ರೋಮಾಪುರದವರಿಗೆ Chapter 3 KANIRV Bible Verse Images

ರೋಮಾಪುರದವರಿಗೆ 3 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ರೋಮಾಪುರದವರಿಗೆ 3 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ರೋಮಾಪುರದವರಿಗೆ 3:1 (KANIRV)
Square Portrait Landscape 4K UHD
ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?

ರೋಮಾಪುರದವರಿಗೆ 3:2 (KANIRV)
Square Portrait Landscape 4K UHD
ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.

ರೋಮಾಪುರದವರಿಗೆ 3:3 (KANIRV)
Square Portrait Landscape 4K UHD
ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.

ರೋಮಾಪುರದವರಿಗೆ 3:4 (KANIRV)
Square Portrait Landscape 4K UHD
ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

ರೋಮಾಪುರದವರಿಗೆ 3:5 (KANIRV)
Square Portrait Landscape 4K UHD
ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.

ರೋಮಾಪುರದವರಿಗೆ 3:6 (KANIRV)
Square Portrait Landscape 4K UHD
ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?

ರೋಮಾಪುರದವರಿಗೆ 3:7 (KANIRV)
Square Portrait Landscape 4K UHD
ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?

ರೋಮಾಪುರದವರಿಗೆ 3:8 (KANIRV)
Square Portrait Landscape 4K UHD
“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.

ರೋಮಾಪುರದವರಿಗೆ 3:9 (KANIRV)
Square Portrait Landscape 4K UHD
ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.

ರೋಮಾಪುರದವರಿಗೆ 3:10 (KANIRV)
Square Portrait Landscape 4K UHD
ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;

ರೋಮಾಪುರದವರಿಗೆ 3:11 (KANIRV)
Square Portrait Landscape 4K UHD
ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.

ರೋಮಾಪುರದವರಿಗೆ 3:12 (KANIRV)
Square Portrait Landscape 4K UHD
ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.

ರೋಮಾಪುರದವರಿಗೆ 3:13 (KANIRV)
Square Portrait Landscape 4K UHD
ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.

ರೋಮಾಪುರದವರಿಗೆ 3:14 (KANIRV)
Square Portrait Landscape 4K UHD
ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.

ರೋಮಾಪುರದವರಿಗೆ 3:15 (KANIRV)
Square Portrait Landscape 4K UHD
ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.

ರೋಮಾಪುರದವರಿಗೆ 3:16 (KANIRV)
Square Portrait Landscape 4K UHD
ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.

ರೋಮಾಪುರದವರಿಗೆ 3:17 (KANIRV)
Square Portrait Landscape 4K UHD
ಸಮಾಧಾನದ ಮಾರ್ಗವನ್ನೇ ಅರಿಯರು.

ರೋಮಾಪುರದವರಿಗೆ 3:18 (KANIRV)
Square Portrait Landscape 4K UHD
ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.

ರೋಮಾಪುರದವರಿಗೆ 3:19 (KANIRV)
Square Portrait Landscape 4K UHD
ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

ರೋಮಾಪುರದವರಿಗೆ 3:20 (KANIRV)
Square Portrait Landscape 4K UHD
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.

ರೋಮಾಪುರದವರಿಗೆ 3:21 (KANIRV)
Square Portrait Landscape 4K UHD
ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.

ರೋಮಾಪುರದವರಿಗೆ 3:22 (KANIRV)
Square Portrait Landscape 4K UHD
ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.

ರೋಮಾಪುರದವರಿಗೆ 3:23 (KANIRV)
Square Portrait Landscape 4K UHD
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.

ರೋಮಾಪುರದವರಿಗೆ 3:24 (KANIRV)
Square Portrait Landscape 4K UHD
ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.

ರೋಮಾಪುರದವರಿಗೆ 3:25 (KANIRV)
Square Portrait Landscape 4K UHD
ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

ರೋಮಾಪುರದವರಿಗೆ 3:26 (KANIRV)
Square Portrait Landscape 4K UHD
ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.

ರೋಮಾಪುರದವರಿಗೆ 3:27 (KANIRV)
Square Portrait Landscape 4K UHD
ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.

ರೋಮಾಪುರದವರಿಗೆ 3:28 (KANIRV)
Square Portrait Landscape 4K UHD
ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ

ರೋಮಾಪುರದವರಿಗೆ 3:29 (KANIRV)
Square Portrait Landscape 4K UHD
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.

ರೋಮಾಪುರದವರಿಗೆ 3:30 (KANIRV)
Square Portrait Landscape 4K UHD
ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.

ರೋಮಾಪುರದವರಿಗೆ 3:31 (KANIRV)
Square Portrait Landscape 4K UHD
ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.

Available Bible Translations

American Standard Version
Romans 3 (ASV) »
King James Version
Romans 3 (KJV) »
GOD’S WORD® (GW)
Romans 3 (GW) »
Berean Bible
Romans 3 (BSB) »
World English Bible
Romans 3 (WEB) »
Louis Segond 1910
Romains 3 (LSG) »
Luther Bibel 1912
Römer 3 (LUTH1912) »
इंडियन रिवाइज्ड वर्जन - हिंदी
रोमियों 3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 3 (PANIRV) »
ভারতীয় সংশোধিত সংস্করণ - বাংলা
ৰোমীয়া 3 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 3 (TAMIRV) »
इंडियन रिवाइज्ड वर्जन - मराठी
रोमकरांस 3 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 3 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 3 (GUJIRV) »
الكتاب المقدس باللغة العربية، فان دايك
رُومِيَةَ 3 (AVD) »
Bíblia Sagrada Português
Romanos 3 (BSL) »
Kinh Thánh: Tiếng Việt
Rô-ma 3 (VIE) »
Reina Valera Antigua
Romanos 3 (RVA) »
La Sacra Bibbia
Romani 3 (RIV) »
圣 经 简体中文和合本
罗 马 书 3 (CUVS) »
聖 經 繁體中文和合本
羅 馬 書 3 (CUVT) »
Bibla e Shenjtë
Romakëve 3 (ALB) »
Svenska Bibeln 1917
Romarbrevet 3 (SV1917) »
Библия на русском
Римлянам 3 (RUSV) »
Українська Біблія
римлян 3 (UKR) »
Szent Biblia - Magyar
Róma 3 (KAR) »
Българска Библия
Римляни 3 (BULG) »
Det Norsk Bibel
Romerne 3 (NORSK) »
Biblia Takatifu
Warumi 3 (SWHULB) »
Kitaabka Quduuska Ah
Rooma 3 (SOM) »
De Heilige Schrift
Romeinen 3 (NLD) »
Dansk Bibel 1871
Romerne 3 (DA1871) »

ರೋಮಾಪುರದವರಿಗೆ (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List