ಕೀರ್ತನೆಗಳು Chapter 69 KANIRV Bible Verse Images

ಕೀರ್ತನೆಗಳು 69 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 69 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 69:1 (KANIRV)
Square Portrait Landscape 4K UHD
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.

ಕೀರ್ತನೆಗಳು 69:2 (KANIRV)
Square Portrait Landscape 4K UHD
ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.

ಕೀರ್ತನೆಗಳು 69:3 (KANIRV)
Square Portrait Landscape 4K UHD
ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.

ಕೀರ್ತನೆಗಳು 69:4 (KANIRV)
Square Portrait Landscape 4K UHD
ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.

ಕೀರ್ತನೆಗಳು 69:5 (KANIRV)
Square Portrait Landscape 4K UHD
ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.

ಕೀರ್ತನೆಗಳು 69:6 (KANIRV)
Square Portrait Landscape 4K UHD
ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.

ಕೀರ್ತನೆಗಳು 69:7 (KANIRV)
Square Portrait Landscape 4K UHD
ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.

ಕೀರ್ತನೆಗಳು 69:8 (KANIRV)
Square Portrait Landscape 4K UHD
ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.

ಕೀರ್ತನೆಗಳು 69:9 (KANIRV)
Square Portrait Landscape 4K UHD
ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.

ಕೀರ್ತನೆಗಳು 69:10 (KANIRV)
Square Portrait Landscape 4K UHD
ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.

ಕೀರ್ತನೆಗಳು 69:11 (KANIRV)
Square Portrait Landscape 4K UHD
ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು.

ಕೀರ್ತನೆಗಳು 69:12 (KANIRV)
Square Portrait Landscape 4K UHD
ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.

ಕೀರ್ತನೆಗಳು 69:13 (KANIRV)
Square Portrait Landscape 4K UHD
ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.

ಕೀರ್ತನೆಗಳು 69:14 (KANIRV)
Square Portrait Landscape 4K UHD
ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.

ಕೀರ್ತನೆಗಳು 69:15 (KANIRV)
Square Portrait Landscape 4K UHD
ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.

ಕೀರ್ತನೆಗಳು 69:16 (KANIRV)
Square Portrait Landscape 4K UHD
ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.

ಕೀರ್ತನೆಗಳು 69:17 (KANIRV)
Square Portrait Landscape 4K UHD
ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.

ಕೀರ್ತನೆಗಳು 69:18 (KANIRV)
Square Portrait Landscape 4K UHD
ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.

ಕೀರ್ತನೆಗಳು 69:19 (KANIRV)
Square Portrait Landscape 4K UHD
ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.

ಕೀರ್ತನೆಗಳು 69:20 (KANIRV)
Square Portrait Landscape 4K UHD
ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.

ಕೀರ್ತನೆಗಳು 69:21 (KANIRV)
Square Portrait Landscape 4K UHD
ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.

ಕೀರ್ತನೆಗಳು 69:22 (KANIRV)
Square Portrait Landscape 4K UHD
ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

ಕೀರ್ತನೆಗಳು 69:23 (KANIRV)
Square Portrait Landscape 4K UHD
ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ.

ಕೀರ್ತನೆಗಳು 69:24 (KANIRV)
Square Portrait Landscape 4K UHD
ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.

ಕೀರ್ತನೆಗಳು 69:25 (KANIRV)
Square Portrait Landscape 4K UHD
ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ.

ಕೀರ್ತನೆಗಳು 69:26 (KANIRV)
Square Portrait Landscape 4K UHD
ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.

ಕೀರ್ತನೆಗಳು 69:27 (KANIRV)
Square Portrait Landscape 4K UHD
ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.

ಕೀರ್ತನೆಗಳು 69:28 (KANIRV)
Square Portrait Landscape 4K UHD
ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.

ಕೀರ್ತನೆಗಳು 69:29 (KANIRV)
Square Portrait Landscape 4K UHD
ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.

ಕೀರ್ತನೆಗಳು 69:30 (KANIRV)
Square Portrait Landscape 4K UHD
ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.

ಕೀರ್ತನೆಗಳು 69:31 (KANIRV)
Square Portrait Landscape 4K UHD
ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.

ಕೀರ್ತನೆಗಳು 69:32 (KANIRV)
Square Portrait Landscape 4K UHD
ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.

ಕೀರ್ತನೆಗಳು 69:33 (KANIRV)
Square Portrait Landscape 4K UHD
ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.

ಕೀರ್ತನೆಗಳು 69:34 (KANIRV)
Square Portrait Landscape 4K UHD
ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.

ಕೀರ್ತನೆಗಳು 69:35 (KANIRV)
Square Portrait Landscape 4K UHD
ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.

ಕೀರ್ತನೆಗಳು 69:36 (KANIRV)
Square Portrait Landscape 4K UHD
ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.

Available Bible Translations

American Standard Version
Psalms 69 (ASV) »
King James Version
Psalms 69 (KJV) »
GOD’S WORD® (GW)
Psalms 69 (GW) »
World English Bible
Psalms 69 (WEB) »
Louis Segond 1910
Psaumes 69 (LSG) »
Luther Bibel 1912
Psalm 69 (LUTH1912) »
इंडियन रिवाइज्ड वर्जन - हिंदी
भजन संहिता 69 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 69 (PANIRV) »
ভারতীয় সংশোধিত সংস্করণ - বাংলা
গীতমালা 69 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 69 (TAMIRV) »
इंडियन रिवाइज्ड वर्जन - मराठी
स्तोत्रसंहिता 69 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 69 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 69 (GUJIRV) »
الكتاب المقدس باللغة العربية، فان دايك
اَلْمَزَامِيرُ 69 (AVD) »
תנ ך עברי מודרני
תהלים 69 (HEB) »
Bíblia Sagrada Português
Salmos 69 (BSL) »
Kinh Thánh: Tiếng Việt
Thánh Thi 69 (VIE) »
Reina Valera Antigua
Salmos 69 (RVA) »
La Sacra Bibbia
Salmi 69 (RIV) »
圣 经 简体中文和合本
诗 篇 69 (CUVS) »
聖 經 繁體中文和合本
詩 篇 69 (CUVT) »
Bibla e Shenjtë
Psalmet 69 (ALB) »
Svenska Bibeln 1917
Psaltaren 69 (SV1917) »
Библия на русском
Псалтирь 69 (RUSV) »
Українська Біблія
Псалми 69 (UKR) »
Szent Biblia - Magyar
Zsoltárok 69 (KAR) »
Българска Библия
Псалми 69 (BULG) »
聖書 日本語
詩篇 69 (JPN) »
Det Norsk Bibel
Salmene 69 (NORSK) »
Biblia Takatifu
Zaburi 69 (SWHULB) »
Kitaabka Quduuska Ah
Sabuurradii 69 (SOM) »
De Heilige Schrift
Psalmen 69 (NLD) »
Dansk Bibel 1871
Salme 69 (DA1871) »

KANIRV Book Selection List