ಅರಣ್ಯಕಾಂಡ Chapter 32 KANIRV Bible Verse Images

ಅರಣ್ಯಕಾಂಡ 32 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 32 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 32:1 (KANIRV)
Square Portrait Landscape 4K UHD
ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.

ಅರಣ್ಯಕಾಂಡ 32:2 (KANIRV)
Square Portrait Landscape 4K UHD
ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,

ಅರಣ್ಯಕಾಂಡ 32:3 (KANIRV)
Square Portrait Landscape 4K UHD
“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,

ಅರಣ್ಯಕಾಂಡ 32:4 (KANIRV)
Square Portrait Landscape 4K UHD
ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.

ಅರಣ್ಯಕಾಂಡ 32:5 (KANIRV)
Square Portrait Landscape 4K UHD
ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು.

ಅರಣ್ಯಕಾಂಡ 32:6 (KANIRV)
Square Portrait Landscape 4K UHD
ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?

ಅರಣ್ಯಕಾಂಡ 32:7 (KANIRV)
Square Portrait Landscape 4K UHD
ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅರಣ್ಯಕಾಂಡ 32:8 (KANIRV)
Square Portrait Landscape 4K UHD
ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.

ಅರಣ್ಯಕಾಂಡ 32:9 (KANIRV)
Square Portrait Landscape 4K UHD
ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.

ಅರಣ್ಯಕಾಂಡ 32:10 (KANIRV)
Square Portrait Landscape 4K UHD
ಆ ಕಾಲದಲ್ಲಿ ಯೆಹೋವನು ಕೋಪಗೊಂಡವನಾಗಿ ಪ್ರಮಾಣಮಾಡಿ,

ಅರಣ್ಯಕಾಂಡ 32:11 (KANIRV)
Square Portrait Landscape 4K UHD
‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ

ಅರಣ್ಯಕಾಂಡ 32:12 (KANIRV)
Square Portrait Landscape 4K UHD
ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ’” ಎಂದು ಖಂಡಿತವಾಗಿ ಹೇಳಿದನು.

ಅರಣ್ಯಕಾಂಡ 32:13 (KANIRV)
Square Portrait Landscape 4K UHD
ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.

ಅರಣ್ಯಕಾಂಡ 32:14 (KANIRV)
Square Portrait Landscape 4K UHD
“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.

ಅರಣ್ಯಕಾಂಡ 32:15 (KANIRV)
Square Portrait Landscape 4K UHD
ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.

ಅರಣ್ಯಕಾಂಡ 32:16 (KANIRV)
Square Portrait Landscape 4K UHD
ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.

ಅರಣ್ಯಕಾಂಡ 32:17 (KANIRV)
Square Portrait Landscape 4K UHD
ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.

ಅರಣ್ಯಕಾಂಡ 32:18 (KANIRV)
Square Portrait Landscape 4K UHD
ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.

ಅರಣ್ಯಕಾಂಡ 32:19 (KANIRV)
Square Portrait Landscape 4K UHD
ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.

ಅರಣ್ಯಕಾಂಡ 32:20 (KANIRV)
Square Portrait Landscape 4K UHD
ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,

ಅರಣ್ಯಕಾಂಡ 32:21 (KANIRV)
Square Portrait Landscape 4K UHD
ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ

ಅರಣ್ಯಕಾಂಡ 32:22 (KANIRV)
Square Portrait Landscape 4K UHD
ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.

ಅರಣ್ಯಕಾಂಡ 32:23 (KANIRV)
Square Portrait Landscape 4K UHD
“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.

ಅರಣ್ಯಕಾಂಡ 32:24 (KANIRV)
Square Portrait Landscape 4K UHD
ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು.

ಅರಣ್ಯಕಾಂಡ 32:25 (KANIRV)
Square Portrait Landscape 4K UHD
ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.

ಅರಣ್ಯಕಾಂಡ 32:26 (KANIRV)
Square Portrait Landscape 4K UHD
ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.

ಅರಣ್ಯಕಾಂಡ 32:27 (KANIRV)
Square Portrait Landscape 4K UHD
ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು.

