ರೋಮಾಪುರದವರಿಗೆ Chapter 11 KANIRV Bible Verse Images

ರೋಮಾಪುರದವರಿಗೆ 11 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ರೋಮಾಪುರದವರಿಗೆ 11 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ರೋಮಾಪುರದವರಿಗೆ 11:1 (KANIRV)
Square Portrait Landscape 4K UHD
ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ರೋಮಾಪುರದವರಿಗೆ 11:2 (KANIRV)
Square Portrait Landscape 4K UHD
ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?

ರೋಮಾಪುರದವರಿಗೆ 11:3 (KANIRV)
Square Portrait Landscape 4K UHD
ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.

ರೋಮಾಪುರದವರಿಗೆ 11:4 (KANIRV)
Square Portrait Landscape 4K UHD
ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.

ರೋಮಾಪುರದವರಿಗೆ 11:5 (KANIRV)
Square Portrait Landscape 4K UHD
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.

ರೋಮಾಪುರದವರಿಗೆ 11:6 (KANIRV)
Square Portrait Landscape 4K UHD
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.

ರೋಮಾಪುರದವರಿಗೆ 11:7 (KANIRV)
Square Portrait Landscape 4K UHD
ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ರೋಮಾಪುರದವರಿಗೆ 11:8 (KANIRV)
Square Portrait Landscape 4K UHD
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.

ರೋಮಾಪುರದವರಿಗೆ 11:9 (KANIRV)
Square Portrait Landscape 4K UHD
ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;

ರೋಮಾಪುರದವರಿಗೆ 11:10 (KANIRV)
Square Portrait Landscape 4K UHD
ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.

ರೋಮಾಪುರದವರಿಗೆ 11:11 (KANIRV)
Square Portrait Landscape 4K UHD
ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.

ರೋಮಾಪುರದವರಿಗೆ 11:12 (KANIRV)
Square Portrait Landscape 4K UHD
ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.

ರೋಮಾಪುರದವರಿಗೆ 11:13 (KANIRV)
Square Portrait Landscape 4K UHD
ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.

ರೋಮಾಪುರದವರಿಗೆ 11:14 (KANIRV)
Square Portrait Landscape 4K UHD
ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

ರೋಮಾಪುರದವರಿಗೆ 11:15 (KANIRV)
Square Portrait Landscape 4K UHD
ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.

ರೋಮಾಪುರದವರಿಗೆ 11:16 (KANIRV)
Square Portrait Landscape 4K UHD
ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.

ರೋಮಾಪುರದವರಿಗೆ 11:17 (KANIRV)
Square Portrait Landscape 4K UHD
ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.

ರೋಮಾಪುರದವರಿಗೆ 11:18 (KANIRV)
Square Portrait Landscape 4K UHD
ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.

ರೋಮಾಪುರದವರಿಗೆ 11:19 (KANIRV)
Square Portrait Landscape 4K UHD
ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.

ರೋಮಾಪುರದವರಿಗೆ 11:20 (KANIRV)
Square Portrait Landscape 4K UHD
ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.

ರೋಮಾಪುರದವರಿಗೆ 11:21 (KANIRV)
Square Portrait Landscape 4K UHD
ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

ರೋಮಾಪುರದವರಿಗೆ 11:22 (KANIRV)
Square Portrait Landscape 4K UHD
ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ರೋಮಾಪುರದವರಿಗೆ 11:23 (KANIRV)
Square Portrait Landscape 4K UHD
ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.

ರೋಮಾಪುರದವರಿಗೆ 11:24 (KANIRV)
Square Portrait Landscape 4K UHD
ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.

ರೋಮಾಪುರದವರಿಗೆ 11:25 (KANIRV)
Square Portrait Landscape 4K UHD
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

ರೋಮಾಪುರದವರಿಗೆ 11:26 (KANIRV)
Square Portrait Landscape 4K UHD
ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.

ರೋಮಾಪುರದವರಿಗೆ 11:27 (KANIRV)
Square Portrait Landscape 4K UHD
ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.

ರೋಮಾಪುರದವರಿಗೆ 11:28 (KANIRV)
Square Portrait Landscape 4K UHD
ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.

ರೋಮಾಪುರದವರಿಗೆ 11:29 (KANIRV)
Square Portrait Landscape 4K UHD
ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.

ರೋಮಾಪುರದವರಿಗೆ 11:30 (KANIRV)
Square Portrait Landscape 4K UHD
ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,

ರೋಮಾಪುರದವರಿಗೆ 11:31 (KANIRV)
Square Portrait Landscape 4K UHD
ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.

ರೋಮಾಪುರದವರಿಗೆ 11:32 (KANIRV)
Square Portrait Landscape 4K UHD
ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.

ರೋಮಾಪುರದವರಿಗೆ 11:33 (KANIRV)
Square Portrait Landscape 4K UHD
ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.

ರೋಮಾಪುರದವರಿಗೆ 11:34 (KANIRV)
Square Portrait Landscape 4K UHD
“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?

ರೋಮಾಪುರದವರಿಗೆ 11:35 (KANIRV)
Square Portrait Landscape 4K UHD
ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”

ರೋಮಾಪುರದವರಿಗೆ 11:36 (KANIRV)
Square Portrait Landscape 4K UHD
ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.

Available Bible Translations

American Standard Version
Romans 11 (ASV) »
King James Version
Romans 11 (KJV) »
GOD’S WORD® (GW)
Romans 11 (GW) »
World English Bible
Romans 11 (WEB) »
Louis Segond 1910
Romains 11 (LSG) »
Luther Bibel 1912
Römer 11 (LUTH1912) »
इंडियन रिवाइज्ड वर्जन - हिंदी
रोमियों 11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 11 (PANIRV) »
ভারতীয় সংশোধিত সংস্করণ - বাংলা
ৰোমীয়া 11 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 11 (TAMIRV) »
इंडियन रिवाइज्ड वर्जन - मराठी
रोमकरांस 11 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 11 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 11 (GUJIRV) »
الكتاب المقدس باللغة العربية، فان دايك
رُومِيَةَ 11 (AVD) »
Bíblia Sagrada Português
Romanos 11 (BSL) »
Kinh Thánh: Tiếng Việt
Rô-ma 11 (VIE) »
Reina Valera Antigua
Romanos 11 (RVA) »
La Sacra Bibbia
Romani 11 (RIV) »
圣 经 简体中文和合本
罗 马 书 11 (CUVS) »
聖 經 繁體中文和合本
羅 馬 書 11 (CUVT) »
Bibla e Shenjtë
Romakëve 11 (ALB) »
Svenska Bibeln 1917
Romarbrevet 11 (SV1917) »
Библия на русском
Римлянам 11 (RUSV) »
Українська Біблія
римлян 11 (UKR) »
Szent Biblia - Magyar
Róma 11 (KAR) »
Българска Библия
Римляни 11 (BULG) »
Det Norsk Bibel
Romerne 11 (NORSK) »
Biblia Takatifu
Warumi 11 (SWHULB) »
Kitaabka Quduuska Ah
Rooma 11 (SOM) »
De Heilige Schrift
Romeinen 11 (NLD) »
Dansk Bibel 1871
Romerne 11 (DA1871) »

ರೋಮಾಪುರದವರಿಗೆ (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List