ಕೀರ್ತನೆಗಳು Chapter 78 KANIRV Bible Verse Images

ಕೀರ್ತನೆಗಳು 78 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 78 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 78:1 (KANIRV)
Square Portrait Landscape 4K UHD
ಆಸಾಫನ ಪದ್ಯ. ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.

ಕೀರ್ತನೆಗಳು 78:2 (KANIRV)
Square Portrait Landscape 4K UHD
ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.

ಕೀರ್ತನೆಗಳು 78:3 (KANIRV)
Square Portrait Landscape 4K UHD
ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,

ಕೀರ್ತನೆಗಳು 78:4 (KANIRV)
Square Portrait Landscape 4K UHD
ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ಕೀರ್ತನೆಗಳು 78:5 (KANIRV)
Square Portrait Landscape 4K UHD
ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;

ಕೀರ್ತನೆಗಳು 78:6 (KANIRV)
Square Portrait Landscape 4K UHD
ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.

ಕೀರ್ತನೆಗಳು 78:7 (KANIRV)
Square Portrait Landscape 4K UHD
ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,

ಕೀರ್ತನೆಗಳು 78:8 (KANIRV)
Square Portrait Landscape 4K UHD
ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

ಕೀರ್ತನೆಗಳು 78:9 (KANIRV)
Square Portrait Landscape 4K UHD
ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.

ಕೀರ್ತನೆಗಳು 78:10 (KANIRV)
Square Portrait Landscape 4K UHD
ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.

ಕೀರ್ತನೆಗಳು 78:11 (KANIRV)
Square Portrait Landscape 4K UHD
ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.

ಕೀರ್ತನೆಗಳು 78:12 (KANIRV)
Square Portrait Landscape 4K UHD
ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.

ಕೀರ್ತನೆಗಳು 78:13 (KANIRV)
Square Portrait Landscape 4K UHD
ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.

ಕೀರ್ತನೆಗಳು 78:14 (KANIRV)
Square Portrait Landscape 4K UHD
ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.

ಕೀರ್ತನೆಗಳು 78:15 (KANIRV)
Square Portrait Landscape 4K UHD
ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.

ಕೀರ್ತನೆಗಳು 78:16 (KANIRV)
Square Portrait Landscape 4K UHD
ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು.

ಕೀರ್ತನೆಗಳು 78:17 (KANIRV)
Square Portrait Landscape 4K UHD
ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.

ಕೀರ್ತನೆಗಳು 78:18 (KANIRV)
Square Portrait Landscape 4K UHD
ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.

ಕೀರ್ತನೆಗಳು 78:19 (KANIRV)
Square Portrait Landscape 4K UHD
ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?

ಕೀರ್ತನೆಗಳು 78:20 (KANIRV)
Square Portrait Landscape 4K UHD
ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.

ಕೀರ್ತನೆಗಳು 78:21 (KANIRV)
Square Portrait Landscape 4K UHD
ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,

ಕೀರ್ತನೆಗಳು 78:22 (KANIRV)
Square Portrait Landscape 4K UHD
ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.

ಕೀರ್ತನೆಗಳು 78:23 (KANIRV)
Square Portrait Landscape 4K UHD
ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,

ಕೀರ್ತನೆಗಳು 78:24 (KANIRV)
Square Portrait Landscape 4K UHD
ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.

ಕೀರ್ತನೆಗಳು 78:25 (KANIRV)
Square Portrait Landscape 4K UHD
ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.

ಕೀರ್ತನೆಗಳು 78:26 (KANIRV)
Square Portrait Landscape 4K UHD
ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,

ಕೀರ್ತನೆಗಳು 78:27 (KANIRV)
Square Portrait Landscape 4K UHD
ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.

ಕೀರ್ತನೆಗಳು 78:28 (KANIRV)
Square Portrait Landscape 4K UHD
ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.

ಕೀರ್ತನೆಗಳು 78:29 (KANIRV)
Square Portrait Landscape 4K UHD
ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.

ಕೀರ್ತನೆಗಳು 78:30 (KANIRV)
Square Portrait Landscape 4K UHD
ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,

ಕೀರ್ತನೆಗಳು 78:31 (KANIRV)
Square Portrait Landscape 4K UHD
ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.

ಕೀರ್ತನೆಗಳು 78:32 (KANIRV)
Square Portrait Landscape 4K UHD
ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.

ಕೀರ್ತನೆಗಳು 78:33 (KANIRV)
Square Portrait Landscape 4K UHD
ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.

ಕೀರ್ತನೆಗಳು 78:34 (KANIRV)
Square Portrait Landscape 4K UHD
ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,

ಕೀರ್ತನೆಗಳು 78:35 (KANIRV)
Square Portrait Landscape 4K UHD
ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.

ಕೀರ್ತನೆಗಳು 78:36 (KANIRV)
Square Portrait Landscape 4K UHD
ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.

ಕೀರ್ತನೆಗಳು 78:37 (KANIRV)
Square Portrait Landscape 4K UHD
ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.

ಕೀರ್ತನೆಗಳು 78:38 (KANIRV)
Square Portrait Landscape 4K UHD
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ಕೀರ್ತನೆಗಳು 78:39 (KANIRV)
Square Portrait Landscape 4K UHD
ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.

ಕೀರ್ತನೆಗಳು 78:40 (KANIRV)
Square Portrait Landscape 4K UHD
ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.

ಕೀರ್ತನೆಗಳು 78:41 (KANIRV)
Square Portrait Landscape 4K UHD
ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.

ಕೀರ್ತನೆಗಳು 78:42 (KANIRV)
Square Portrait Landscape 4K UHD
ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,

ಕೀರ್ತನೆಗಳು 78:43 (KANIRV)
Square Portrait Landscape 4K UHD
ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.

