ಕೀರ್ತನೆಗಳು Chapter 22 KANIRV Bible Verse Images

ಕೀರ್ತನೆಗಳು 22 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 22 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 22:1 (KANIRV)
Square Portrait Landscape 4K UHD
(ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.) ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

ಕೀರ್ತನೆಗಳು 22:2 (KANIRV)
Square Portrait Landscape 4K UHD
ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.

ಕೀರ್ತನೆಗಳು 22:3 (KANIRV)
Square Portrait Landscape 4K UHD
ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.

ಕೀರ್ತನೆಗಳು 22:4 (KANIRV)
Square Portrait Landscape 4K UHD
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.

ಕೀರ್ತನೆಗಳು 22:5 (KANIRV)
Square Portrait Landscape 4K UHD
ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.

ಕೀರ್ತನೆಗಳು 22:6 (KANIRV)
Square Portrait Landscape 4K UHD
ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.

ಕೀರ್ತನೆಗಳು 22:7 (KANIRV)
Square Portrait Landscape 4K UHD
ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,

ಕೀರ್ತನೆಗಳು 22:8 (KANIRV)
Square Portrait Landscape 4K UHD
“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.

ಕೀರ್ತನೆಗಳು 22:9 (KANIRV)
Square Portrait Landscape 4K UHD
ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.

ಕೀರ್ತನೆಗಳು 22:10 (KANIRV)
Square Portrait Landscape 4K UHD
ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.

ಕೀರ್ತನೆಗಳು 22:11 (KANIRV)
Square Portrait Landscape 4K UHD
ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.

ಕೀರ್ತನೆಗಳು 22:12 (KANIRV)
Square Portrait Landscape 4K UHD
ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.

ಕೀರ್ತನೆಗಳು 22:13 (KANIRV)
Square Portrait Landscape 4K UHD
ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.

ಕೀರ್ತನೆಗಳು 22:14 (KANIRV)
Square Portrait Landscape 4K UHD
ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.

ಕೀರ್ತನೆಗಳು 22:15 (KANIRV)
Square Portrait Landscape 4K UHD
ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.

ಕೀರ್ತನೆಗಳು 22:16 (KANIRV)
Square Portrait Landscape 4K UHD
ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.

ಕೀರ್ತನೆಗಳು 22:17 (KANIRV)
Square Portrait Landscape 4K UHD
ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.

ಕೀರ್ತನೆಗಳು 22:18 (KANIRV)
Square Portrait Landscape 4K UHD
ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.

ಕೀರ್ತನೆಗಳು 22:19 (KANIRV)
Square Portrait Landscape 4K UHD
ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.

ಕೀರ್ತನೆಗಳು 22:20 (KANIRV)
Square Portrait Landscape 4K UHD
ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.

ಕೀರ್ತನೆಗಳು 22:21 (KANIRV)
Square Portrait Landscape 4K UHD
ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.

ಕೀರ್ತನೆಗಳು 22:22 (KANIRV)
Square Portrait Landscape 4K UHD
ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

ಕೀರ್ತನೆಗಳು 22:23 (KANIRV)
Square Portrait Landscape 4K UHD
ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.

ಕೀರ್ತನೆಗಳು 22:24 (KANIRV)
Square Portrait Landscape 4K UHD
ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.

ಕೀರ್ತನೆಗಳು 22:25 (KANIRV)
Square Portrait Landscape 4K UHD
ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.

ಕೀರ್ತನೆಗಳು 22:26 (KANIRV)
Square Portrait Landscape 4K UHD
ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.

ಕೀರ್ತನೆಗಳು 22:27 (KANIRV)
Square Portrait Landscape 4K UHD
ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಕೀರ್ತನೆಗಳು 22:28 (KANIRV)
Square Portrait Landscape 4K UHD
ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.

ಕೀರ್ತನೆಗಳು 22:29 (KANIRV)
Square Portrait Landscape 4K UHD
ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.

ಕೀರ್ತನೆಗಳು 22:30 (KANIRV)
Square Portrait Landscape 4K UHD
ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.

ಕೀರ್ತನೆಗಳು 22:31 (KANIRV)
Square Portrait Landscape 4K UHD
ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.

Available Bible Translations

American Standard Version
Psalms 22 (ASV) »
King James Version
Psalms 22 (KJV) »
GOD’S WORD® (GW)
Psalms 22 (GW) »
World English Bible
Psalms 22 (WEB) »
Louis Segond 1910
Psaumes 22 (LSG) »
Luther Bibel 1912
Psalm 22 (LUTH1912) »
इंडियन रिवाइज्ड वर्जन - हिंदी
भजन संहिता 22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 22 (PANIRV) »
ভারতীয় সংশোধিত সংস্করণ - বাংলা
গীতমালা 22 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 22 (TAMIRV) »
इंडियन रिवाइज्ड वर्जन - मराठी
स्तोत्रसंहिता 22 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 22 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 22 (GUJIRV) »
الكتاب المقدس باللغة العربية، فان دايك
اَلْمَزَامِيرُ 22 (AVD) »
תנ ך עברי מודרני
תהלים 22 (HEB) »
Bíblia Sagrada Português
Salmos 22 (BSL) »
Kinh Thánh: Tiếng Việt
Thánh Thi 22 (VIE) »
Reina Valera Antigua
Salmos 22 (RVA) »
La Sacra Bibbia
Salmi 22 (RIV) »
圣 经 简体中文和合本
诗 篇 22 (CUVS) »
聖 經 繁體中文和合本
詩 篇 22 (CUVT) »
Bibla e Shenjtë
Psalmet 22 (ALB) »
Svenska Bibeln 1917
Psaltaren 22 (SV1917) »
Библия на русском
Псалтирь 22 (RUSV) »
Українська Біблія
Псалми 22 (UKR) »
Szent Biblia - Magyar
Zsoltárok 22 (KAR) »
Българска Библия
Псалми 22 (BULG) »
聖書 日本語
詩篇 22 (JPN) »
Det Norsk Bibel
Salmene 22 (NORSK) »
Biblia Takatifu
Zaburi 22 (SWHULB) »
Kitaabka Quduuska Ah
Sabuurradii 22 (SOM) »
De Heilige Schrift
Psalmen 22 (NLD) »
Dansk Bibel 1871
Salme 22 (DA1871) »

KANIRV Book Selection List