ಅರಣ್ಯಕಾಂಡ Chapter 31 KANIRV Bible Verse Images

ಅರಣ್ಯಕಾಂಡ 31 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 31 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 31:1 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ,

ಅರಣ್ಯಕಾಂಡ 31:2 (KANIRV)
Square Portrait Landscape 4K UHD
“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.

ಅರಣ್ಯಕಾಂಡ 31:3 (KANIRV)
Square Portrait Landscape 4K UHD
ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.

ಅರಣ್ಯಕಾಂಡ 31:4 (KANIRV)
Square Portrait Landscape 4K UHD
ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”

ಅರಣ್ಯಕಾಂಡ 31:5 (KANIRV)
Square Portrait Landscape 4K UHD
ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು.

ಅರಣ್ಯಕಾಂಡ 31:6 (KANIRV)
Square Portrait Landscape 4K UHD
ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.

ಅರಣ್ಯಕಾಂಡ 31:7 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.

ಅರಣ್ಯಕಾಂಡ 31:8 (KANIRV)
Square Portrait Landscape 4K UHD
ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.

ಅರಣ್ಯಕಾಂಡ 31:9 (KANIRV)
Square Portrait Landscape 4K UHD
ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.

ಅರಣ್ಯಕಾಂಡ 31:10 (KANIRV)
Square Portrait Landscape 4K UHD
ಅವರು ಇದ್ದ ಎಲ್ಲಾ ಊರುಗಳನ್ನೂ, ಪಾಳೆಯಗಳನ್ನೂ ಸುಟ್ಟುಬಿಟ್ಟರು.

ಅರಣ್ಯಕಾಂಡ 31:11 (KANIRV)
Square Portrait Landscape 4K UHD
ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.

ಅರಣ್ಯಕಾಂಡ 31:12 (KANIRV)
Square Portrait Landscape 4K UHD
ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.

ಅರಣ್ಯಕಾಂಡ 31:13 (KANIRV)
Square Portrait Landscape 4K UHD
ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.

ಅರಣ್ಯಕಾಂಡ 31:14 (KANIRV)
Square Portrait Landscape 4K UHD
ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.

ಅರಣ್ಯಕಾಂಡ 31:15 (KANIRV)
Square Portrait Landscape 4K UHD
ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?

ಅರಣ್ಯಕಾಂಡ 31:16 (KANIRV)
Square Portrait Landscape 4K UHD
ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಅರಣ್ಯಕಾಂಡ 31:17 (KANIRV)
Square Portrait Landscape 4K UHD
ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.

ಅರಣ್ಯಕಾಂಡ 31:18 (KANIRV)
Square Portrait Landscape 4K UHD
ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.

ಅರಣ್ಯಕಾಂಡ 31:19 (KANIRV)
Square Portrait Landscape 4K UHD
ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.

ಅರಣ್ಯಕಾಂಡ 31:20 (KANIRV)
Square Portrait Landscape 4K UHD
ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು.

ಅರಣ್ಯಕಾಂಡ 31:21 (KANIRV)
Square Portrait Landscape 4K UHD
ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,

ಅರಣ್ಯಕಾಂಡ 31:22 (KANIRV)
Square Portrait Landscape 4K UHD
ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,

ಅರಣ್ಯಕಾಂಡ 31:23 (KANIRV)
Square Portrait Landscape 4K UHD
ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.

ಅರಣ್ಯಕಾಂಡ 31:24 (KANIRV)
Square Portrait Landscape 4K UHD
ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು.

ಅರಣ್ಯಕಾಂಡ 31:25 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅರಣ್ಯಕಾಂಡ 31:26 (KANIRV)
Square Portrait Landscape 4K UHD
“ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,

ಅರಣ್ಯಕಾಂಡ 31:27 (KANIRV)
Square Portrait Landscape 4K UHD
ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.

ಅರಣ್ಯಕಾಂಡ 31:28 (KANIRV)
Square Portrait Landscape 4K UHD
ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.

ಅರಣ್ಯಕಾಂಡ 31:29 (KANIRV)
Square Portrait Landscape 4K UHD
ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.

ಅರಣ್ಯಕಾಂಡ 31:30 (KANIRV)
Square Portrait Landscape 4K UHD
ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.

ಅರಣ್ಯಕಾಂಡ 31:31 (KANIRV)
Square Portrait Landscape 4K UHD
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.

ಅರಣ್ಯಕಾಂಡ 31:32 (KANIRV)
Square Portrait Landscape 4K UHD
ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000,

ಅರಣ್ಯಕಾಂಡ 31:36 (KANIRV)
Square Portrait Landscape 4K UHD
ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500.

