ಕೀರ್ತನೆಗಳು Chapter 35 KANIRV Bible Verse Images

ಕೀರ್ತನೆಗಳು 35 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 35 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 35:1 (KANIRV)
Square Portrait Landscape 4K UHD
ದಾವೀದನ ಕೀರ್ತನೆ. ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.

ಕೀರ್ತನೆಗಳು 35:2 (KANIRV)
Square Portrait Landscape 4K UHD
ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು.

ಕೀರ್ತನೆಗಳು 35:3 (KANIRV)
Square Portrait Landscape 4K UHD
ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು.

ಕೀರ್ತನೆಗಳು 35:4 (KANIRV)
Square Portrait Landscape 4K UHD
ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

ಕೀರ್ತನೆಗಳು 35:5 (KANIRV)
Square Portrait Landscape 4K UHD
ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.

ಕೀರ್ತನೆಗಳು 35:6 (KANIRV)
Square Portrait Landscape 4K UHD
ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.

ಕೀರ್ತನೆಗಳು 35:7 (KANIRV)
Square Portrait Landscape 4K UHD
ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.

ಕೀರ್ತನೆಗಳು 35:8 (KANIRV)
Square Portrait Landscape 4K UHD
ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.

ಕೀರ್ತನೆಗಳು 35:9 (KANIRV)
Square Portrait Landscape 4K UHD
ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.

ಕೀರ್ತನೆಗಳು 35:10 (KANIRV)
Square Portrait Landscape 4K UHD
ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.

ಕೀರ್ತನೆಗಳು 35:11 (KANIRV)
Square Portrait Landscape 4K UHD
ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.

ಕೀರ್ತನೆಗಳು 35:12 (KANIRV)
Square Portrait Landscape 4K UHD
ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.

ಕೀರ್ತನೆಗಳು 35:13 (KANIRV)
Square Portrait Landscape 4K UHD
ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.

ಕೀರ್ತನೆಗಳು 35:14 (KANIRV)
Square Portrait Landscape 4K UHD
ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.

ಕೀರ್ತನೆಗಳು 35:15 (KANIRV)
Square Portrait Landscape 4K UHD
ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.

ಕೀರ್ತನೆಗಳು 35:16 (KANIRV)
Square Portrait Landscape 4K UHD
ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.

ಕೀರ್ತನೆಗಳು 35:17 (KANIRV)
Square Portrait Landscape 4K UHD
ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.

ಕೀರ್ತನೆಗಳು 35:18 (KANIRV)
Square Portrait Landscape 4K UHD
ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.

ಕೀರ್ತನೆಗಳು 35:19 (KANIRV)
Square Portrait Landscape 4K UHD
ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.

ಕೀರ್ತನೆಗಳು 35:20 (KANIRV)
Square Portrait Landscape 4K UHD
ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.

ಕೀರ್ತನೆಗಳು 35:21 (KANIRV)
Square Portrait Landscape 4K UHD
ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.

ಕೀರ್ತನೆಗಳು 35:22 (KANIRV)
Square Portrait Landscape 4K UHD
ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?

ಕೀರ್ತನೆಗಳು 35:23 (KANIRV)
Square Portrait Landscape 4K UHD
ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.

ಕೀರ್ತನೆಗಳು 35:24 (KANIRV)
Square Portrait Landscape 4K UHD
ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.

ಕೀರ್ತನೆಗಳು 35:25 (KANIRV)
Square Portrait Landscape 4K UHD
ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.

ಕೀರ್ತನೆಗಳು 35:26 (KANIRV)
Square Portrait Landscape 4K UHD
ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.

ಕೀರ್ತನೆಗಳು 35:27 (KANIRV)
Square Portrait Landscape 4K UHD
ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.

ಕೀರ್ತನೆಗಳು 35:28 (KANIRV)
Square Portrait Landscape 4K UHD
ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.

Available Bible Translations

American Standard Version (ASV)
Psalms 35 (ASV) »
King James Version (KJV)
Psalms 35 (KJV) »
GOD’S WORD® (GW)
Psalms 35 (GW) »
Berean Bible (BSB)
Psalms 35 (BSB) »
World English Bible (WEB)
Psalms 35 (WEB) »
French Bible (LSG)
Psaumes 35 (LSG) »
German Bible (LUTH1912)
Psalm 35 (LUTH1912) »
Punjabi Bible (PANIRV)
ਜ਼ਬੂਰ 35 (PANIRV) »
Hebrew Bible (HEB)
תהלים 35 (HEB) »
Portuguese Bible (BSL)
Salmos 35 (BSL) »
Vietnamese Bible (VIE)
Thánh Thi 35 (VIE) »
Spanish Bible (RVA)
Salmos 35 (RVA) »
Italian Bible (RIV)
Salmi 35 (RIV) »
Chinese Simplified (CUVS)
诗 篇 35 (CUVS) »
Chinese Traditional (CUVT)
詩 篇 35 (CUVT) »
Albanian Bible (ALB)
Psalmet 35 (ALB) »
Swedish Bible (SV1917)
Psaltaren 35 (SV1917) »
Russian Bible (RUSV)
Псалтирь 35 (RUSV) »
Ukrainian Bible (UKR)
Псалми 35 (UKR) »
Hungarian Bible (KAR)
Zsoltárok 35 (KAR) »
Bulgarian Bible (BULG)
Псалми 35 (BULG) »
Japanese Bible (JPN)
詩篇 35 (JPN) »
Norwegian Bible (NORSK)
Salmene 35 (NORSK) »

KANIRV Book Selection List