ಅರಣ್ಯಕಾಂಡ Chapter 2 KANIRV Bible Verse Images

ಅರಣ್ಯಕಾಂಡ 2 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 2 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 2:1 (KANIRV)
Square Portrait Landscape 4K UHD
ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ,

ಅರಣ್ಯಕಾಂಡ 2:2 (KANIRV)
Square Portrait Landscape 4K UHD
“ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.”

ಅರಣ್ಯಕಾಂಡ 2:3 (KANIRV)
Square Portrait Landscape 4K UHD
ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.

ಅರಣ್ಯಕಾಂಡ 2:4 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 74,600 ಮಂದಿ.

ಅರಣ್ಯಕಾಂಡ 2:5 (KANIRV)
Square Portrait Landscape 4K UHD
ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ.

ಅರಣ್ಯಕಾಂಡ 2:6 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 54,400 ಮಂದಿ.

ಅರಣ್ಯಕಾಂಡ 2:7 (KANIRV)
Square Portrait Landscape 4K UHD
ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ.

ಅರಣ್ಯಕಾಂಡ 2:8 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 57,400 ಮಂದಿ.

ಅರಣ್ಯಕಾಂಡ 2:9 (KANIRV)
Square Portrait Landscape 4K UHD
ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.

ಅರಣ್ಯಕಾಂಡ 2:10 (KANIRV)
Square Portrait Landscape 4K UHD
ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.

ಅರಣ್ಯಕಾಂಡ 2:11 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 46,500 ಮಂದಿ.

ಅರಣ್ಯಕಾಂಡ 2:12 (KANIRV)
Square Portrait Landscape 4K UHD
ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.

ಅರಣ್ಯಕಾಂಡ 2:13 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 59,300 ಮಂದಿ.

ಅರಣ್ಯಕಾಂಡ 2:14 (KANIRV)
Square Portrait Landscape 4K UHD
ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.

ಅರಣ್ಯಕಾಂಡ 2:15 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 45,650 ಮಂದಿ.

ಅರಣ್ಯಕಾಂಡ 2:16 (KANIRV)
Square Portrait Landscape 4K UHD
ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.

ಅರಣ್ಯಕಾಂಡ 2:17 (KANIRV)
Square Portrait Landscape 4K UHD
ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.

ಅರಣ್ಯಕಾಂಡ 2:18 (KANIRV)
Square Portrait Landscape 4K UHD
ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.

ಅರಣ್ಯಕಾಂಡ 2:19 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 40,500 ಮಂದಿ.

ಅರಣ್ಯಕಾಂಡ 2:20 (KANIRV)
Square Portrait Landscape 4K UHD
ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.

ಅರಣ್ಯಕಾಂಡ 2:21 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 32,200 ಮಂದಿ.

ಅರಣ್ಯಕಾಂಡ 2:22 (KANIRV)
Square Portrait Landscape 4K UHD
ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.

ಅರಣ್ಯಕಾಂಡ 2:23 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 35,400 ಮಂದಿ.

ಅರಣ್ಯಕಾಂಡ 2:24 (KANIRV)
Square Portrait Landscape 4K UHD
ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.

ಅರಣ್ಯಕಾಂಡ 2:25 (KANIRV)
Square Portrait Landscape 4K UHD
ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.

ಅರಣ್ಯಕಾಂಡ 2:26 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 62,700 ಮಂದಿ.

ಅರಣ್ಯಕಾಂಡ 2:27 (KANIRV)
Square Portrait Landscape 4K UHD
ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ.

ಅರಣ್ಯಕಾಂಡ 2:28 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 41,500 ಮಂದಿ.

ಅರಣ್ಯಕಾಂಡ 2:29 (KANIRV)
Square Portrait Landscape 4K UHD
ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.

ಅರಣ್ಯಕಾಂಡ 2:30 (KANIRV)
Square Portrait Landscape 4K UHD
ಅವನ ಸೈನಿಕರ ಸಂಖ್ಯೆ 53,400 ಮಂದಿ.

ಅರಣ್ಯಕಾಂಡ 2:31 (KANIRV)
Square Portrait Landscape 4K UHD
ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.

ಅರಣ್ಯಕಾಂಡ 2:32 (KANIRV)
Square Portrait Landscape 4K UHD
ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.

ಅರಣ್ಯಕಾಂಡ 2:33 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ.

ಅರಣ್ಯಕಾಂಡ 2:34 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.

Available Bible Translations

American Standard Version (ASV)
Numbers 2 (ASV) »
King James Version (KJV)
Numbers 2 (KJV) »
GOD’S WORD® (GW)
Numbers 2 (GW) »
Berean Bible (BSB)
Numbers 2 (BSB) »
World English Bible (WEB)
Numbers 2 (WEB) »
French Bible (LSG)
Nombres 2 (LSG) »
German Bible (LUTH1912)
Numeri 2 (LUTH1912) »
Hindi Bible (HINIRV)
गिनती 2 (HINIRV) »
Punjabi Bible (PANIRV)
ਗਿਣਤੀ 2 (PANIRV) »
Bengali Bible (BENIRV)
গননা 2 (BENIRV) »
Marathi Bible (MARIRV)
गणना 2 (MARIRV) »
Gujarati Bible (GUJIRV)
ગણના 2 (GUJIRV) »
Hebrew Bible (HEB)
במדבר 2 (HEB) »
Portuguese Bible (BSL)
Números 2 (BSL) »
Vietnamese Bible (VIE)
Dân Số 2 (VIE) »
Spanish Bible (RVA)
Números 2 (RVA) »
Italian Bible (RIV)
Numeri 2 (RIV) »
Chinese Simplified (CUVS)
民 数 记 2 (CUVS) »
Chinese Traditional (CUVT)
民 數 記 2 (CUVT) »
Albanian Bible (ALB)
Numrat 2 (ALB) »
Swedish Bible (SV1917)
4 Mosebok 2 (SV1917) »
Russian Bible (RUSV)
Числа 2 (RUSV) »
Ukrainian Bible (UKR)
Числа 2 (UKR) »
Hungarian Bible (KAR)
4 Mózes 2 (KAR) »
Bulgarian Bible (BULG)
Числа 2 (BULG) »
Japanese Bible (JPN)
民数記 2 (JPN) »
Norwegian Bible (NORSK)
4 Mosebok 2 (NORSK) »

ಅರಣ್ಯಕಾಂಡ (KANIRV) Chapter Selection

KANIRV Book Selection List