ಅರಣ್ಯಕಾಂಡ 32:28 (KANIRV)
Square Portrait Landscape 4K UHD
ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.

ಅರಣ್ಯಕಾಂಡ 32:29 (KANIRV)
Square Portrait Landscape 4K UHD
ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.

ಅರಣ್ಯಕಾಂಡ 32:30 (KANIRV)
Square Portrait Landscape 4K UHD
ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು.

ಅರಣ್ಯಕಾಂಡ 32:31 (KANIRV)
Square Portrait Landscape 4K UHD
ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.

ಅರಣ್ಯಕಾಂಡ 32:32 (KANIRV)
Square Portrait Landscape 4K UHD
ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.

ಅರಣ್ಯಕಾಂಡ 32:33 (KANIRV)
Square Portrait Landscape 4K UHD
ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

ಅರಣ್ಯಕಾಂಡ 32:34 (KANIRV)
Square Portrait Landscape 4K UHD
ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.

ಅರಣ್ಯಕಾಂಡ 32:35 (KANIRV)
Square Portrait Landscape 4K UHD
ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,

ಅರಣ್ಯಕಾಂಡ 32:36 (KANIRV)
Square Portrait Landscape 4K UHD
ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.

ಅರಣ್ಯಕಾಂಡ 32:37 (KANIRV)
Square Portrait Landscape 4K UHD
ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.

ಅರಣ್ಯಕಾಂಡ 32:38 (KANIRV)
Square Portrait Landscape 4K UHD
ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಅರಣ್ಯಕಾಂಡ 32:39 (KANIRV)
Square Portrait Landscape 4K UHD
ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅರಣ್ಯಕಾಂಡ 32:40 (KANIRV)
Square Portrait Landscape 4K UHD
ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.

ಅರಣ್ಯಕಾಂಡ 32:41 (KANIRV)
Square Portrait Landscape 4K UHD
ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.

ಅರಣ್ಯಕಾಂಡ 32:42 (KANIRV)
Square Portrait Landscape 4K UHD
ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.

Available Bible Translations

American Standard Version (ASV)
Numbers 32 (ASV) »
King James Version (KJV)
Numbers 32 (KJV) »
GOD’S WORD® (GW)
Numbers 32 (GW) »
Berean Bible (BSB)
Numbers 32 (BSB) »
World English Bible (WEB)
Numbers 32 (WEB) »
French Bible (LSG)
Nombres 32 (LSG) »
German Bible (LUTH1912)
Numeri 32 (LUTH1912) »
Punjabi Bible (PANIRV)
ਗਿਣਤੀ 32 (PANIRV) »
Bengali Bible (BENIRV)
গননা 32 (BENIRV) »
Marathi Bible (MARIRV)
गणना 32 (MARIRV) »
Gujarati Bible (GUJIRV)
ગણના 32 (GUJIRV) »
Hebrew Bible (HEB)
במדבר 32 (HEB) »
Portuguese Bible (BSL)
Números 32 (BSL) »
Vietnamese Bible (VIE)
Dân Số 32 (VIE) »
Spanish Bible (RVA)
Números 32 (RVA) »
Italian Bible (RIV)
Numeri 32 (RIV) »
Chinese Simplified (CUVS)
民 数 记 32 (CUVS) »
Chinese Traditional (CUVT)
民 數 記 32 (CUVT) »
Albanian Bible (ALB)
Numrat 32 (ALB) »
Swedish Bible (SV1917)
4 Mosebok 32 (SV1917) »
Russian Bible (RUSV)
Числа 32 (RUSV) »
Ukrainian Bible (UKR)
Числа 32 (UKR) »
Hungarian Bible (KAR)
4 Mózes 32 (KAR) »
Bulgarian Bible (BULG)
Числа 32 (BULG) »
Japanese Bible (JPN)
民数記 32 (JPN) »
Norwegian Bible (NORSK)
4 Mosebok 32 (NORSK) »

ಅರಣ್ಯಕಾಂಡ (KANIRV) Chapter Selection

KANIRV Book Selection List