape 4K UHD
ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.

ಅರಣ್ಯಕಾಂಡ 15:8 (KANIRV)
Square Portrait Landscape 4K UHD
“‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,

ಅರಣ್ಯಕಾಂಡ 15:9 (KANIRV)
Square Portrait Landscape 4K UHD
ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.

ಅರಣ್ಯಕಾಂಡ 15:10 (KANIRV)
Square Portrait Landscape 4K UHD
ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.

ಅರಣ್ಯಕಾಂಡ 15:11 (KANIRV)
Square Portrait Landscape 4K UHD
“‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.

ಅರಣ್ಯಕಾಂಡ 15:12 (KANIRV)
Square Portrait Landscape 4K UHD
ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.

ಅರಣ್ಯಕಾಂಡ 15:13 (KANIRV)
Square Portrait Landscape 4K UHD
ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.

ಅರಣ್ಯಕಾಂಡ 15:14 (KANIRV)
Square Portrait Landscape 4K UHD
ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.

ಅರಣ್ಯಕಾಂಡ 15:15 (KANIRV)
Square Portrait Landscape 4K UHD
ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.

ಅರಣ್ಯಕಾಂಡ 15:16 (KANIRV)
Square Portrait Landscape 4K UHD
ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”

ಅರಣ್ಯಕಾಂಡ 15:17 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅರಣ್ಯಕಾಂಡ 15:18 (KANIRV)
Square Portrait Landscape 4K UHD
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,

ಅರಣ್ಯಕಾಂಡ 15:19 (KANIRV)
Square Portrait Landscape 4K UHD
ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅರಣ್ಯಕಾಂಡ 15:20 (KANIRV)
Square Portrait Landscape 4K UHD
ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅರಣ್ಯಕಾಂಡ 15:21 (KANIRV)
Square Portrait Landscape 4K UHD
“‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅರಣ್ಯಕಾಂಡ 15:22 (KANIRV)
Square Portrait Landscape 4K UHD
ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,

ಅರಣ್ಯಕಾಂಡ 15:23 (KANIRV)
Square Portrait Landscape 4K UHD
ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,

ಅರಣ್ಯಕಾಂಡ 15:24 (KANIRV)
Square Portrait Landscape 4K UHD
ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅರಣ್ಯಕಾಂಡ 15:25 (KANIRV)
Square Portrait Landscape 4K UHD
ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,

ಅರಣ್ಯಕಾಂಡ 15:26 (KANIRV)
Square Portrait Landscape 4K UHD
ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.

ಅರಣ್ಯಕಾಂಡ 15:27 (KANIRV)
Square Portrait Landscape 4K UHD
“‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.

ಅರಣ್ಯಕಾಂಡ 15:28 (KANIRV)
Square Portrait Landscape 4K UHD
ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಅರಣ್ಯಕಾಂಡ 15:29 (KANIRV)
Square Portrait Landscape 4K UHD
ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,

ಅರಣ್ಯಕಾಂಡ 15:30 (KANIRV)
Square Portrait Landscape 4K UHD
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ಅರಣ್ಯಕಾಂಡ 15:31 (KANIRV)
Square Portrait Landscape 4K UHD
ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”

ಅರಣ್ಯಕಾಂಡ 15:32 (KANIRV)
Square Portrait Landscape 4K UHD
ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.

ಅರಣ್ಯಕಾಂಡ 15:33 (KANIRV)
Square Portrait Landscape 4K UHD
ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.

ಅರಣ್ಯಕಾಂಡ 15:34 (KANIRV)
Square Portrait Landscape 4K UHD
ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.

ಅರಣ್ಯಕಾಂಡ 15:35 (KANIRV)
Square Portrait Landscape 4K UHD
ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

ಅರಣ್ಯಕಾಂಡ 15:36 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.

ಅರಣ್ಯಕಾಂಡ 15:37 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅರಣ್ಯಕಾಂಡ 15:38 (KANIRV)
Square Portrait Landscape 4K UHD
“ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.

ಅರಣ್ಯಕಾಂಡ 15:39 (KANIRV)
Square Portrait Landscape 4K UHD
ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ

ಅರಣ್ಯಕಾಂಡ 15:40 (KANIRV)
Square Portrait Landscape 4K UHD
ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.

ಅರಣ್ಯಕಾಂಡ 15:41 (KANIRV)
Square Portrait Landscape 4K UHD
ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”

Available Bible Translations

American Standard Version
Numbers 15 (ASV) »
King James Version
Numbers 15 (KJV) »
GOD’S WORD® (GW)
Numbers 15 (GW) »
World English Bible
Numbers 15 (WEB) »
Louis Segond 1910
Nombres 15 (LSG) »
Luther Bibel 1912
Numeri 15 (LUTH1912) »
इंडियन रिवाइज्ड वर्जन - हिंदी
गिनती 15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 15 (PANIRV) »
ভারতীয় সংশোধিত সংস্করণ - বাংলা
গননা 15 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 15 (TAMIRV) »
इंडियन रिवाइज्ड वर्जन - मराठी
गणना 15 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 15 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 15 (GUJIRV) »
الكتاب المقدس باللغة العربية، فان دايك
اَلْعَدَد 15 (AVD) »
תנ ך עברי מודרני
במדבר 15 (HEB) »
Bíblia Sagrada Português
Números 15 (BSL) »
Kinh Thánh: Tiếng Việt
Dân Số 15 (VIE) »
Reina Valera Antigua
Números 15 (RVA) »
La Sacra Bibbia
Numeri 15 (RIV) »
圣 经 简体中文和合本
民 数 记 15 (CUVS) »
聖 經 繁體中文和合本
民 數 記 15 (CUVT) »
Bibla e Shenjtë
Numrat 15 (ALB) »
Svenska Bibeln 1917
4 Mosebok 15 (SV1917) »
Библия на русском
Числа 15 (RUSV) »
Українська Біблія
Числа 15 (UKR) »
Szent Biblia - Magyar
4 Mózes 15 (KAR) »
Българска Библия
Числа 15 (BULG) »
聖書 日本語
民数記 15 (JPN) »
Biblia Takatifu
Hesabu 15 (SWHULB) »
Kitaabka Quduuska Ah
Tirintii 15 (SOM) »
De Heilige Schrift
Numberi 15 (NLD) »

ಅರಣ್ಯಕಾಂಡ (KANIRV) Chapter Selection

KANIRV Book Selection List