ಕೀರ್ತನೆಗಳು Chapter 109 KANIRV Bible Verse Images

ಕೀರ್ತನೆಗಳು 109 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 109 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 109:1 (KANIRV)
Square Portrait Landscape 4K UHD
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.

ಕೀರ್ತನೆಗಳು 109:2 (KANIRV)
Square Portrait Landscape 4K UHD
ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.

ಕೀರ್ತನೆಗಳು 109:3 (KANIRV)
Square Portrait Landscape 4K UHD
ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.

ಕೀರ್ತನೆಗಳು 109:4 (KANIRV)
Square Portrait Landscape 4K UHD
ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.

ಕೀರ್ತನೆಗಳು 109:5 (KANIRV)
Square Portrait Landscape 4K UHD
ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.

ಕೀರ್ತನೆಗಳು 109:6 (KANIRV)
Square Portrait Landscape 4K UHD
ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.

ಕೀರ್ತನೆಗಳು 109:7 (KANIRV)
Square Portrait Landscape 4K UHD
ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.

ಕೀರ್ತನೆಗಳು 109:8 (KANIRV)
Square Portrait Landscape 4K UHD
ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.

ಕೀರ್ತನೆಗಳು 109:9 (KANIRV)
Square Portrait Landscape 4K UHD
ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.

ಕೀರ್ತನೆಗಳು 109:10 (KANIRV)
Square Portrait Landscape 4K UHD
ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.

ಕೀರ್ತನೆಗಳು 109:11 (KANIRV)
Square Portrait Landscape 4K UHD
ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.

ಕೀರ್ತನೆಗಳು 109:12 (KANIRV)
Square Portrait Landscape 4K UHD
ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,

ಕೀರ್ತನೆಗಳು 109:13 (KANIRV)
Square Portrait Landscape 4K UHD
ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

ಕೀರ್ತನೆಗಳು 109:14 (KANIRV)
Square Portrait Landscape 4K UHD
ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಕೀರ್ತನೆಗಳು 109:15 (KANIRV)
Square Portrait Landscape 4K UHD
ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.

ಕೀರ್ತನೆಗಳು 109:16 (KANIRV)
Square Portrait Landscape 4K UHD
ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.

ಕೀರ್ತನೆಗಳು 109:17 (KANIRV)
Square Portrait Landscape 4K UHD
ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!

ಕೀರ್ತನೆಗಳು 109:18 (KANIRV)
Square Portrait Landscape 4K UHD
ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.

ಕೀರ್ತನೆಗಳು 109:19 (KANIRV)
Square Portrait Landscape 4K UHD
ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.

ಕೀರ್ತನೆಗಳು 109:20 (KANIRV)
Square Portrait Landscape 4K UHD
ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.

ಕೀರ್ತನೆಗಳು 109:21 (KANIRV)
Square Portrait Landscape 4K UHD
ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.

ಕೀರ್ತನೆಗಳು 109:22 (KANIRV)
Square Portrait Landscape 4K UHD
ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.

ಕೀರ್ತನೆಗಳು 109:23 (KANIRV)
Square Portrait Landscape 4K UHD
ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.

ಕೀರ್ತನೆಗಳು 109:24 (KANIRV)
Square Portrait Landscape 4K UHD
ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.

ಕೀರ್ತನೆಗಳು 109:25 (KANIRV)
Square Portrait Landscape 4K UHD
ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.

ಕೀರ್ತನೆಗಳು 109:26 (KANIRV)
Square Portrait Landscape 4K UHD
ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.

ಕೀರ್ತನೆಗಳು 109:27 (KANIRV)
Square Portrait Landscape 4K UHD
ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.

ಕೀರ್ತನೆಗಳು 109:28 (KANIRV)
Square Portrait Landscape 4K UHD
ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.

ಕೀರ್ತನೆಗಳು 109:29 (KANIRV)
Square Portrait Landscape 4K UHD
ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.

ಕೀರ್ತನೆಗಳು 109:30 (KANIRV)
Square Portrait Landscape 4K UHD
ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.

ಕೀರ್ತನೆಗಳು 109:31 (KANIRV)
Square Portrait Landscape 4K UHD
ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.

Available Bible Translations

American Standard Version
Psalms 109 (ASV) »
King James Version
Psalms 109 (KJV) »
GOD’S WORD® (GW)
Psalms 109 (GW) »
World English Bible
Psalms 109 (WEB) »
Louis Segond 1910
Psaumes 109 (LSG) »
Luther Bibel 1912
Psalm 109 (LUTH1912) »
इंडियन रिवाइज्ड वर्जन - हिंदी
भजन संहिता 109 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 109 (PANIRV) »
ভারতীয় সংশোধিত সংস্করণ - বাংলা
গীতমালা 109 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 109 (TAMIRV) »
इंडियन रिवाइज्ड वर्जन - मराठी
स्तोत्रसंहिता 109 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 109 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 109 (GUJIRV) »
الكتاب المقدس باللغة العربية، فان دايك
اَلْمَزَامِيرُ 109 (AVD) »
תנ ך עברי מודרני
תהלים 109 (HEB) »
Bíblia Sagrada Português
Salmos 109 (BSL) »
Kinh Thánh: Tiếng Việt
Thánh Thi 109 (VIE) »
Reina Valera Antigua
Salmos 109 (RVA) »
La Sacra Bibbia
Salmi 109 (RIV) »
圣 经 简体中文和合本
诗 篇 109 (CUVS) »
聖 經 繁體中文和合本
詩 篇 109 (CUVT) »
Bibla e Shenjtë
Psalmet 109 (ALB) »
Svenska Bibeln 1917
Psaltaren 109 (SV1917) »
Библия на русском
Псалтирь 109 (RUSV) »
Українська Біблія
Псалми 109 (UKR) »
Szent Biblia - Magyar
Zsoltárok 109 (KAR) »
Българска Библия
Псалми 109 (BULG) »
聖書 日本語
詩篇 109 (JPN) »
Kitaabka Quduuska Ah
Sabuurradii 109 (SOM) »
De Heilige Schrift
Psalmen 109 (NLD) »
Dansk Bibel 1871
Salme 109 (DA1871) »

KANIRV Book Selection List