ಕೀರ್ತನೆಗಳು 78:44 (KANIRV)
Square Portrait Landscape 4K UHD
ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.

ಕೀರ್ತನೆಗಳು 78:45 (KANIRV)
Square Portrait Landscape 4K UHD
ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.

ಕೀರ್ತನೆಗಳು 78:46 (KANIRV)
Square Portrait Landscape 4K UHD
ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.

ಕೀರ್ತನೆಗಳು 78:47 (KANIRV)
Square Portrait Landscape 4K UHD
ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.

ಕೀರ್ತನೆಗಳು 78:48 (KANIRV)
Square Portrait Landscape 4K UHD
ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.

ಕೀರ್ತನೆಗಳು 78:49 (KANIRV)
Square Portrait Landscape 4K UHD
ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.

ಕೀರ್ತನೆಗಳು 78:50 (KANIRV)
Square Portrait Landscape 4K UHD
ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.

ಕೀರ್ತನೆಗಳು 78:51 (KANIRV)
Square Portrait Landscape 4K UHD
ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.

ಕೀರ್ತನೆಗಳು 78:52 (KANIRV)
Square Portrait Landscape 4K UHD
ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.

ಕೀರ್ತನೆಗಳು 78:53 (KANIRV)
Square Portrait Landscape 4K UHD
ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;

ಕೀರ್ತನೆಗಳು 78:54 (KANIRV)
Square Portrait Landscape 4K UHD
ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.

ಕೀರ್ತನೆಗಳು 78:55 (KANIRV)
Square Portrait Landscape 4K UHD
ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.

ಕೀರ್ತನೆಗಳು 78:56 (KANIRV)
Square Portrait Landscape 4K UHD
ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ,

ಕೀರ್ತನೆಗಳು 78:57 (KANIRV)
Square Portrait Landscape 4K UHD
ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.

ಕೀರ್ತನೆಗಳು 78:58 (KANIRV)
Square Portrait Landscape 4K UHD
ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.

ಕೀರ್ತನೆಗಳು 78:59 (KANIRV)
Square Portrait Landscape 4K UHD
ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.

ಕೀರ್ತನೆಗಳು 78:60 (KANIRV)
Square Portrait Landscape 4K UHD
ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,

ಕೀರ್ತನೆಗಳು 78:61 (KANIRV)
Square Portrait Landscape 4K UHD
ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.

ಕೀರ್ತನೆಗಳು 78:62 (KANIRV)
Square Portrait Landscape 4K UHD
ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.

ಕೀರ್ತನೆಗಳು 78:63 (KANIRV)
Square Portrait Landscape 4K UHD
ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ.

ಕೀರ್ತನೆಗಳು 78:64 (KANIRV)
Square Portrait Landscape 4K UHD
ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.

ಕೀರ್ತನೆಗಳು 78:65 (KANIRV)
Square Portrait Landscape 4K UHD
ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,

ಕೀರ್ತನೆಗಳು 78:66 (KANIRV)
Square Portrait Landscape 4K UHD
ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.

ಕೀರ್ತನೆಗಳು 78:67 (KANIRV)
Square Portrait Landscape 4K UHD
ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ,

ಕೀರ್ತನೆಗಳು 78:68 (KANIRV)
Square Portrait Landscape 4K UHD
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

ಕೀರ್ತನೆಗಳು 78:69 (KANIRV)
Square Portrait Landscape 4K UHD
ಆತನು ತನ್ನ ಆಲಯವನ್ನು ಪರ್ವತದಂತೆಯೂ, ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.

ಕೀರ್ತನೆಗಳು 78:70 (KANIRV)
Square Portrait Landscape 4K UHD
ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,

ಕೀರ್ತನೆಗಳು 78:71 (KANIRV)
Square Portrait Landscape 4K UHD
ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.

ಕೀರ್ತನೆಗಳು 78:72 (KANIRV)
Square Portrait Landscape 4K UHD
ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು.

Available Bible Translations

American Standard Version (ASV)
Psalms 78 (ASV) »
King James Version (KJV)
Psalms 78 (KJV) »
GOD’S WORD® (GW)
Psalms 78 (GW) »
Berean Bible (BSB)
Psalms 78 (BSB) »
World English Bible (WEB)
Psalms 78 (WEB) »
French Bible (LSG)
Psaumes 78 (LSG) »
German Bible (LUTH1912)
Psalm 78 (LUTH1912) »
Punjabi Bible (PANIRV)
ਜ਼ਬੂਰ 78 (PANIRV) »
Hebrew Bible (HEB)
תהלים 78 (HEB) »
Portuguese Bible (BSL)
Salmos 78 (BSL) »
Vietnamese Bible (VIE)
Thánh Thi 78 (VIE) »
Spanish Bible (RVA)
Salmos 78 (RVA) »
Italian Bible (RIV)
Salmi 78 (RIV) »
Chinese Simplified (CUVS)
诗 篇 78 (CUVS) »
Chinese Traditional (CUVT)
詩 篇 78 (CUVT) »
Albanian Bible (ALB)
Psalmet 78 (ALB) »
Swedish Bible (SV1917)
Psaltaren 78 (SV1917) »
Russian Bible (RUSV)
Псалтирь 78 (RUSV) »
Ukrainian Bible (UKR)
Псалми 78 (UKR) »
Hungarian Bible (KAR)
Zsoltárok 78 (KAR) »
Bulgarian Bible (BULG)
Псалми 78 (BULG) »
Japanese Bible (JPN)
詩篇 78 (JPN) »
Norwegian Bible (NORSK)
Salmene 78 (NORSK) »

KANIRV Book Selection List