ಪ್ರಕಟಣೆ Chapter 3 KANIRV Bible Verse Images

ಪ್ರಕಟಣೆ 3 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಪ್ರಕಟಣೆ 3 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಪ್ರಕಟಣೆ 3:1 (KANIRV)
Square Portrait Landscape 4K UHD
“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ,ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು.ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ.

ಪ್ರಕಟಣೆ 3:2 (KANIRV)
Square Portrait Landscape 4K UHD
“ಎಚ್ಚರವಾಗು, ಸಾಯುವ ಹಾಗಿರುವಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.

ಪ್ರಕಟಣೆ 3:3 (KANIRV)
Square Portrait Landscape 4K UHD
ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.

ಪ್ರಕಟಣೆ 3:4 (KANIRV)
Square Portrait Landscape 4K UHD
ಆದರೂತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರುಯೋಗ್ಯರಾಗಿರುವುದರಿಂದಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.

ಪ್ರಕಟಣೆ 3:5 (KANIRV)
Square Portrait Landscape 4K UHD
ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.

ಪ್ರಕಟಣೆ 3:6 (KANIRV)
Square Portrait Landscape 4K UHD
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟಣೆ 3:7 (KANIRV)
Square Portrait Landscape 4K UHD
“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,ಪರಿಶುದ್ಧನೂ,ಸತ್ಯವಂತನೂ,ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,

ಪ್ರಕಟಣೆ 3:8 (KANIRV)
Square Portrait Landscape 4K UHD
ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.

ಪ್ರಕಟಣೆ 3:9 (KANIRV)
Square Portrait Landscape 4K UHD
ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನುಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರುನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.

ಪ್ರಕಟಣೆ 3:10 (KANIRV)
Square Portrait Landscape 4K UHD
ಸೈರಣೆಯಿಂದಿರಬೇಕೆಂಬನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.

ಪ್ರಕಟಣೆ 3:11 (KANIRV)
Square Portrait Landscape 4K UHD
ನಾನುಬೇಗನೇ ಬರುತ್ತೇನೆ,ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.

ಪ್ರಕಟಣೆ 3:12 (KANIRV)
Square Portrait Landscape 4K UHD
ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು.ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.

ಪ್ರಕಟಣೆ 3:13 (KANIRV)
Square Portrait Landscape 4K UHD
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟಣೆ 3:14 (KANIRV)
Square Portrait Landscape 4K UHD
“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ,ದೇವರ ಸೃಷ್ಟಿಗೆ ಮೂಲನೂ ಆಗಿರುವ‘ಆಮೆನ್’ ಎಂಬಾತನುಹೇಳುವುದೇನಂದರೆ,

ಪ್ರಕಟಣೆ 3:15 (KANIRV)
Square Portrait Landscape 4K UHD
ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.

ಪ್ರಕಟಣೆ 3:16 (KANIRV)
Square Portrait Landscape 4K UHD
ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.

ಪ್ರಕಟಣೆ 3:17 (KANIRV)
Square Portrait Landscape 4K UHD
ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.

ಪ್ರಕಟಣೆ 3:18 (KANIRV)
Square Portrait Landscape 4K UHD
ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.

ಪ್ರಕಟಣೆ 3:19 (KANIRV)
Square Portrait Landscape 4K UHD
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.

ಪ್ರಕಟಣೆ 3:20 (KANIRV)
Square Portrait Landscape 4K UHD
ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.

ಪ್ರಕಟಣೆ 3:21 (KANIRV)
Square Portrait Landscape 4K UHD
ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

ಪ್ರಕಟಣೆ 3:22 (KANIRV)
Square Portrait Landscape 4K UHD
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

Available Bible Translations

American Standard Version (ASV)
Revelation 3 (ASV) »
King James Version (KJV)
Revelation 3 (KJV) »
GOD’S WORD® (GW)
Revelation 3 (GW) »
Berean Bible (BSB)
Revelation 3 (BSB) »
World English Bible (WEB)
Revelation 3 (WEB) »
French Bible (LSG)
Apocalypse 3 (LSG) »
German Bible (LUTH1912)
Offenbarung 3 (LUTH1912) »
Arabic Bible (AVD)
رُؤيا 3 (AVD) »
Hebrew Bible (HEB)
ההתגלות 3 (HEB) »
Portuguese Bible (BSL)
Apocalipse 3 (BSL) »
Vietnamese Bible (VIE)
Khải Huyền 3 (VIE) »
Spanish Bible (RVA)
Apocalipsis 3 (RVA) »
Italian Bible (RIV)
Apocalisse 3 (RIV) »
Chinese Simplified (CUVS)
启 示 录 3 (CUVS) »
Chinese Traditional (CUVT)
启 示 录 3 (CUVT) »
Albanian Bible (ALB)
Zbulesa 3 (ALB) »
Swedish Bible (SV1917)
Uppenbarelseboken 3 (SV1917) »
Ukrainian Bible (UKR)
Об'явлення 3 (UKR) »
Hungarian Bible (KAR)
Jelenések 3 (KAR) »
Bulgarian Bible (BULG)
Откровение 3 (BULG) »
Norwegian Bible (NORSK)
Åpenbaringen 3 (NORSK) »

ಪ್ರಕಟಣೆ (KANIRV) Chapter Selection

KANIRV Book Selection List