ಅರಣ್ಯಕಾಂಡ Chapter 4 KANIRV Bible Verse Images

ಅರಣ್ಯಕಾಂಡ 4 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 4 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 4:1 (KANIRV)
Square Portrait Landscape 4K UHD
ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,

ಅರಣ್ಯಕಾಂಡ 4:2 (KANIRV)
Square Portrait Landscape 4K UHD
“ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅರಣ್ಯಕಾಂಡ 4:3 (KANIRV)
Square Portrait Landscape 4K UHD
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.

ಅರಣ್ಯಕಾಂಡ 4:4 (KANIRV)
Square Portrait Landscape 4K UHD
ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.

ಅರಣ್ಯಕಾಂಡ 4:5 (KANIRV)
Square Portrait Landscape 4K UHD
ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,

ಅರಣ್ಯಕಾಂಡ 4:6 (KANIRV)
Square Portrait Landscape 4K UHD
ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.

ಅರಣ್ಯಕಾಂಡ 4:7 (KANIRV)
Square Portrait Landscape 4K UHD
ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.

ಅರಣ್ಯಕಾಂಡ 4:8 (KANIRV)
Square Portrait Landscape 4K UHD
ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.

ಅರಣ್ಯಕಾಂಡ 4:9 (KANIRV)
Square Portrait Landscape 4K UHD
ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ

ಅರಣ್ಯಕಾಂಡ 4:10 (KANIRV)
Square Portrait Landscape 4K UHD
ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.

ಅರಣ್ಯಕಾಂಡ 4:11 (KANIRV)
Square Portrait Landscape 4K UHD
ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.

ಅರಣ್ಯಕಾಂಡ 4:12 (KANIRV)
Square Portrait Landscape 4K UHD
ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.

ಅರಣ್ಯಕಾಂಡ 4:13 (KANIRV)
Square Portrait Landscape 4K UHD
ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.

ಅರಣ್ಯಕಾಂಡ 4:14 (KANIRV)
Square Portrait Landscape 4K UHD
ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.

ಅರಣ್ಯಕಾಂಡ 4:15 (KANIRV)
Square Portrait Landscape 4K UHD
ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

ಅರಣ್ಯಕಾಂಡ 4:16 (KANIRV)
Square Portrait Landscape 4K UHD
ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”

ಅರಣ್ಯಕಾಂಡ 4:17 (KANIRV)
Square Portrait Landscape 4K UHD
ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅರಣ್ಯಕಾಂಡ 4:18 (KANIRV)
Square Portrait Landscape 4K UHD
“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.

ಅರಣ್ಯಕಾಂಡ 4:19 (KANIRV)
Square Portrait Landscape 4K UHD
ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.

ಅರಣ್ಯಕಾಂಡ 4:20 (KANIRV)
Square Portrait Landscape 4K UHD
ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.

ಅರಣ್ಯಕಾಂಡ 4:21 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅರಣ್ಯಕಾಂಡ 4:22 (KANIRV)
Square Portrait Landscape 4K UHD
“ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.

ಅರಣ್ಯಕಾಂಡ 4:23 (KANIRV)
Square Portrait Landscape 4K UHD
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.

ಅರಣ್ಯಕಾಂಡ 4:24 (KANIRV)
Square Portrait Landscape 4K UHD
ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;

ಅರಣ್ಯಕಾಂಡ 4:25 (KANIRV)
Square Portrait Landscape 4K UHD
ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,

ಅರಣ್ಯಕಾಂಡ 4:26 (KANIRV)
Square Portrait Landscape 4K UHD
ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.

ಅರಣ್ಯಕಾಂಡ 4:27 (KANIRV)
Square Portrait Landscape 4K UHD
ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.

ಅರಣ್ಯಕಾಂಡ 4:28 (KANIRV)
Square Portrait Landscape 4K UHD
ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು.

ಅರಣ್ಯಕಾಂಡ 4:29 (KANIRV)
Square Portrait Landscape 4K UHD
“ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅರಣ್ಯಕಾಂಡ 4:30 (KANIRV)
Square Portrait Landscape 4K UHD
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.

ಅರಣ್ಯಕಾಂಡ 4:31 (KANIRV)
Square Portrait Landscape 4K UHD
ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,

ಅರಣ್ಯಕಾಂಡ 4:32 (KANIRV)
Square Portrait Landscape 4K UHD
ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.