ಅರಣ್ಯಕಾಂಡ 31:37 (KANIRV)
Square Portrait Landscape 4K UHD
ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.

ಅರಣ್ಯಕಾಂಡ 31:38 (KANIRV)
Square Portrait Landscape 4K UHD
ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72.

ಅರಣ್ಯಕಾಂಡ 31:39 (KANIRV)
Square Portrait Landscape 4K UHD
ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61

ಅರಣ್ಯಕಾಂಡ 31:40 (KANIRV)
Square Portrait Landscape 4K UHD
16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.

ಅರಣ್ಯಕಾಂಡ 31:41 (KANIRV)
Square Portrait Landscape 4K UHD
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.

ಅರಣ್ಯಕಾಂಡ 31:42 (KANIRV)
Square Portrait Landscape 4K UHD
ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿ ಹಂಚಿದ ಅರ್ಧ ಭಾಗ

ಅರಣ್ಯಕಾಂಡ 31:43 (KANIRV)
Square Portrait Landscape 4K UHD
ಎಷ್ಟೆಂದರೆ - 3,37,500 ಆಡುಕುರಿಗಳು.

ಅರಣ್ಯಕಾಂಡ 31:46 (KANIRV)
Square Portrait Landscape 4K UHD
ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು.

ಅರಣ್ಯಕಾಂಡ 31:47 (KANIRV)
Square Portrait Landscape 4K UHD
ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.

ಅರಣ್ಯಕಾಂಡ 31:48 (KANIRV)
Square Portrait Landscape 4K UHD
ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ,

ಅರಣ್ಯಕಾಂಡ 31:49 (KANIRV)
Square Portrait Landscape 4K UHD
“ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.

ಅರಣ್ಯಕಾಂಡ 31:50 (KANIRV)
Square Portrait Landscape 4K UHD
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.

ಅರಣ್ಯಕಾಂಡ 31:51 (KANIRV)
Square Portrait Landscape 4K UHD
ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು.

ಅರಣ್ಯಕಾಂಡ 31:52 (KANIRV)
Square Portrait Landscape 4K UHD
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.

ಅರಣ್ಯಕಾಂಡ 31:53 (KANIRV)
Square Portrait Landscape 4K UHD
ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.

ಅರಣ್ಯಕಾಂಡ 31:54 (KANIRV)
Square Portrait Landscape 4K UHD
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.

Available Bible Translations

American Standard Version (ASV)
Numbers 31 (ASV) »
King James Version (KJV)
Numbers 31 (KJV) »
GOD’S WORD® (GW)
Numbers 31 (GW) »
Berean Bible (BSB)
Numbers 31 (BSB) »
World English Bible (WEB)
Numbers 31 (WEB) »
French Bible (LSG)
Nombres 31 (LSG) »
German Bible (LUTH1912)
Numeri 31 (LUTH1912) »
Punjabi Bible (PANIRV)
ਗਿਣਤੀ 31 (PANIRV) »
Bengali Bible (BENIRV)
গননা 31 (BENIRV) »
Marathi Bible (MARIRV)
गणना 31 (MARIRV) »
Gujarati Bible (GUJIRV)
ગણના 31 (GUJIRV) »
Hebrew Bible (HEB)
במדבר 31 (HEB) »
Portuguese Bible (BSL)
Números 31 (BSL) »
Vietnamese Bible (VIE)
Dân Số 31 (VIE) »
Spanish Bible (RVA)
Números 31 (RVA) »
Italian Bible (RIV)
Numeri 31 (RIV) »
Chinese Simplified (CUVS)
民 数 记 31 (CUVS) »
Chinese Traditional (CUVT)
民 數 記 31 (CUVT) »
Albanian Bible (ALB)
Numrat 31 (ALB) »
Swedish Bible (SV1917)
4 Mosebok 31 (SV1917) »
Russian Bible (RUSV)
Числа 31 (RUSV) »
Ukrainian Bible (UKR)
Числа 31 (UKR) »
Hungarian Bible (KAR)
4 Mózes 31 (KAR) »
Bulgarian Bible (BULG)
Числа 31 (BULG) »
Japanese Bible (JPN)
民数記 31 (JPN) »
Norwegian Bible (NORSK)
4 Mosebok 31 (NORSK) »

ಅರಣ್ಯಕಾಂಡ (KANIRV) Chapter Selection

KANIRV Book Selection List