ಕೀರ್ತನೆಗಳು Chapter 55 KANIRV Bible Verse Images

ಕೀರ್ತನೆಗಳು 55 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 55 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 55:1 (KANIRV)
Square Portrait Landscape 4K UHD
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ. ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.

ಕೀರ್ತನೆಗಳು 55:2 (KANIRV)
Square Portrait Landscape 4K UHD
ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.

ಕೀರ್ತನೆಗಳು 55:3 (KANIRV)
Square Portrait Landscape 4K UHD
ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.

ಕೀರ್ತನೆಗಳು 55:4 (KANIRV)
Square Portrait Landscape 4K UHD
ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.

ಕೀರ್ತನೆಗಳು 55:5 (KANIRV)
Square Portrait Landscape 4K UHD
ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.

ಕೀರ್ತನೆಗಳು 55:6 (KANIRV)
Square Portrait Landscape 4K UHD
ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.

ಕೀರ್ತನೆಗಳು 55:7 (KANIRV)
Square Portrait Landscape 4K UHD
ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,

ಕೀರ್ತನೆಗಳು 55:8 (KANIRV)
Square Portrait Landscape 4K UHD
ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. ಸೆಲಾ

ಕೀರ್ತನೆಗಳು 55:9 (KANIRV)
Square Portrait Landscape 4K UHD
ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.

ಕೀರ್ತನೆಗಳು 55:10 (KANIRV)
Square Portrait Landscape 4K UHD
ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.

ಕೀರ್ತನೆಗಳು 55:11 (KANIRV)
Square Portrait Landscape 4K UHD
ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.

ಕೀರ್ತನೆಗಳು 55:12 (KANIRV)
Square Portrait Landscape 4K UHD
ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.

ಕೀರ್ತನೆಗಳು 55:13 (KANIRV)
Square Portrait Landscape 4K UHD
ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.

ಕೀರ್ತನೆಗಳು 55:14 (KANIRV)
Square Portrait Landscape 4K UHD
ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.

ಕೀರ್ತನೆಗಳು 55:15 (KANIRV)
Square Portrait Landscape 4K UHD
ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.

ಕೀರ್ತನೆಗಳು 55:16 (KANIRV)
Square Portrait Landscape 4K UHD
ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.

ಕೀರ್ತನೆಗಳು 55:17 (KANIRV)
Square Portrait Landscape 4K UHD
ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ

ಕೀರ್ತನೆಗಳು 55:18 (KANIRV)
Square Portrait Landscape 4K UHD
ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.

ಕೀರ್ತನೆಗಳು 55:19 (KANIRV)
Square Portrait Landscape 4K UHD
ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.

ಕೀರ್ತನೆಗಳು 55:20 (KANIRV)
Square Portrait Landscape 4K UHD
ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ಕೀರ್ತನೆಗಳು 55:21 (KANIRV)
Square Portrait Landscape 4K UHD
ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.

ಕೀರ್ತನೆಗಳು 55:22 (KANIRV)
Square Portrait Landscape 4K UHD
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.

ಕೀರ್ತನೆಗಳು 55:23 (KANIRV)
Square Portrait Landscape 4K UHD
ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.

Available Bible Translations

American Standard Version
Psalms 55 (ASV) »
King James Version
Psalms 55 (KJV) »
GOD’S WORD® (GW)
Psalms 55 (GW) »
World English Bible
Psalms 55 (WEB) »
Louis Segond 1910
Psaumes 55 (LSG) »
Luther Bibel 1912
Psalm 55 (LUTH1912) »
इंडियन रिवाइज्ड वर्जन - हिंदी
भजन संहिता 55 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 55 (PANIRV) »
ভারতীয় সংশোধিত সংস্করণ - বাংলা
গীতমালা 55 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 55 (TAMIRV) »
इंडियन रिवाइज्ड वर्जन - मराठी
स्तोत्रसंहिता 55 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 55 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 55 (GUJIRV) »
الكتاب المقدس باللغة العربية، فان دايك
اَلْمَزَامِيرُ 55 (AVD) »
תנ ך עברי מודרני
תהלים 55 (HEB) »
Bíblia Sagrada Português
Salmos 55 (BSL) »
Kinh Thánh: Tiếng Việt
Thánh Thi 55 (VIE) »
Reina Valera Antigua
Salmos 55 (RVA) »
La Sacra Bibbia
Salmi 55 (RIV) »
圣 经 简体中文和合本
诗 篇 55 (CUVS) »
聖 經 繁體中文和合本
詩 篇 55 (CUVT) »
Bibla e Shenjtë
Psalmet 55 (ALB) »
Svenska Bibeln 1917
Psaltaren 55 (SV1917) »
Библия на русском
Псалтирь 55 (RUSV) »
Українська Біблія
Псалми 55 (UKR) »
Szent Biblia - Magyar
Zsoltárok 55 (KAR) »
Българска Библия
Псалми 55 (BULG) »
聖書 日本語
詩篇 55 (JPN) »
Det Norsk Bibel
Salmene 55 (NORSK) »
Biblia Takatifu
Zaburi 55 (SWHULB) »
Kitaabka Quduuska Ah
Sabuurradii 55 (SOM) »
De Heilige Schrift
Psalmen 55 (NLD) »
Dansk Bibel 1871
Salme 55 (DA1871) »

KANIRV Book Selection List