ಅರಣ್ಯಕಾಂಡ 4:33 (KANIRV)
Square Portrait Landscape 4K UHD
ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು.

ಅರಣ್ಯಕಾಂಡ 4:34 (KANIRV)
Square Portrait Landscape 4K UHD
ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.

ಅರಣ್ಯಕಾಂಡ 4:35 (KANIRV)
Square Portrait Landscape 4K UHD
ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.

ಅರಣ್ಯಕಾಂಡ 4:36 (KANIRV)
Square Portrait Landscape 4K UHD
ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.

ಅರಣ್ಯಕಾಂಡ 4:37 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.

ಅರಣ್ಯಕಾಂಡ 4:38 (KANIRV)
Square Portrait Landscape 4K UHD
ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.

ಅರಣ್ಯಕಾಂಡ 4:39 (KANIRV)
Square Portrait Landscape 4K UHD
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.

ಅರಣ್ಯಕಾಂಡ 4:40 (KANIRV)
Square Portrait Landscape 4K UHD
ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.

ಅರಣ್ಯಕಾಂಡ 4:41 (KANIRV)
Square Portrait Landscape 4K UHD
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.

ಅರಣ್ಯಕಾಂಡ 4:42 (KANIRV)
Square Portrait Landscape 4K UHD
ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.

ಅರಣ್ಯಕಾಂಡ 4:43 (KANIRV)
Square Portrait Landscape 4K UHD
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.

ಅರಣ್ಯಕಾಂಡ 4:44 (KANIRV)
Square Portrait Landscape 4K UHD
ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.

ಅರಣ್ಯಕಾಂಡ 4:45 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.

ಅರಣ್ಯಕಾಂಡ 4:46 (KANIRV)
Square Portrait Landscape 4K UHD
ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.

ಅರಣ್ಯಕಾಂಡ 4:47 (KANIRV)
Square Portrait Landscape 4K UHD
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.

ಅರಣ್ಯಕಾಂಡ 4:48 (KANIRV)
Square Portrait Landscape 4K UHD
ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580.

ಅರಣ್ಯಕಾಂಡ 4:49 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.

Available Bible Translations

American Standard Version (ASV)
Numbers 4 (ASV) »
King James Version (KJV)
Numbers 4 (KJV) »
GOD’S WORD® (GW)
Numbers 4 (GW) »
Berean Bible (BSB)
Numbers 4 (BSB) »
World English Bible (WEB)
Numbers 4 (WEB) »
French Bible (LSG)
Nombres 4 (LSG) »
German Bible (LUTH1912)
Numeri 4 (LUTH1912) »
Hindi Bible (HINIRV)
गिनती 4 (HINIRV) »
Punjabi Bible (PANIRV)
ਗਿਣਤੀ 4 (PANIRV) »
Bengali Bible (BENIRV)
গননা 4 (BENIRV) »
Marathi Bible (MARIRV)
गणना 4 (MARIRV) »
Gujarati Bible (GUJIRV)
ગણના 4 (GUJIRV) »
Hebrew Bible (HEB)
במדבר 4 (HEB) »
Portuguese Bible (BSL)
Números 4 (BSL) »
Vietnamese Bible (VIE)
Dân Số 4 (VIE) »
Spanish Bible (RVA)
Números 4 (RVA) »
Italian Bible (RIV)
Numeri 4 (RIV) »
Chinese Simplified (CUVS)
民 数 记 4 (CUVS) »
Chinese Traditional (CUVT)
民 數 記 4 (CUVT) »
Albanian Bible (ALB)
Numrat 4 (ALB) »
Swedish Bible (SV1917)
4 Mosebok 4 (SV1917) »
Russian Bible (RUSV)
Числа 4 (RUSV) »
Ukrainian Bible (UKR)
Числа 4 (UKR) »
Hungarian Bible (KAR)
4 Mózes 4 (KAR) »
Bulgarian Bible (BULG)
Числа 4 (BULG) »
Japanese Bible (JPN)
民数記 4 (JPN) »
Norwegian Bible (NORSK)
4 Mosebok 4 (NORSK) »

ಅರಣ್ಯಕಾಂಡ (KANIRV) Chapter Selection

KANIRV Book Selection List